ಹಾವೇರಿ | ಮಹಿಳೆಯರು ಈಗ ಎಲ್ಲ ಕ್ಷೇತ್ರಗಳಲ್ಲಿ ಚಾಪು ಮೂಡಿಸಿದ್ದಾರೆ: ದಸಂಸ ಮುಖಂಡ ಉಡಚಪ್ಪ ಮಳಗಿ

Date:

“ಇಂದಿನ ಕಾಲಘಟ್ಟದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಚಾಪು ಮೂಡಿಸಿದ್ದಾರೆ. ಮಹಿಳೆಯರು ಸಂಘಟನೆಗೆ ಸೇರಿವುದರಿಂದ ಸಮಾಜ ಇನ್ನೂ ಹೆಚ್ಚು ಜಾಗೃತರಾಗಲು ಕಾರಣವಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಂಘಟನೆಯಲ್ಲಿ ತೊಡಗಿಸಬೇಕು. ಆಗ ಸಮಾಜ ಜಾಗೃತಿಯಾಗಲು ಸಾಧ್ಯ” ಎಂದು ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯರಾದ ಉಡಚಪ್ಪ ಮಾಳಗಿ ಹೇಳಿದರು.

- Advertisement -

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಡಿಎಸ್‌ಎಸ್ ಸಂಘಟನೆಯ ಜಿಲ್ಲಾ ಮಟ್ಟದ ಮಹಿಳಾ ಪದಾಧಿಕಾರಿಗಳ ನೇಮಕ ಸಭೆಯಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

“ಮಹಿಳೆಯರಲ್ಲಿ ನಾಯಕತ್ವ ಗುಣ ಹಾಗೂ ಸಮಾಜದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚು ಸಂಘಟಿತರಾಗಿ ತಮ್ಮ ಪ್ರಾಬಲ್ಯತೆ ತೋರಿಸಲು ಅವಕಾಶವಿದೆ. ಎಲ್ಲ ಪದಾಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಿ” ಎಂದು ಶುಭ ಕೋರಿದರು.

ಸಭೆಯ ಅಧ್ಯಕ್ಷತೆಯನ್ನು ಡಿಎಸ್‌ಎಸ್ ಜಿಲ್ಲಾ ಸಂಚಾಲಕರಾದ ಮಂಜಪ್ಪ ಮರೋಳ ವಹಿಸಿ ಮಾತನಾಡಿ, “ನಮ್ಮ ಸಂಘಟನೆಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದು ಸಂತೋಷಕರ” ಎಂದರು.

ಡಿಎಸ್‌ಎಸ್ ಮಹಿಳಾ ಘಟಕದ ಜಿಲ್ಲಾ ಸಂಚಾಲಕರಾಗಿ ಶ್ರೀಮತಿ ರೇಣುಕಾ ಹ ಬಡಕಣ್ಣನವರ, ಜಿಲ್ಲಾ ಸಂಘಟನಾ ಸಂಚಾಲಕರಾಗಿ ಕಲ್ಪನಾ ಮೆಳಗೇರಿ ಹಾಗೂ ಕಲಾವಿದರ ಘಟಕದ ಜಿಲ್ಲಾ ಸಂಚಾಲಕರಾಗಿ ಬಸವರಾಜ ಕಾಳೆ, ಪದಾಧಿಕಾರಿಗಳಾಗಿ ಗೀತಾ ದೊಡ್ಡಮನಿ, ಮಾಯವ್ವ ದೊಡ್ಡಮನಿ, ಯಲ್ಲಮ್ಮ ಕೆ, ಲಲಿತಾ ಖಾಜಿ, ಗೀತಾ ಮಾದರ, ಸುಮಂಗಲಾ ಹರಿಜನ, ಲಲಿತಾ ಬಡಕಣ್ಣನವರ, ರೇಣುಕಾ ವಾಲ್ಮೀಕಿ, ರೇಣುಕಾ ದೊಡ್ಡಮನಿ, ಪ್ರೇಮವ್ವ ಹರಿಜನ, ಗೀತಾ ಹರಿಜನ, ಪಾರು ಲಮಾಣಿ, ರತ್ನವ್ವ ದೊಡ್ಡಮನಿ, ಮಾಳವ್ವ ಹರಿಜನ ಇನ್ನಿತರರನ್ನು ಆಯ್ಕೆ ಮಾಡಲಾಯಿತು.

ಇದನ್ನು ಓದಿದ್ದೀರಾ? ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರೇ ಇಲ್ಲ!

ಇದೇ ವೇಳೆ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಿ, ಸನ್ಮಾನಿಸಿ ಗೌರವಿಸಿಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ವೈ ಎನ್ ಮಾಸೂರ, ಮಾರುತಿ ಕಿಳಿಕ್ಯಾತರ, ಜಗದೀಶ ಹರಿಜನ ಹನಮಂತಪ್ಪ ಹೌಂಶಿ, ದುರಗಪ್ಪ ಹುಲ್ಲತ್ತಿ, ಹನಮಂತಪ್ಪ ಸಿಡಿ, ಮಂಜುನಾಥ ಡಿ, ಭರಮಪ್ಪ ಗೀವಿನಾಳ, ಮಲ್ಲೇಶ ಹರಿಜನ, ಬಸವಣ್ಣೆಪ್ಪ ಹಳ್ಳಿ, ಶಂಭುಲಿಂಗಪ್ಪ ಡಿವಿಟರ, ಮಲ್ಲಾರೆಪ್ಪ ದೊಡ್ಮನಿ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮದರಕಲ್ ಅಂಬಾ ಮಠದ ವಿರುದ್ಧ ಸುಳ್ಳು ಆರೋಪ: ಅಮರೇಶ್ ಪಾಟೀಲ್

ದೇವದುರ್ಗ ತಾಲ್ಲೂಕು ಮದರಕಲ್‌ ಗ್ರಾಮದ ಅವದೂತ ರಾಜಯೋಗಿ ಸಂತ ನಾಮದೇವಗೌಡ ಶರಣರ...

ಉಡುಪಿ | ಕರಾವಳಿ ಇಲ್ಲದೆ ಕರ್ನಾಟಕದ ಅಸ್ಮಿತೆ ಇಲ್ಲ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ

"ಕರಾವಳಿ ಇಲ್ಲದೆ ಕರ್ನಾಟಕ ಪೂರ್ಣವಾಗುವುದಿಲ್ಲ. ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ...

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...