ಹಾವೇರಿ | ರೈತರ, ಬಡವರ ಸಂಕಷ್ಟಕ್ಕೆ ಸ್ಪಂದಿಸಲು ಸಹಕಾರ ಕ್ಷೇತ್ರ ಜನ್ಮ ತಾಳಿತು: ಶಾಸಕ ಶ್ರೀನಿವಾಸ ಮಾನೆ

Date:

Advertisements

“ರೈತರು ಮತ್ತು ಬಡವರು ಶ್ರೀಮಂತರ ಎದುರು ತಲೆ ಬಾಗಿ ನಿಲ್ಲುವಂಥ ಸ್ಥಿತಿ ಹಿಂದೆ ಇತ್ತು. ಸಾಲ ಮರುಪಾವತಿ ಮಾಡದಿದ್ದರೆ ಶ್ರೀಮಂತರ ಮನೆಗಳಲ್ಲಿ ಜೀತದಾಳುಗಳಾಗಿ ತಲೆ ತಲಾಂತರದಿಂದ ಕೆಲಸ ಮಾಡಬೇಕಿತ್ತು. ಇದನ್ನು ತಪ್ಪಿಸಲು ಕಣಗಿನಹಾಳದ ಸಿದ್ಧನಗೌಡ ಪಾಟೀಲ ಅವರು ಸಹಕಾರಿ ಸಂಘ ಸ್ಥಾಪಿಸಿದರು. ಸಹಕಾರದ ಮೂಲಕ ನಮ್ಮ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ” ಎಂದು ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಆಡೂರು ಗ್ರಾಮದ ಮಾಲತೇಶ ದೇವಸ್ಥಾನದ ಆವರಣದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಸಂಘದ ಉಗ್ರಾಣ ನಿರ್ಮಾಣಕ್ಕೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ 10 ಲಕ್ಷ ರೂ. ಅನುದಾನ ನೀಡುವ ಭರವಸೆ ನೀಡಿದರು. ಆಡೂರಿನ ಸಂಘ ನೂರು ವರ್ಷ ಪೂರೈಸಿರುವುದು ಖುಷಿಯ ಸಂಗತಿ, ಸಂಘದ ಬೆಳವಣಿಗೆಯ ವಿಚಾರದಲ್ಲಿ ರಾಜಕಾರಣ ಮಾಡದೇ ಕೈ ಜೋಡಿಸಿ, ಶ್ರಮ ವಹಿಸಿರುವ ಗ್ರಾಮಸ್ಥರು ಅಭಿನಂದನೆಗೆ ಅರ್ಹರು” ಎಂದರು.

Advertisements

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಹಾವೇರಿಯ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, “ಗ್ರಾಮೀಣ ಜನರು ಸ್ವಾವಲಂಬನೆಯತ್ತ ಹೆಜ್ಜೆ ಹಾಕಲು ಮತ್ತು ಉಳಿತಾಯ ಮನೋಭಾವ ಹೆಚ್ಚಿಸಿಕೊಳ್ಳಲು ಸಹಕಾರ ಕ್ಷೇತ್ರ ವರದಾನವಾಗಿದೆ. ಅನಗತ್ಯ ಹಸಕ್ಷೇಪ ಮತ್ತು ಮೇಲಾಟಗಳಿಂದ ಸಹಕಾರ ಕೇತಕ್ಕೆ ತೀವ್ರ ಹಿನ್ನಡ ಉಂಟಾಗುತ್ತಿದೆ” ಎಂದರು.

ಜಿಪಂ ಮಾಜಿ ಸದಸ್ಯ ಎನ್.ಬಿ.ಪೂಜಾರ, ತಾಪಂ ಮಾಜಿ ಉಪಾಧ್ಯಕ್ಷ ಸಿದ್ದಲಿಂಗಪ್ಪ ಶಂಕರಿ ಕೊಪ್ಪ ಮಾತನಾಡಿ, “ಉತ್ತಮ ಸೇವೆಗಾಗಿ ಸಂಘ ರಾಜ್ಯಮಟ್ಟದ ಹತ್ತು, ಹಲವು ಪ್ರಶಸ್ತಿಗಳಿಗೆ ಭಾಜನವಾಗಿದೆ. ಕೂಡಿ ಬಿದ್ದ ಹಾನಿಯನ್ನು ಕಳೆದು ಲಾಭದತ್ತ ಮುಖ ಮಾಡಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಕಾರಣ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಎಸ್ಸೆಸ್ಸೆಲ್ಸಿ ಫಲಿತಾಂಶ : ಔರಾದ್‌ ತಾಲ್ಲೂಕಿಗೆ ಆದರ್ಶ‌ ಟಾಪರ್

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ದೊಡ್ಡಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಹಾವೇರಿಯ ಮಾಜಿ ಶಾಸಕ ಶಿವರಾಜ ಸಜ್ಜನರ, ಕೆಎಂಎಫ್ ಅಧ್ಯಕ್ಷ ಮಂಜನಗೌಡ ಪಾಟೀಲ, ಕೆಸಿಸಿ ಬ್ಯಾಂಕ್ ನಿರ್ದೇಶಕ ಸದಾನಂದ. ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ಮಹೇಶ ಬಣಕಾರ, ಟಿಎಪಿಸಿಎಂಎಸ್ ಅಧ್ಯಕ್ಷ ವಿಜಯೇಂದ್ರ ಕನವಳ್ಳಿ, ಗ್ರಾಪಂ ಅಧ್ಯಕ್ಷ ಮಾಲತೇಶ ಬಾರ್ಕಿ, ಡಾ. ಕೆ. ಎಸ್. ಕುಲಕರ್ಣಿ, ಶಿವಬಸಪ್ಪ ಪೂಜಾರ, ಭರಮಣ್ಣ ಶಿವೂರ. ಶಂಕರಗೌಡ ಸುಂಕದ, ಪುಟ್ಟಪ ನರೇಗಲ್, ಮಹದೇವಪ್ಪ ಬಾಗಸರ, ಕವಿತಾ ಕಡೇರ, ಗುಡ್ಡಪ ಮನ್ನಂಗಿ ಸೇರಿದಂತೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X