“ಶಿಕ್ಷಣ ನಮ್ಮ ಹಕ್ಕು, ಏಕತೆಯೇ ದಾರಿ, ವೈವಿಧ್ಯತೆಯೇ ಶಕ್ತಿ” ಘೋಷಣೆಯಡಿಯಲ್ಲಿ ಜೂನ್ 27 ರಿಂದ 30ರವರೆಗೆ ಕೇರಳದ ಕೋಝಿಕ್ಕೋಡ್‌ನಲ್ಲಿ ನಡೆಯುವ 18ನೇ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಅಖಿಲ ಭಾರತ ಸಮ್ಮೇಳನಕ್ಕೆ ಎಸ್ಎಫ್ಐ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಆಯ್ಕೆಯಾಗಿದ್ದಾರೆ.
ರಾಷ್ಟ್ರವನ್ನು ತಲ್ಲಣಗೊಳಿಸುತ್ತಿರುವ ಭಯೋತ್ಪಾದನೆ, ಕೋಮುವಾದ, ಭ್ರಷ್ಟಾಚಾರ, ನಿರುದ್ಯೋಗ, ಬಡತನ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅಪಾಯಗಳು ಸೇರಿದಂತೆ ಹಲವು ವಿಷಯಗಳು ಕುರಿತು ವಿಚಾರ ಸಂಕೀರ್ಣ ನಡೆಯುತ್ತಿದ್ದು, ನಾಲ್ಕು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ಶಿಕ್ಷಣ ಕ್ಷೇತ್ರದ ಖಾಸಗೀಕರಣ, ವ್ಯಾಪಾರೀಕರಣ, ಭ್ರಷ್ಟಾಚಾರ, ಖಾಸಗಿ ವಿದೇಶ ವಿಶ್ವವಿದ್ಯಾಲಯಗಳು ಆಗಮಿಸುತ್ತಿರುವುದನ್ನು ವಿರೋಧಿಸಿ ಅಲ್ಲದೇ ವಿದ್ಯಾರ್ಥಿಗಳು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರದ ಕುರಿತು ದೇಶದ ವಿವಿಧ ರಾಜ್ಯಗಳಿಂದ ಹಾಗೂ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿ ಮುಖಂಡರುಗಳೊಂದಿಗೆ ಚರ್ಚೆ ನಡೆಯಲಿದೆ.

ಇದನ್ನೂ ಓದಿ: ಹಾವೇರಿ | 77 ಗ್ರಾಮಗಳ, 162 ಕೆರೆಗಳಿಗೆ ನೀರು ಹರಿಸಲು ಶಾಸಕ ಶ್ರೀನಿವಾಸ ಮಾನೆ ಚಾಲನೆ
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಸಮ್ಮೇಳನದಲ್ಲಿ ಮಾರ್ಗದರ್ಶನ ಮಾಡುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಚರ್ಚಿಸಿ ಶಿಕ್ಷಣ ಕ್ಷೇತ್ರವನ್ನು ಬಲಪಡಿಸಿ ಸಂಘಟನೆಯನ್ನು ಬಲಪಡಿಸಲು ಜಿಲ್ಲೆಗೆ ಅನುಕೂಲವಾಗಲಿದೆ ಎಂದು ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ದುರುಗಪ್ಪ ಯಮ್ಮಿಯವರ, ಜಿಲ್ಲಾ ಉಪಾಧ್ಯಕ್ಷ ಗೌತಮ್ ಸಾವಕ್ಕನವರ, ಜಿಲ್ಲಾ ಸಹ ಕಾರ್ಯದರ್ಶಿ ಕೃಷ್ಣ ನಾಯ್ಕ ತಿಳಿಸಿದರು.