ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

Date:

“ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ ಆಯೋಗದ ದೋಷಪೂರಿತ SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಕೇಂದ್ರ ಸರ್ಕಾರದ ಆಡಳಿತ ಪಕ್ಷದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಹುದ್ದೆಯಿಂದ ವಜಾಗೊಳಿಸಬೇಕು” ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಆಗ್ರಹಿಸಿದರು.

- Advertisement -

ಹಾವೇರಿ ಪಟ್ಟಣದ ಗಾಂಧಿ ವೃತ್ತದಲ್ಲಿ ಇಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನರ ಫೆಡರೇಷನ್ (ಡಿವೈಎಫ್ಐ) ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ಎಸ್ಐಆರ್ ರದ್ದುಗೊಳಿಸಲು ಹಾಗೂ ಮುಖ್ಯ ಚುನಾವಣಾ ಅಧಿಕಾರಿ ಜ್ಞಾನೇಶಕುಮಾರ ರಾಜಿನಾಮೆಗಾಗಿ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು..

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“SIR ಪ್ರಕ್ರಿಯೆಯ ಹೆಸರಿನಲ್ಲಿ ಇಡೀ ದೇಶಾದ್ಯಂತ ಕರಡು ಪಟ್ಟಿಯಿಂದ ಬರೋಬ್ಬರಿ 13 ಕೋಟಿಗೂ ಹೆಚ್ಚು ಮತದಾರರನ್ನು ಯಾವುದೇ ಮುನ್ಸೂಚನೆ ಇಲ್ಲದೆ ರಹಸ್ಯವಾಗಿ ಹೊರದಬ್ಬಲಾಗಿದೆ. ನಮ್ಮ ಕರ್ನಾಟಕದಲ್ಲಿ 1.07 ಕೋಟಿ ಮತಗಳು ನಾಪತ್ತೆಯಾಗಿದ್ದರೆ, ಹಾವೇರಿ ಜಿಲ್ಲೆಯ ಒಟ್ಟು 13.35 ಲಕ್ಷ ಮತದಾರರ ಪೈಕಿ ಆರಂಭದಲ್ಲಿ ಸುಮಾರು 1.14 ಲಕ್ಷ ಮತದಾರರನ್ನು ಅನರ್ಹರ ಪಟ್ಟಿಗೆ ಸೇರಿಸಲಾಗಿದೆ. ಇದು ಬರೀ ಆಡಳಿತಾತ್ಮಕ ಲೋಪವಲ್ಲ, ಆಡಳಿತ ಪಕ್ಷಕ್ಕೆ ಚುನಾವಣೆಯಲ್ಲಿ ಲಾಭ ಮಾಡಿಕೊಡಲು ಹೆಣೆಯಲಾದ ವ್ಯವಸ್ಥಿತ ಪಿತೂರಿಯಾಗಿದೆ” ಎಂದು ಗಂಭೀರವಾಗಿ ಆರೋಪಿಸಿದರು.

