ಹಾವೇರಿ | ಜಿ+1 ಮನೆ ಫಲಾನುಭವಿಗಳಿಗೆ ಮೂಲ ಸೌಕರ್ಯಕ್ಕಾಗಿ ಡಿವೈಎಫ್ಐ ಪ್ರತಿಭಟನೆ

Date:

ಜಿ+1 ಮನೆಗಳನ್ನು ವಿತರಿಸಿ ಆರು ತಿಂಗಳಾದರೂ ಮನೆಗಳಿಗೆ ವಿದ್ಯುತ್ ಸಂಪರ್ಕ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸದೇ ಕಾಲ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ನಗರ ಸಮಿತಿ ಹಾಗೂ ಜಿ+1 ಮನೆ ಫಲಾನುಭವಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಫಲಾನುಭವಿಗಳು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ಈ ವೇಳೆ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ಹಲವು ವರ್ಷಗಳ ಹೋರಾಟದ ಫಲವಾಗಿ ಜೂನ್ 16, 2025 ರಂದು ಮಾನ್ಯ ಶಾಸಕರು, ಪುರಸಭೆಯ ಅಧ್ಯಕ್ಷರು, ಸರ್ವಸದಸ್ಯರು ಹಾಗೂ ಮುಖ್ಯಾಧಿಕಾರಿಗಳು  ಜಿ+1 ಮನೆಗಳನ್ನು ಫಲಾನುಭವಿಗಳಿಗೆ ಮನೆಗಳನ್ನು ವಿತರಿಸಿದ್ದರು. ಆದರೆ ಫಲಾನುಭವಿಗಳಿಗೆ ಮನೆಗಳನ್ನು ವಿತರಿಸಿ ಆರು ತಿಂಗಳಾದರೂ ಜಿ+1 ಮನೆಗಳಿಗೆ ನಿರ್ಮಿತಿ ಕೇಂದ್ರ ಹಾಗೂ ಪುರಸಭೆ ಅಧಿಕಾರಿಗಳು ವಿದ್ಯುತ್ (ಕರೆಂಟ್) ಸಂಪರ್ಕ ಕೊಟ್ಟು ಮೀಟರ್ ಅಳವಡಿಸದಿರುವ ಹಾಗೂ ಕನಿಷ್ಠ ಕುಡಿಯುವ ನೀರಿನ ಸೌಲಭ್ಯ ಒದಗಿಸಿಲ್ಲ” ಎಂದು ತೀವ್ರವಾಗಿ ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

“ನಿರ್ಮಿತಿ ಕೇಂದ್ರದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯತನ ಹಾಗೂ ಬೇಜವಾಬ್ದಾರಿ ನಡವಳಿಕೆಯಿಂದಾಗಿ ಜಿ+1 ಮನೆ ಫಲಾನುಭವಿಗಳು ತೀವ್ರ ಸಂಕಷ್ಟವನ್ನು ಎದುರಿಸಬೇಕಾಗಿದೆ. ಮನೆಗಳಿಗೆ ನಿಗದಿತ ಅವಧಿಯೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಮೀಟರ್ ಅಳವಡಿಸದಿದ್ದರೆ ನಿರ್ಮಿತಿ ಕೇಂದ್ರದ ಎದುರುಗಡೆ ತೀವ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ‌ ನೀಡಿದರು.

“ಈ ಮೊದಲು ಹಂಚಿಕೆಯಾಗಿದ್ದ ಜಿ+1, 24 ಮನೆಗಳಿಗೆ ಒಂದು ನಲ್ಲಿಯನ್ನು ಮಾತ್ರ ಕೊಡಲಾಗಿತ್ತು. ಕಳೆದ ಜೂನ್ 2025ರಲ್ಲಿ ಹಂಚಿಕೆ ಮಾಡಿದ 156 ಜಿ+1 ಮನೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಇನ್ನೂ ಕಲ್ಪಿಸಿಲ್ಲ. ಕನಿಷ್ಠ ಕುಡಿಯುವ ನೀರಿಗಾಗಿ ಅಗತ್ಯವಿರುವ ನಲ್ಲಿ ಅಳವಡಿಸದಿರುವುದರಿಂದ ಜನತೆ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಈ ಎಲ್ಲ ಜಿ+ ಮನೆಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ಪ್ರತಿ ಮನೆಗೆ ನಲ್ಲಿ ಅಳವಡಿಸಬೇಕು” ಎಂದು ಆಗ್ರಹಿಸಿದರು.

