ಇತ್ತೀಚೆಗೆ, ಅಂಬೇಡ್ಕರ್, ಸಂವಿಧಾನ ಮತ್ತು ಮೀಸಲಾತಿ ವಿರೋಧಿ ಮನಸ್ಥಿತಿಯ ದುಷ್ಟ ವ್ಯಕ್ತಿಯೊಬ್ಬ (ಕೆ.ಆರ್. ಪೇಟೆಯ ವೇದಮೂರ್ತಿ), ನಮ್ಮ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಮಾತನಾಡಿದ್ದು, ಆ ದುಷ್ಟ ವ್ಯಕ್ತಿಯನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಅಲೆಮಾರಿ ಸಮುದಾಯದ ಮುಖಂಡರು ಮನವಿ ಸಲ್ಲಿಸಿದರು.
ಅಂಬೇಡ್ಕರ್ ಅವರನ್ನು ಅವಮಾನಿಸಿದ ದುಷ್ಟ ವೇದಮೂರ್ತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ, ಆತನ ಮೇಲೆ ದೇಶವಿರೋಧಿ ಚಟುವಟಿಕೆಯ ಪ್ರಕರಣ ದಾಖಲಿಸುವಂತೆ ಹಾಗೂ ಆತನನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ನಾವು ಒತ್ತಾಯಿಸಿದರು.
ಮನವಿ ಸಮಯದಲ್ಲಿ ಅಲೆಮಾರಿ ಸಮುದಾಯ ಜಿಲ್ಲಾಧ್ಯಕ್ಷ ವಿಭೂತಿ ಶೆಟ್ಟ, ಸೋಮಣ್ಣ, ಸಹದೇವಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.





