ಹಾವೇರಿ | ಕಲುಷಿತ ಆಹಾರ ಸೇವನೆ; ಹಾಸ್ಟೆಲ್ ವಿದ್ಯಾರ್ಥಿಗಳ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Date:

19 ವಿದ್ಯಾರ್ಥಿನಿಯರು ಖಾಸಗಿ ಪಿ.ಜಿ.ಸೆಂಟರ್ ನ ಕಲುಷಿತ ಆಹಾರ ಸೇವನೆಯಿಂದ ತೀವ್ರ ಅಸ್ವಸ್ಥಗೊಂಡು ವೀರಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗಳನ್ನು ಎಸ್ಎಫ್ಐ ನಿಯೋಗ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಮಾಹಿತಿ ಪಡೆದುಕೊಂಡು, ವೈದ್ಯರ ಹಾಗೂ ಪೋಷಕರ ಜೊತೆಗೆ ಚರ್ಚಿಸಿದೆ.

- Advertisement -

ಹಾವೇರಿ ಜಿಲ್ಲೆಯ ದೇವಗಿರಿ ಗ್ರಾಮದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಖಾಸಗಿ ಪಿ.ಜಿ.ಸೆಂಟರ್ ಆಹಾರ ಸೇವಿಸಿ ಅಸ್ವಸ್ಥ ಆಗಿರುವ ಘಟನೆ ಶನಿವಾರ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

“ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ವಿದ್ಯಾರ್ಥಿಗಳು ಆರೋಗ್ಯದಲ್ಲಿ ಏರುಪೇರು ತೀವ್ರಗೊಂಡ ನಂತರ ಒಬ್ಬೊಬ್ಬರಾಗಿ ಆಟೋದಲ್ಲಿ ಹೋಗಿ ವೀರಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಈ ವರೆಗೂ ಯಾವುದೇ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಆಹಾರ ಇಲಾಖೆಯ ಅಧಿಕಾರಿಗಳು, ಸಂಬಂಧಿತ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಣೆ ಮಾಡದ ನಿರ್ಲಕ್ಷ್ಯವನ್ನು” ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ.

“ಕಲುಷಿತ ಆಹಾರದಿಂದ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದಾರೆ ಅವರಿಗೆ ಸೂಕ್ತ ಚಿಕಿತ್ಸೆ ಮುಂದುವರೆಯಬೇಕು. 19 ವಿದ್ಯಾರ್ಥಿನಿಯರು ಪೈಕಿ 3-4 ವಿದ್ಯಾರ್ಥಿನಿಯರಿಗೆ ಅತ್ಯಂತ ಆರೋಗ್ಯದ ಸಮಸ್ಯೆ ಇದೆ ಅವರಿಗೆ ಉನ್ನತ ಚಿಕಿತ್ಸೆ ಒದಗಿಸಬೇಕು. ಒಟ್ಟಾರೆ ಘಟನೆಯ ಕುರಿತು ಸ್ವಯಂ ದೂರ ದಾಖಲು ಮಾಡಿಕೊಂಡು ಸಮಗ್ರ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದೆ.

“ದೂರದ ಜಿಲ್ಲೆಯಿಂದ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಜಿಲ್ಲೆಗೆ ಬಂದ ವಿದ್ಯಾರ್ಥಿಗಳಿಗೆ ಪೂರಕ ವಾತಾವರಣ ಕಲ್ಪಿಸಿಕೊಡುವುದು ಸರ್ಕಾರದ ಕರ್ತವ್ಯವಾಗಿದೆ ಆದರೆ ಸರ್ಕಾರಕ್ಕೆ ಅನೇಕ ಬಾರಿ ಹೋರಾಟ ಮಾಡಿ ಮನವಿ ಪತ್ರ ಕೊಟ್ಟರು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಿಕೊಡುವಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ವಿಫಲವಾಗಿವೆ. ಸರ್ಕಾರಿ ಹಾಸ್ಟೆಲ್ ಸೌಲಭ್ಯ ಸಿಗದೆ ಇರುವ ವಿದ್ಯಾರ್ಥಿಗಳು ಖಾಸಗಿ ವಸತಿ ನಿಲಯಗಳು ಹಾಗೂ ಬಾಡಿಗೆ ರೂಮ್ ಗಳ ಮೇಲೆ ಅವಲಂಬನೆ ಆಗಿದ್ದಾರೆ” ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಹೇಳಿದರು.

“ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಬಾಡಿಗೆ ಬಿಲ್ಡಿಂಗ್ ನಲ್ಲಿ ನಡೆಯುತ್ತಿದ ವಸತಿ ನಿಲಯಕ್ಕೆ ಅಡ್ವಾನ್ಸ್ 5.000 ರೂ ಕಟ್ಟಿಸಿಕೊಂಡು ಪ್ರತಿ ತಿಂಗಳು 2.500 ರೂ ಮೆಸ್ ಬಿಲ್ ಪಾವತಿ ಮಾಡಿಸಿಕೊಂಡು ಬರುವ ಪದ್ಧತಿ ನಡೆಯುತ್ತಿದೆ. ಇದು ಬಡ ವಿದ್ಯಾರ್ಥಿಗಳಿಗೆ ಭಾರಿ ಹೊರೆಯಾಗುತ್ತಿದ್ದು ಹಣ ಸುಲಿಯುವ ಹುನ್ನಾರಕ್ಕೆ ಕಡಿವಾಣ ಹಾಕಿ. ಕಾಲೇಜಿನ ಹಿಂದುಗಡೆ ಅನೇಕ ಕೊಠಡಿಗಳು ಖಾಲಿ ಬಿದ್ದುರು ಖಾಸಗಿ ಪಿ.ಜಿ‌.ಸೆಂಟರ್ ಗಳಿಗೆ ಯಾಕೆ? ಲಕ್ಷಾಂತರ ರೂಪಾಯಿ ಬಾಡಿಗೆ ಕೊಡಬೇಕು? ಯಾರ? ಜೇಬು ತುಂಬಿಸಲು ಖಾಸಗಿ ಬಿಲ್ಡಿಂಗ್ ನಲ್ಲಿ ವಿದ್ಯಾರ್ಥಿನಿಯರನ್ನು ಇರಿಸಲಾಗಿತ್ತು? ಇದರ ಸಮಗ್ರ ತನಿಖೆ ನಡೆಯಬೇಕು” ಎಂದರು.

“ಕೂಡಲೇ ಕಾಲೇಜಿನ ಹಿಂದುಗಡೆ ಇರುವ ಬೃಹತ್ ಕಟ್ಟಡಗಳಲ್ಲಿಯೇ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳನ್ನು ತೆರೆಯಬೇಕು. ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು. ಬಸ್ಸಿನ ಬೇಡಿಕೆ ಹೆಚ್ಚಾಗಿದ್ದು ಕೂಡಲೇ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿಯಾಗಿ ಕನಿಷ್ಟ 20 ಬಸ್ ಗಳನ್ನು ಬಿಡಬೇಕು. ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ ಘಟನೆಯಿಂದ ಎಚ್ಚೆತುಕೊಂಡು ನಿಯಮಗಳನ್ನು ಗಾಳಿಗೆ ತೂರಿದ ಅನಧಿಕೃತ ಖಾಸಗಿ ಪಿ.ಜಿ.ಸೆಂಟರ್ ಗಳನ್ನು ಪರಿಶೀಲನೆ ನಡೆಸಬೇಕು. ಶಿಸ್ತು ಕ್ರಮ ಜರುಗಿಸಬೇಕು”ಎಂದು ಆಗ್ರಹಿಸಿದರು.

ಎಸ್ಎಫ್ಐ ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಹಾಸ್ಟೆಲ್ ವಿದ್ಯಾರ್ಥಿಗಳ ಉಪಸಮಿತಿ ರಾಜ್ಯ ಸಂಚಾಲಕ ಅರುಣ್ ನಾಗವತ್, ಕಾಲೇಜ್ ಘಟಕ ಅಧ್ಯಕ್ಷೆ ಚೈತ್ರಾ ಕೊರವರ, ಮುಖಂಡರಾದ ಸಿದ್ದು ಹೆಚ್, ದಯನಾಂದ ಎಸ್ ಕೆ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...