“ಡಿ.ದೇವರಾಜ ಅರಸು ಅವರು ರಾಜ್ಯ ಕಂಡ ಧೀಮಂತ ನಾಯಕರಾಗಿದ್ದು, ಅವರ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾವೇರಿ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಡಿ.ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಆಗಸ್ಟ್ 20 ರಂದು ಬೆಳಗ್ಗೆ 9 ಗಂಟೆಗೆ ಹಾವೇರಿ ನಗರದ ಶ್ರೀ ಪುರಸಿದ್ದೇಶ್ವರ ದೇವಸ್ಥಾನದಿಂದ ಡಿ.ದೇವರಾಜ ಅರಸು ಅವರ ಭಾವಚಿತ್ರ ಮೆರವಣಿಗೆ ಹಾಗೂ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಗುರುಭವನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲು ನಿರ್ಣಯಿಸಲಾಯಿತು.
ಡಿ.ದೇವರಾಜ ಅರಸು ಅವರ ಕುರಿತು ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಭಾಷಣ, ಪ್ರಬಂಧ ಸ್ಪರ್ಧೆ ಆಯೋಜಿಸಲು, ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲು ತೀರ್ಮಾನಿಸಲಾಯಿತು.
ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಯಶಸ್ವಿಯಾಗಿ ಆಚರಣೆ ಮಾಡಬೇಕು. ಮೆರವಣಿಗೆ ಉತ್ತಮ ಕಲಾಂತಡಗಳ ನಿಯೋಜನೆಗೆ, ಉಪನ್ಯಾಸಕರ ಆಯ್ಕೆ ಹಾಗೂ ಶಿಷ್ಟಾಚಾರ ಪ್ರಕಾರ ಆಮಂತ್ರಣ ಪತ್ರಿಕೆ ತಯಾರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್. ಸುಬ್ರಾನಾಯ್ಕ ಅವರು ಕಾರ್ಯಕ್ರಮದ ರೂಪ-ರೇಷೆಗಳನ್ನು ವಿವರಿಸಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ವೇತನ ಹೆಚ್ಚಳ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.