ಹಾವೇರಿ | ಡೀಸೆಲ್, ಟೋಲ್ ದರ ಹೆಚ್ಚಳ, ಜನಸಾಮಾನ್ಯರ ಮೇಲೆ ಹೊರೆ: ಬಸವರಾಜ ಪೂಜಾರ ಖಂಡನೆ

Date:

Advertisements

“ರಾಜ್ಯದ ಜನರು ಹಾಲಿನ ಬೆಲೆ, ವಿದ್ಯುತ್ ದರ ಏರಿಕೆಯ ಕಹಿಗಳನ್ನು ಅನುಭವಿಸುತ್ತಿರುವಾಗಲೇ ಏಪ್ರೀಲ್ ಒಂದ ರಿಂದ ಅನ್ವಯವಾಗುವಂತೆ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಡೀಸೆಲ್, ಟೋಲ್ ದರ ಹೆಚ್ಚಳ ಮಾಡಿರುವುದು ಜನಸಾಮಾನ್ಯರ ಮೇಲೆ ಹೊರೆ ಯಾಗಿದೆ. ಜನವಿರೋಧಿ ಕ್ರಮಗಳನ್ನು ಕೈ ಬಿಡಬೇಕು ” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಖಂಡಿಸಿದರು.

ಹಾವೇರಿ ಪಟ್ಟಣದಲ್ಲಿ ಡೀಸೆಲ್ ಹಾಗೂ ಟೋಲ್ ದರ ಹೆಚ್ಚಳ ಖಂಡಿಸಿ ಈದಿನ ಕಾಮ್ ನೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದರು.

“ರಾಜ್ಯ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 18.44 ರಿಂದ ಶೇ 21.77ಕ್ಕೆ ಏರಿಕೆ ಮಾಡಿ, ಆದೇಶಿಸಿದೆ. ಬೆಂಗಳೂರಿನಲ್ಲಿ ₹89.02 ಇದ್ದ ಡೀಸೆಲ್ ಬೆಲೆ ₹91.02 ಆಗಲಿದೆ. ಉಳಿದ ಜಿಲ್ಲೆಗಳಲ್ಲಿ ಈಗಿರುವ ದರಕ್ಕೆ ಅನುಗುಣವಾಗಿ ಶೇಕಡಾ 2.73ರಷ್ಟು ಹೆಚ್ಚಳವಾಗಲಿದೆ. ನೆರೆ ರಾಜ್ಯಗಳಿಗೆ ಹೋಲಿಸಿದರೆ ಈಗ ತೆರಿಗೆ ದರ ಏರಿಕೆಯ ನಂತರ ಮಾರಾಟ ಬೆಲೆ ಹೆಚ್ಚಳವಾದರೂ, ನೆರೆಯ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ಡೀಸೆಲ್ ಬೆಲೆ ಕಡಿಮ ಇರಲಿದೆ’ ಎಂದು ಸರ್ಕಾರದ ಆರ್ಥಿಕ ಇಲಾಖೆ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿರುವುದು ಅರ್ಥಹೀನ ಎಂಬುದು ಡಿವೈಎಫ್ಐ ನ ಅಭಿಪ್ರಾಯವಾಗಿದೆ” ಎಂದರು.

Advertisements

“ಗ್ಯಾರಂಟಿ ಯೋಜನೆಗೆ ಹಣ ನೀಡುವ ನೆಪದಲ್ಲಿ ರಾಜ್ಯದ ಕಾಂಗ್ರೆಸ್‌ ಸರ್ಕಾರವು ಜನ ಸಾಮಾನ್ಯರ ಬದುಕಿನ ಮೇಲೆ ಬೆಲೆ ಏರಿಕೆಯ ಗದಾ ಪ್ರಹಾರವನ್ನೇ ಹರಿಯಬಿಟ್ಟಿದೆ. ಶಾಸಕರ ಸಂಬಳ ಭತ್ಯೆಗಳನ್ನು ಯಾವ ನಾಚಿಕೆ ಇಲ್ಲದೆ ಹೆಚ್ಚಿಸಿಕೊಂಡ ಕಾಂಗ್ರೆಸ್‌, ಬಿಜೆಪಿ ಹಾಗೂ ಜನತಾದಳ ಶಾಸಕರು ಜನಸಾಮಾನ್ಯರ ಬದುಕಿಗೆ ಮಾತ್ರ ಯಾವುದೇ ರಿಯಾಯಿತಿ ನೀಡದಿರುವುದು ಖಂಡನಾರ್ಹವಾಗಿದೆ” ಎಂದು ಕಿಡಿಕಾರಿದರು.

“ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ಟೋಲ್ ದರವನ್ನು ಶೇ 4ರಿಂದ ಶೇ 5ರಷ್ಟು ಹೆಚ್ಚಳ ಮಾಡಿದ್ದು, ಮಂಗಳವಾರದಿಂದಲೇ ಜಾರಿಯಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ನೀತಿಯು ಜನಸಾಮಾನ್ಯರ ಬದುಕನ್ನು ಮತ್ತಷ್ಟು ದುಸ್ಥರಗೊಳಿಸಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ʼಅಂತರ್ಯಾಮಿʼ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಿದ ಗೃಹಸಚಿವ ಪರಮೇಶ್ವರ್

“ಜನರ ಬದುಕಿನ ಪ್ರಶ್ನೆ ಬಂದಾಗಲೆಲ್ಲ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಸದಾ ಒಂದೇ ನಾಣ್ಯದ ಎರಡು ಮುಖಗಳು ಎನ್ನುವ ಮಾತುಗಳು ಈ ಡೀಸೆಲ್ ಹಾಗೂ ಟೋಲ್ ದರ ಏರಿಕೆ ವಿಷಯದಲ್ಲಿ ಸಾಭೀತಾಗಿವೆ. ಈ ಎರಡು ದರ ಏರಿಕೆಗಳನ್ನು ಕೂಡಲೇ ಕೈ ಬಿಡಬೇಕು ಎಂದು ಬಸವರಾಜ ಪೂಜಾರ್ ಆಗ್ರಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X