“ಈಗಾಗಲೇ ಜಿ+ 1 ಮನೆಗಾಗಿ ಅರ್ಜಿ ಹಾಕಿ ಪುರಸಭೆಗೆ ಫಲಾನುಭವಿ ವಂತಿಗೆ ಹಣ ತುಂಬಿರುವ ನಿವೇಶನ/ಮನೆ ರಹಿತ ಹಲವಾರು ಜನ ಫಲಾನುಭವಿಗಳಿಗೆ ಮನೆ ದೊರೆತಿಲ್ಲ. ಪುರಸಭೆಗೆ ಫಲಾನುಭವಿ ವಂತಿಗೆ ಕಟ್ಟಿ ಅರ್ಜಿ ಹಾಕಿರುವ ಬಡ ಜನರಿಗೆ (ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳಿದ್ದರೆ ಪರಿಹರಿಸಿ) ವಸತಿ ಸೌಲಭ್ಯ ಕಲ್ಪಿಸಬೇಕು. ಹಾಗೂ ಮಾರುತಿ ನಗರ, ಬಸವನಗರ, ಸಾಲಗೇರಿ ಓಣಿ ದ್ಯಾಮವ್ವನ ಪಾದಗಟ್ಟಿ ಸೇರಿದಂತೆ ಪುರಸಭೆಯ ಪ್ರದೇಶ ವ್ಯಾಪ್ತಿಯಲ್ಲಿರುವ ಎಲ್ಲ ವಸತಿ ರಹಿತ ಬಡಜನರಿಗೆ ಹಿತ್ತಲು ಸಹಿತ ಮನೆ/ನಿವೇಶನ ಸೌಲಭ್ಯ ಕಲ್ಪಿಸಬೇಕು. ಅದಕ್ಕಾಗಿ ಪುರಸಭೆ ವ್ಯಾಪ್ತಿಯಲ್ಲಿರುವ ಖಾಲಿ ಜಾಗೆಯನ್ನು ಬಳಸಿಕೊಳ್ಳಬೇಕು ಹಾಗೂ ಅಗತ್ಯಬಿದ್ದರೆ ಭೂಮಿ ಖರೀದಿ ಮಾಡಿಯಾದರೂ ಎಲ್ಲ ವಸತಿರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

 ಜಿ+1 ಮನೆ ಫಲಾನುಭವಿಗಳ ಹೋರಾಟ ಸಮಿತಿ  ಮುಖಂಡ ವೀರಣ್ಣ ಗಡ್ಡಿಯವರ ಮಾತನಾಡಿ, “ಜಿ+ ಮನೆಗಳಲ್ಲಿ ಗೋಡೆಗಳಲ್ಲಿ ಡ್ರೈನೇಜ್ ಹಾಗೂ ಸ್ನಾನದ ಕೊಠಡಿ ನೀರು ಸೋರಿಕೆಯಾಗುತ್ತಿದೆ. ಇನ್ನೂ ಕೆಲ ಮನೆಗಳಲ್ಲಿ ದುರಸ್ತಿ ಕೆಲಸ ಬಾಕಿ ಉಳಿದಿದೆ. ಆದ್ದರಿಂದ ಈ ಎಲ್ಲ ಬಾಕಿ ಕೆಲಸಗಳನ್ನು ಕೂಡಲೇ ದುರಸ್ತಿಗೊಳಿಸಬೇಕು. ಜಿ+ ಮನೆ ಸ್ಟೇರಕೇಸ್ ಮೇಲೆ ಸುರಕ್ಷತೆಗಾಗಿ ಜಾಲರಿ ಹಾಕಿಸಬೇಕು. ಜಿ+ ಮನೆ ಆವರಣದಲ್ಲಿ ದೇವಸ್ಥಾನದ ಹತ್ತಿರ ಗುಂಡಿಬಿದ್ದಿದೆ, ಅದನ್ನು ಮಣ್ಣು ಹಾಕಿಸಿ ಸಮತಟ್ಟುಗೊಳಿಸಬೇಕು ಹಾಗೂ ರಸ್ತೆ ನಿರ್ಮಿಸಬೇಕು. ಶುಚಿತ್ವಕ್ಕಾಗಿ ಜಿ+ ಮನೆಯಾವರಣದಲ್ಲಿ ನಿರಂತರವಾಗಿ ಕಾಲುವೆ (ಗಟಾರು) ಸ್ವಚ್ಚಗೊಳಿಸಬೇಕು. ಪ್ರತಿ ದಿನ ಕಸ ತುಂಬಿಸಿಕೊಳ್ಳುವ ವಾಹನ ಬರುವಂತೆ ಮಾಡಬೇಕು. ಸೊಳ್ಳೆ ಹೆಚ್ಚಾಗದಂತೆ ಪಾಗಿಂಗ್ ಮಾಡಬೇಕು. ಹಾಗೂ ಜಿ+ ಮನೆ ಆವರಣದಲ್ಲಿ ಸಮುದಾಯಭವನ ಹಾಗೂ ಅಂಗನವಾಡಿ ಮಂಜೂರು ಮಾಡಬೇಕು” ಎಂದರು.