ಈ SIR ಪ್ರಕ್ರಿಯೆಯು ಎಷ್ಟು ದೋಷಪೂರಿತವಾಗಿದೆ ಎಂದರೆ, ಸ್ವತಃ ಚುನಾವಣಾ ಆಯೋಗದ ಇಬ್ಬರು ಆಯುಕ್ತರು ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಷಿ ಅವರೇ ಇದರ ವಿರುದ್ಧ 14 ಬಾರಿ ಲಿಖಿತ ಆಕ್ಷೇಪಣೆ ಎತ್ತಿದ್ದಾರೆ. ಸುಪ್ರೀಂ ಕೋರ್ಟ್‌ನ ಗೌರವಾನ್ವಿತ ಜಸ್ಟಿಸ್ ಉಜ್ಜಲ್ ಭುಯಾನ್ ಅವರೂ ಸಹ ಈ ಪ್ರಕ್ರಿಯೆಯನ್ನು ಸಂವಿಧಾನ ವಿರೋಧಿ ಮತ್ತು ಅನಿಯಂತ್ರಿತವೆಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಆದರೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಮೋದಿ-ಅಮಿತ್ ಶಾ ಜೋಡಿಯ ಆಜ್ಞೆಯಂತೆ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ” ಎಂದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ನಗವತ ಮಾತನಾಡಿ, “ಬಿಜೆಪಿ-ಆರ್.ಎಸ್.ಎಸ್ ಕೈಗೊಂಬೆಯಾಗಿ ಇಡೀ ದೇಶದ ಜನರ ಮತ ಕದಿಯುತ್ತಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ತಕ್ಷಣದ ವಜಾ, ದೋಷಪೂರಿತ SIR ಪ್ರಕ್ರಿಯೆಯ ಸಂಪೂರ್ಣ ರದ್ಧತಿ, ನಕಲಿ ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಿ ಮತಗಳನ್ನು ಅಳಿಸಲು ಸಂಚು ರೂಪಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಜಿಲ್ಲೆಯ ಲಕ್ಷಾಂತರ ಮತದಾರರು ಸೇರಿದಂತೆ ದೇಶದ ಎಲ್ಲಾ ಅಕ್ರಮವಾಗಿ ಡಿಲೀಟ್ ಮಾಡಲಾದ ನಾಗರಿಕರ ಹೆಸರುಗಳ ತಕ್ಷಣದ ಮರುಸೇರ್ಪಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಚೈತ್ರಾ ಕೊರವರ ಮಾತನಾಡಿ, “ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶಾದ್ಯಂತ ವಿದ್ಯಾರ್ಥಿ-ಯುವಜನರ ಮೇಲೆ ಪೊಲೀಸರನ್ನು ಬಿಟ್ಟು ಲಾಠಿ ಪ್ರಹಾರ ನಡೆಸಿದ್ದಾರೆ. ತಲೆ ಒಡೆದು, ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಿ, ಭೀಕರ ಖಾಕಿ ದಬ್ಬಾಳಿಕೆ ನಡೆಸಲಾಗುತ್ತಿದೆ. ಆದರೆ ಪೊಲೀಸರ ಲಾಠಿ ಪ್ರಹಾರಕ್ಕಾಗಲಿ, ಅಕ್ರಮ ಬಂಧನಗಳಿಗಾಗಲಿ ಈ ದೇಶದ ಯುವಶಕ್ತಿ ಹೆದರುವುದಿಲ್ಲ, ಜಂತರ್ ಮಂತರ್‌ನಿಂದ ಹತ್ತಿರುವ ಈ ಕ್ರಾಂತಿಕಾರಿ ಕಿಚ್ಚು ಇಡೀ ದೇಶವನ್ನು ವ್ಯಾಪಿಸಲಿದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಡಿವೈಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಮಂಜುಳ ಹಾನಗಲ್, ಡಿಎಚ್ಎಸ್ ಜಿಲ್ಲಾ ಸಂಚಾಲಕ ವೀರಣ್ಣ ಗಡ್ಡಿಯವರ, ಎಸ್ಎಫ್ಐ ಡಿವೈಎಫ್ಐ ಮುಖಂಡರಾದ ಸಮರ್ಥ, ಉದಯ್ ಮರಡಿ, ಆಕಾಶ ಸಂಗೂರು, ರಾಜು ಬಣಕಾರ್, ಸುನೀಲ್ ಕನಕಾಪುರ, ಕಾಂತೇಶ ದೇಶಗತಿ, ಅಲ್ತಾಫ್ ಮಡ್ಲೂರ, ಶಾಮೀರ್ ನಾಗನೂರ, ಶಿವರಾಜ್ ತಿಳವಳ್ಳಿ, ಅಭಿ ಬುಳ್ಳಣ್ಣನವರ ಸೇರಿದಂತೆ ಅನೇಕ ವಿದ್ಯಾರ್ಥಿ ಯುವಜನರು ಪಾಲ್ಗೊಂಡಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...