ಹಾವೇರಿ | ಬಸ್‌ ನಿಲ್ಲಿಸದ ಹಾಗೂ ಅಸಭ್ಯವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಹೊರವಲಯದ ಎಸ್.ಆರ್.ಕೆ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ವಸತಿ ನಿಲಯವಿದೆ. ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ಕಾಲೇಜಿಗೆ ಹೋಗಲು ಬಸ್‌ ಅಗತ್ಯವಿದ್ದು, ಎಸ್‌ಆರ್‌ಕೆ ಬಡಾವಣೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲ್ಲಿಸಲು ಸೂಚನೆ ನೀಡಬೇಕು ಮತ್ತು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಸ್‌ಎಫ್‌ಐ ಪ್ರತಿಭಟನೆ ನಡೆಸಿದೆ.

ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರುವ ವಿದ್ಯಾರ್ಥಿನಿಯರು, “ಎಸ್‌ಆರ್‌ಕೆ ಬಡಾವಣೆಯ ಹಾಸ್ಟೆಲ್‌ನಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದಾರೆ. ಅವರು ನಗರದ ವಿವಿಧ ಕಾಲೇಜುಗಳಿಗೆ ಪ್ರತಿನಿತ್ಯ ತೆರಳಲು ಬಸ್‌ಗಳನ್ನು ಅವಲಂಬಿಸಿದ್ದಾರೆ. ಆದರೆ, ಕೆಎಸ್‌ಆರ್‌ಟಿಸಿ ಬಸ್‌ಗಳು ವಿದ್ಯಾರ್ಥಿನಿಯರನ್ನು ನಗರದ ಕೇಂದ್ರ ಬಸ್ ನಿಲ್ದಾಣದಿಂದ ಹತ್ತಿಸಿಕೊಂಡು ವಸತಿ ನಿಲಯದ ಬಳಿ ನಿಲ್ಲಿಸದೆ, 8 ಕಿ.ಮೀ ದೂರದ ಹಲಗೇರಿ ಗ್ರಾಮದಲ್ಲಿ ಇಳಿಸುತ್ತಾರೆ. ಇಲ್ಲವೇ ನಡು ರಸ್ತೆಯಲ್ಲಿ ಇಳಿಸಿ ಹೋಗುತ್ತಾರೆ. ಈ ರೀತಿಯ ಅಮಾನವೀಯವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಹಲಗೇರಿ ಮಾರ್ಗವಾಗಿ ತೆರಳುವ ಶಿಕಾರಿಪುರ, ರಟ್ಟಿಹಳ್ಳಿ, ಮಾಸೂರ ಹಿರೆಕೇರೂರ, ಅಂತರವಳ್ಳಿ ಸೇರಿದಂತೆ ಎಲ್ಲ ಬಸ್‌ಗಳು ಕಡ್ಡಾಯವಾಗಿ ಎಸ್‌ಆರ್‌ಕೆ ಬಡಾವಣೆಯಲ್ಲಿ ನಿಲ್ಲಿಸಲು ಆದೇಶ ಹೊರಡಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಎಲ್ಲ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಬಸ್ ನಿಲ್ದಾಣ ಬಂದ್ ಮಾಡಲಾಗುವುದು” ಎಂದು ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್ ಎಚ್ಚರಿಕೆ ನೀಡಿದ್ದಾರೆ.

Advertisements

ಪ್ರತಿಭಟನೆ ಸ್ಥಳಕ್ಕೆ ಘಟಕ ವ್ಯವಸ್ಥಾಪಕರು ಭೇಟಿ ನೀಡಿ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ್ದಾರೆ. ಚಾಲಕ-ನಿರ್ವಹಕರಿಗೆ ಅಸಭ್ಯವಾಗಿ ವರ್ತಿಸಬಾರದು ಮತ್ತು ಎಸ್‌ಆರ್‌ಕೆ ಬಡಾವಣೆಯಲ್ಲಿ ನಿಲುಗಡೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಎಸ್ಎಫ್ಐ ಮುಖಂಡರಾದ ಗೌತಮ್ ಸಾವಕ್ಕನವರ, ವೀರೇಶ ಹನುಮನಮಟ್ಟಿ, ಸಂಗೀತಾ ಲಮಾಣಿ, ದ್ರಾಕ್ಷಯಿಣಿ, ಅಶ್ವಿನಿ ಯು ಟಿ, ಮಂಜುಳಾ ಬಿ, ರೂಪಾ ಎಸ್ ಬಿ, ಪ್ರತಿಭಾ ಗೊಣೆಪ್ಪನವರ, ಅಶ್ವಿನಿ ಆರ್, ದ್ಯಾಮಾಕ್ಕ ಚವ್ಹಣ್ಣನವರ, ಪ್ರೀಯಾ ಯು ಟಿ ಸೇರಿದಂತೆ ನೂರಾರು ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕ ಪ್ರಯಾಣಿಕರು ಪಾಲ್ಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X