ಹಾವೇರಿ | ಮಳೆಯಿಂದ ಬೆಳೆಹಾನಿ; ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ

Date:

ಮಳೆಯಿಂದ ಬೆಳೆಹಾನಿಯಾಗಿದ್ದು, ರೈತರಿಗೆ ಸೂಕ್ತ ಬೆಳೆಪರಿಹಾರ ನೀಡುವಂತೆ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಎಕ್ಸ್ ಖಾತೆಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, “ಹಾವೇರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಒಂದು ಮಗು ನೀರಿನಲ್ಲಿ ಕೊಚ್ಚಿಹೋಗಿ ಸಾವಿಗೀಡಾಗಿದೆ. ಎಲ್ಲ ತಾಲೂಕುಗಳಲ್ಲಿ ಬೆಳೆಹಾನಿಯಾಗಿದೆ. ರಾಜ್ಯ ಸರ್ಕಾರ ಕೂಡಲೇ ಬೆಳೆಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು” ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

“ನಿರಂತರ ಮಳೆಯಿಂದಾಗಿ ಮನೆಗಳು ಬಿದ್ದಿದ್ದು, ಮನೆ ಕಳೆದುಕೊಂಡವರಿಗೆ ಕೂಡಲೇ ಪರಿಹಾರದ ಹಣ ಬಿಡುಗಡೆ ಮಾಡಬೇಕು. ಮನೆ ಕಳೆದುಕೊಂಡವರಿಗೆ ಸಾಂತ್ವನ ಕೇಂದ್ರ ತೆರೆದು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಹಲವು ಗ್ರಾಮಗಳ ಸಂಪರ್ಕ ರಸ್ತೆ ಕಳೆದು ಹೋಗಿದೆ. ಕೂಡಲೇ ಸಂಪರ್ಕ ಕಲ್ಪಿಸುವ ಕೆಲಸವನ್ನು ಆರ್‌ಡಿಪಿಆರ್ ಮತ್ತು ಪಿಡಬ್ಲ್ಯೂಡಿ ಇಲಾಖೆಗೆ ಸೂಚನೆ ನೀಡಬೆಕು” ಎಂದು ತಿಳಿಸಿದ್ದಾರೆ.

“ನಾನು ಈಗಾಗಲೇ ಹಾವೇರಿ ಜಿಲ್ಲಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಅವರು ಕೂಡಲೇ ಕ್ರಮ ಕೈಗೊಳ್ಳುವ ವಿಶ್ವಾಸವಿದೆ. ಬರಗಾಲ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರಿಗೆ ಯಾವುದೇ ಪರಿಹಾರ ನೀಡಿಲ್ಲ. ಈಗಲೂ ಅದೇ ರೀತಿ ಮಾಡದೆ ರೈತರಿಗೆ ಕೂಡಲೇ ಬೆಳೆಹಾನಿ ಪರಿಹಾರ ಒದಗಿಸಬೇಕು. ರೈತರ ಹಿತ ಕಾಯಲು ರಾಜ್ಯ ಸರ್ಕಾರ ಕೇಂದ್ರದತ್ತ ನೋಡದೇ ಮೊದಲು ಪರಿಹಾರ ನೀಡಬೇಕು. ನಂತರ ಕೇಂದ್ರ ಸರ್ಕಾರದಿಂದ ಪರಿಹಾರ ಪಡೆಯಲು ಅವಕಾಶವಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಅಧಿಕ ಮಳೆ ಹಿನ್ನಲೆ ಸಹಾಯವಾಣಿ ಕೇಂದ್ರ ಪ್ರಾರಂಭ : ತಹಶೀಲ್ದಾರ್ ಬಿ.ಆರತಿ.

“ರಾಜ್ಯದ ಮುಖ್ಯಮಂತ್ರಿಗಳು ಕೂಡಲೇ ಹಾವೇರಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಬಗ್ಗೆ ಗಮನಹರಿಸಿ ಜಿಲ್ಲಾಧಿಕಾರಿ ಬಳಿ ಇರುವ ರಾಷ್ಟ್ರೀಯ ವಿಪತ್ತು ನಿರ್ವಹಣ ನಿಧಿಯಿಂದ ಕೂಡಲೇ ಹಣ ಬಿಡುಗಡೆಗೆ ಆದೇಶ ಮಾಡಬೇಕು. ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಬಾಲಕ ನಿವೇದನ್ ಕುಟುಂಬ ವರ್ಗಕ್ಕೆ ಪರಿಹಾರ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಬೇಕು. ಈಗಾಲೇ ಮುಂಗಾರು ಕಳೆದುಕೊಂಡ ರೈತರಿಗೆ ಸಮಯ ವ್ಯರ್ಥ ಮಾಡದೇ ಪರಿಹಾರ ಕೈಗೊಳ್ಳಬೇಕು” ಎಂದು ಆಗ್ರಹ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ...