ಹಾವೇರಿ | ಅಂಗನವಾಡಿ, ಪ್ರಾಥಮಿಕ ಶಾಲೆಗಳಲ್ಲಿ ಅವೈಜ್ಞಾನಿಕ ರ‌್ಯಾಂಪ್‌ ನಿರ್ಮಾಣ: ಕರವೇ ಸ್ವಾಭಿಮಾನಿ ಬಣ ಆರೋಪ

Date:

ಶಾಲೆಗಳಲ್ಲಿ(ಚುನಾವಣೆ ಮತಗಟ್ಟೆ) ಕೇಂದ್ರಗಳ ಮುಂಭಾಗದಲ್ಲಿ ನಿರ್ಮಿಸಲಾಗಿರುವ ryampaಗಳು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಕೂಡಲೇ ಇವುಗಳನ್ನು ದುರಸ್ತಿ ಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಘಟಕದಿಂದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ ಪಂಚಾಯಿತಿ ಮುಖ್ಯಾಧಿಕಾರಿ ಸಂತೋಷ ಚಂದ್ರಕೇರ ಮತ್ತು ತಹಸೀಲ್ದಾ‌ರ್ ಕಚೇರಿಯ ಶಿರಸ್ತೆದಾರ ಜಗತಾಫ್ ಅವರಿಗೆ ಮನವೆ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠ ಮತ್ತು ಉಪಾಧ್ಯಕ್ಷ ಯೂಸೂಫ್ ಸೈಕಲ್‌ಗಾರ ಮಾತನಾಡಿ, “ರಟ್ಟಿಹಳ್ಳಿ ಪಟ್ಟಣದಲ್ಲಿ  ಸರಿ ಸುಮಾರು 10-12 ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಯಲ್ಲಿರುವ ಚುನಾವಣಾ ಮತಗಟ್ಟೆ ಹೆಸರಿನಲ್ಲಿ ನಿರ್ಮಿಸಲಾಗಿರುವ ರಾಂಪ್‌ಗಳು ಸಂಪೂರ್ಣವಾಗಿ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಇದರಿಂದ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಯ ಮಕ್ಕಳಿಗೆ, ಶಿಕ್ಷಕರುಗಳಿಗೆ ವಿಶೇಷವಾಗಿ ಗರ್ಭೀಣಿಯರು, ಬಾಣಂತಿಯರು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಚುನಾವಣಾ ಮತಗಟ್ಟೆಗೆಂದು ಶಾಲೆಯಲ್ಲಿ ನಿರ್ಮಿಸಿರುವ ರ‌್ಯಾಂಪ್‌ಗಳು ವೃದ್ಧರಿಗೆ ವಿಶೇಷ ಚೇತನರಿಗೆ ಅನುಕೂಲವಾಗುವ ಬದಲು ಸಮಸ್ಯೆಯಾಗುವಂತೆ ಕಂಡು ಬರುತ್ತಿವೆ. ಕೂಡಲೇ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ತೊಂದರೆಯಾಗುವಂತಿರುವ ರ‌್ಯಾಂಪ್‌ಗಳನ್ನು ತೆರವುಗೊಳಿಸಿ ಪುನಃ ಅನುಕೂಲವಾಗುವಂತೆ ರ‌್ಯಾಂಪ್‌ಗಳನ್ನು ನಿರ್ಮಿಸಬೇಕು. ಇಲ್ಲದೇ ಇದ್ದರೆ ಕರವೇ ಯಿಂದ ಕ್ಯಾಂಪ್‌ಗಳನ್ನು ತೆರವುಗೊಳಿಸುವುದಕ್ಕೆ ಮುಂದಾಗಬೇಕಾಗುತ್ತದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಡಿ.ವಾಯ್.ಎಫ್.ಐ ಮನವಿ

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣ ಮಹಿಳಾ ಅಧ್ಯಕ್ಷರು ಗೀತಾಬಾಯಿ ಲಮಾಣಿ, ಮುಖಂಡರು ರಾಮಚಂದ್ರಪ್ಪ ಹಿಂಡಸಗಟ್ಟಿ, ಖಲಂದರ ಎತ್ತಿನಹಳ್ಳಿ,, ಪ್ರಕಾಶ ಡಂಬರ್, ರಾಜೇಸಾಬ ಮಾನೇಗಾರ, ಈರಪ್ಪ ಅಂಗಡಿ, ಶೇಖಪ್ಪ ಕಟ್ಟೇಕಾರ, ಆಶೀಫ್ ಬಣಕಾರ, ಶಫಿ ಹಾವೇರಿ, ಅಲತಾಫ್ ಜಂಬೂರ, ಇರ್ಪಾನ್ ಪುರದಕೇರಿ, ತೌಶೀಫ್ ಸೈಕಲ್‌ಗಾರ, ನೂರ್ ಮಕಂದಾರ, ಜ್ಯೋತಿ ಅಂಸಾಲಿ, ಅನೀಲ್ ಬಾವರ್‌ಕ‌ರ್, ಯಾಸೀನ್ ರಟ್ಟಿಹಳ್ಳಿ, ಹೆಡಿಯಾಲ ಸೇರಿದಂತೆ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...