ಹಾವೇರಿ | ವಿದ್ಯುತ್ ಕೊಡ್ರಿ, ಇಲ್ಲಾಂದ್ರ ಜಾಗ ಖಾಲಿ ಮಾಡ್ರಿ; ರೈತ ಸಂಘ ಬೃಹತ್ ಪ್ರತಿಭಟನೆ

Date:

“ರೈತರೇನು ಅಕ್ರಮ ಕೆಲ್ಸ ಮಾಡುತ್ತಿಲ್ಲ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ನೀಡುವುದು ಸರ್ಕಾರದ ಕೆಲಸ. ಆರ್‌ಆರ್ ನಂಬರಾದ್ರು ಕೊಡಿ, ಏಳೇಳು ನಂಬರ್ ಆದ್ರೂ ಕೊಡ್ರಿ. ನಮ್ಮ ಪಂಪ್‌ಸೆಟ್ಟಿಗೆ ವಿದ್ಯುತ್ ಕೊಡ್ರಿ, ಇಲ್ಲಾಂದ್ರ ಕೆಲಸ ಮಾಡಲಾಗದ ಅಧಿಕಾರಿ, ಜನಪ್ರತಿನಿಗಳು ಜಾಗಾ ಖಾಲಿ ಮಾಡ್ರಿ” ಎಂದು ರೈತ ಸಂಘ ಬೃಹತ್ ಪ್ರತಿಭಟನೆ ನಡೆಸಿತು.

- Advertisement -

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ತಾಲೂಕಿನಲ್ಲಿ ತಲೆದೋರಿರುವ ವಿದ್ಯುತ್ ವ್ಯತ್ಯಯ, ಲೋ ವೋಲ್ಟೇಜ್ ಮತ್ತು ಸುಟ್ಟ ಟ್ರಾನ್ಸ್ಫಾರ್ಮರ್‌ಗಳ (ಟಿಸಿ) ಸಮಸ್ಯೆ ಖಂಡಿಸಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರೈತರು ನೂರಾರು ಟ್ರ‍್ಯಾಕ್ಟರ್‌ಗಳೊಂದಿಗೆ ಕುಮಾರೇಶ್ವರ ಮಠದಿಂದ ಮಹಾತ್ಮ ಗಾಂಧಿ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಹೀಗಾಗಿ, ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ಸುಮಾರು ನಾಲ್ಕು ಗಂಟೆಗಳ ಕಾಲ ಅಸ್ತವ್ಯಸ್ತಗೊಂಡಿತ್ತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, “ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ನಮ್ಮ ಮನವಿಗಳು ಲೆಕ್ಕಕ್ಕೆ ಬರುತ್ತಿಲ್ಲ. ನಾವು ದುರ್ಬಲರಲ್ಲ ಕಾದು ನೋಡುತ್ತಿದ್ದೇವೆ. ಈಗ ನಮ್ಮ ಸಹನೆ ಮೀರಿದೆ. ಹತ್ತು ಹಲವು ಬಾರಿ ವಿದ್ಯುತ್ ಸಮಸ್ಯೆಗಳ ಬಗ್ಗೆ ಗಮನ ಸೆಳೆದರೂ ಸ್ಪಂದಿಸದ ಸರ್ಕಾರ ಹಾಗೂ ಅಧಿಕಾರಿಗಳ ನಡುವಳಿಕೆಯ ಅರ್ಥವೇನು. ಜಮೀನಿನಲ್ಲಿ ಬೆಳೆಗೆ ವಿದ್ಯುತ್ ಕೊರತೆಯಿಂದ ನೀರಿಲ್ಲದೆ ಬೆಳೆ ಒಣಗುತ್ತಿವೆ. ಒಣಗಿದ ಬೆಳೆಗೆ ಪರಿಹಾರ ಕೊಡಿ. ಕೇಂದ್ರ ಸರ್ಕಾರದ ಖಾಸಗೀಕರಣ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯಿಂದ ಹೈರಾಣಾಗಿದ್ದೇವೆ. ಇದನ್ನು ಕಣ್ತೆರೆದು ನೋಡದ ಜನಪ್ರತಿನಿಧಿಗಳು ನಮಗೆ ಬೇಕಾಗಿಲ್ಲ” ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚೆಳ್ಳೇರ ಮಾತನಾಡಿ, “ರೈತರ ಬೇಡಿಕೆ ಈಡೇರದಿದ್ದರೆ ಬೀದಿಗೆ ಇಳಿಯುವುದು ಮಾತ್ರವಲ್ಲ ಅದಕ್ಕೆ ಸರಿಯಾದ ಸಂದರ್ಭದಲ್ಲಿ ಸರಿಯಾಗಿ ಪಾಠ ಕಲಿಸುತ್ತೇವೆ. ಈಗಾಗಲೇ ಹಲವು ಪಾಠ ಕಲಿಸಿದ್ದೇವೆ” ಎಂದರು.