ಪ್ರತಿಭಟನಾ ಸ್ಥಳಕ್ಕಾಗಮಿಸಿದ ಪುರಸಭೆಯ ಮುಖ್ಯಾಧಿಕಾರಿ ಕೆ. ಮಲ್ಲೇಶ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳಾದ ರಮೇಶಗೌಡ ಅವರು ಮನವಿ ಸ್ವೀಕರಿಸಿ ಮಾತನಾಡಿ, ನಿಗದಿತ ಅವಧಿಯಲ್ಲಿ ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಲ್ಲಿ ನಮ್ಮಿಂದ ತಪ್ಪಾಗಿದೆ. ಇವತ್ತಿನಿಂದಲೇ ಕುಡಿಯುವ ನೀರು ಹಾಗೂ ವಿದ್ಯುತ್ ಸಂಪರ್ಕ ಕೊಡಿಸುವ ಕೆಲಸವನ್ನು ಆರಂಭಿಸುತ್ತೇವೆ, ದಯವಿಟ್ಟು ಪ್ರತಿಭಟನೆ ಹಿಂಪಡೆದುಕೊಂಡು ಇದೊಂದು ಬಾರಿ ಅವಕಾಶ ಮಾಡಿಕೊಡಿ; ಒಂದು ತಿಂಗಳೊಳಗಾಗಿ ಈ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ” ಎಂದು‌ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಡಿವೈಎಫ್ಐ ನಗರ ಸಮಿತಿ ಅಧ್ಯಕ್ಷ ಮೌಲಾಲಿ ನವಲಗುಂದ, ಕಾರ್ಯದರ್ಶಿ ಕಿಶೋರ್ ದೋತ್ರರೆ, ಮಕಬುಲ್ ಯಲ್ಲಾಪೂರ, ಗುರುನಗೌಡ ದುಂಡಿಗೌಡ್ರ, ಕಸ್ತೂರಿ ಜಿ. ವಡ್ಡರ, ಮಂಜುಳಾ ತಡಸ, ಸುಮಿತ್ರಾ ಶಿರಹಟ್ಟಿ, ರಾಧಾ ಆಲೂರು, ಅಸ್ಮಾ ದೇವಸೂರು, ಸಾವಿತ್ರಿ ಚೌಹಾಣ, ಬಸೀರಾಬಾನು ಖುರ್ಷಾಪುರ, ಮಾಲಾನಬಿ ಬಡಿಗೇರ, ಕೃಷ್ಣಪ್ಪ ಗದಗ, ಗಣೇಶ ತೋಟಿಗೆರ, ರುದ್ರೇಶ ಗೌರಣ್ಣನವರ, ಶಂಭು ಗಾಟೆನವರ, ಅಮಿತ್ ಬಿಂಡಲಗಿ, ಕಾಶಮ್ಮ ತಿಟ್ಟೇನವರ, ಜಯಮ್ಮ ಅಂಗಡಿ ಸೇರಿದಂತೆ ಜಿ+1 ಮನೆ ಫಲಾನುಭವಿಗಳು ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ...

ರಾಯಚೂರು | ಮಾದಕ ವ್ಯಸನದಿಂದ ಅಪರಾಧಗಳ ಹೆಚ್ಚಳ: ಜಿಲ್ಲಾಡಳಿತ ವಿಫಲ, ಜನಪ್ರತಿನಿಧಿಗಳಿಂದ ಆರೋಪಿಗಳ ರಕ್ಷಣೆ — ಎಂ. ವಿರೂಪಾಕ್ಷಿ ಆರೋಪ

ಜಿಲ್ಲೆಯಲ್ಲಿ ಮಾದಕ ವ್ಯಸನದಿಂದ ಕೊಲೆಗಳು, ದೌರ್ಜನ್ಯ, ಹಲ್ಲೆಗಳು ಹೆಚ್ಚಳವಾಗುತ್ತಿದ್ದು ಜಿಲ್ಲಾಡಳಿತ ನಿಯಂತ್ರಿಸುವಲ್ಲಿ...

ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ರಸ್ತೆಯಲ್ಲಿರುವ ಎ.ಕೆ. ಇಂಫ್ರಾ ಸಂಸ್ಥೆಗೆ ಸೇರಿದ...