ಹಾವೇರಿ | ಸೋಲು ಜೀವನದ ಪಾಠ ಕಲಿಸುತ್ತದೆ: ಶಾಸಕ ಶ್ರೀನಿವಾಸ ಮಾನೆ

Date:

Advertisements

“ಗೆಲುವು, ಯಶಸ್ಸಿನಲ್ಲಿ ಕಲಿಕೆ ಏನೂ ಇಲ್ಲ. ಆದರೆ ಸೋಲು ಜೀವನದ ಪಾಠ ಕಲಿಸುತ್ತದೆ. ಹಿನ್ನಡೆ ಆದರೆ ಆಲೋಚಿಸಲು ಆರಂಭಿಸುತ್ತೇವೆ. ಆಗ ಮಾತ್ರವೇ ನಮಗೆ ಯಶಸ್ಸಿನ ದಾರಿ. ಗೆಲುವಿನ ಮಂತ್ರ ಸಿಗಲಿದೆ” ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ತಿಳವಳ್ಳಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

“ನಮ್ಮ ಮುಂದಿನ ಭವಿಷ್ಯವನ್ನು ವಿದ್ಯಾರ್ಥಿ ಜೀವನವೇ ನಿರ್ಧರಿಸುತ್ತದೆ. ವಿದ್ಯಾರ್ಥಿಗಳು ಪ್ರತಿಕ್ಷಣವನ್ನೂ ಸದ್ಬಳಕೆ ಮಾಡಿಕೊಳ್ಳಬೇಕು. ತಂತ್ರಜ್ಞಾನವನ್ನು ಮನೋರಂಜನೆಗೆ ಮಾತ್ರ ಸೀಮಿತ ಮಾಡಿಕೊಳ್ಳದೇ ಅಧ್ಯಯನಕ್ಕೆ ಬಳಸಿಕೊಳ್ಳಬೇಕು. ಜಗತ್ತಿನ ಆಗು, ಹೋಗುಗಳನ್ನು ಅರಿಯಬೇಕು. ಜ್ಞಾನಾರ್ಜನೆ ಸರಿಯಾದರೆ ಉತ್ತಮ ಭವಿಷ್ಯ ಲಭಿಸಲಿದೆ. ಯಾವುದಕ್ಕೆ ಸಮಯ ಎಷ್ಟು ಕೊಡಬೇಕು ಎನ್ನುವುದನ್ನು ಮೊದಲೇ ನಿರ್ಧರಿಸಿಕೊಳ್ಳಿ, ಸಮಯ ವ್ಯರ್ಥ ಮಾಡಿದರೆ ಸಾಧನೆ ಆಗದು. ನಿಶ್ಚಿತ ಗುರಿಯ ಕಡೆಗೆ ಮುನ್ನುಗ್ಗಿ, ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಿ” ಎಂದು ಕಿವಿಮಾತು ಹೇಳಿದರು

Advertisements

ಮುಖ್ಯ ಅತಿಥಿ ಉಪನ್ಯಾಸಕ ಡಾ.ವಿಶ್ವನಾಥ ಬೋಂದಾಡೆ ಮಾತನಾಡಿ, “ಸಿಕ್ಕ ಅವಕಾಶ, ಸಮಯವನ್ನು ಸದ್ಬಳಕೆ ಮಾಡಿಕೊಂಡು ಯಶಸ್ಸು ಸಾಧಿಸುವುದು ಜಾಣತನ. ವಿದ್ಯಾರ್ಥಿ ಜೀವನದಲ್ಲಿ ಸಮಯ ಹರಣ ಮಾಡಿದರೆ ಭವಿಷ್ಯದಲ್ಲಿ ಪಶ್ಚಾತಾಪ ಪಡಬೇಕಾಗುತ್ತದೆ. ಜಾಗತಿಕ ಪೈಪೋಟಿ ಹೆಚ್ಚಿರುವ ಈ ಸಂದರ್ಭದಲ್ಲಿ ಸಾಮರ್ಥ್ಯ ನಿರೂಪಿಸುವ ಜವಾಬ್ದಾರಿ ಯುವ ಸಮುದಾಯದ ಮೇಲಿದೆ” ಎಂದರು.

ಪ್ರಾಚಾರ್ಯ ಸೀತಾಳದ ಎಸ್. ಎಂ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ರೇಖಾ ಕುರುಬರ, ಮಾಜಿ ಅಧ್ಯಕ್ಷ ಆರೀಫ್ ಲೋಹಾರ, ತಾಪಂ ಮಾಜಿ ಸದಸ್ಯ ಫಯಾಜ್ ಲೋಹಾರ, ಕೆಎಂಎಫ್ ನಿರ್ದೇಶಕ ಚಂದ್ರಪ್ಪ ಜಾಲಗಾರ, ಶಿವಯೋಗಿ ಒಡೆಯರ, ಮಹ್ಮದ್‌ ಫಾರೂಕ್ ಮೂಡಿ, ಬಸವರಾಜ ಒಬಣ್ಣನವರ, ಶೇಕಪ್ಪ ಬಮ್ಮನಹಳ್ಳಿ, ನಾಗರಾಜ ಭೈರೋಜಿಸಮೀವುಲ್ಲಾ ಲೋಹಾರ, ರಾಜೂ ಶೇಷಗಿರಿ, ಗಣೇಶ ಹಳ್ಳೇರ, ಬಸವರಾಜ ಚವ್ಹಾಣ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X