ರೈತ ಸಂಘದ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ ಮಾತನಾಡಿ, “ಹಾನಗಲ್ಲ ತಾಲೂಕಿನ ರೈತರ ಸಮಸ್ಯೆಗಳ ಬಗ್ಗೆ ಇಲಾಖೆಗಳು ನಿರ್ಲಕ್ಷ್ಯ ತೋರುತ್ತಿವೆ. ವಿದ್ಯುತ್ ಸಮಸ್ಯೆ ಬಗೆಗೆ ನಾಲ್ಕಾರು ತಿಂಗಳಿನಿಂದಲೇ ಇಲಾಖೆ ಗಮನ ಸೆಳೆದಿದ್ದೇವೆ. ಮೇಲಿಂದ ಮೇಲೆ ಎಚ್ಚರಿಸುತ್ತಲೇ ಇದ್ದರೂ, ವಿದ್ಯುತ್ ಖೋತಾ, ವೋಲ್ಟೇಜ್ ಫಾಲ್ಟ್, ಟಿಸಿ ಸುಡುವುದರಿಂದಾಗಿ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಇಲ್ಲದ ದುಸ್ಥಿತಿ ಒದಗಿದೆ. ಇದನ್ನು ಬಗೆಹರಿಸಲು ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಮುಂದಾಗುತ್ತಿಲ್ಲ” ಎಂದು ಆರೋಪಿಸಿದರು.

ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಳಿಸುವ ಕೇಂದ್ರದ ನೀತಿ ಕೈಬಿಡಬೇಕು, ರೈತರ ಪಂಪ್‌ಸೆಟ್‌ಗಳಿಗೆ ಯಾವುದೇ ಷರತ್ತಿಲ್ಲದೆ ನಿರಂತರ ವಿದ್ಯುತ್ ಪೂರೈಕೆ, 33 ಕೆವಿ ಸ್ಟೇಶನ್‌ಗಳ ಅಪ್‌ಗ್ರೇಡ್, ಸುಟ್ಟ ಟಿಸಿಗಳನ್ನು 24 ಗಂಟೆಯೊಳಗೆ ಬದಲಾಯಿಸುವುದು, ಮುಂಡಗೋಡ ತಾಲೂಕಿಗೆ ವಿದ್ಯುತ್ ಪೂರೈಕೆ ನಿಲ್ಲಿಸಿ, ಹಾನಗಲ್ಲ ರೈತರಿಗೆ ಆದ್ಯತೆ, ಲೈನ್‌ಮನ್‌ಗಳ ಕೊರತೆ ನಿವಾರಣೆ, ಅಪಾಯಕಾರಿ ವಿದ್ಯುತ್ ಮಾರ್ಗಗಳ ಸ್ಥಳಾಂತರ ಸೇರಿದಂತೆ ವಿವಿಧ ಬೇಡಿಕೆ ಮನವಿಯನ್ನು ತಹಸೀಲ್ದಾರ್ ಎಸ್. ರೇಣುಕಾ ಅವರ ಮೂಲಕ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಸಲ್ಲಿಸಲಾಯಿತು.

ಕೆಡಿಪಿ ಸಭೆ ಮುಂದೂಡಿಕೆ: ಶಾಸಕರ ನೇತೃತ್ವದಲ್ಲಿ ಸೋಮವಾರ ನಡೆಯಬೇಕಿದ್ದ ಕೆಡಿಪಿ ಸಭೆಯನ್ನು ರೈತರ ಪ್ರತಿಭಟನೆಯ ತೀವ್ರತೆಯಿಂದಾಗಿ ಮುಂದೂಡಲಾಯಿತು. 

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ, ಎಚ್.ಎಚ್. ಮುಲ್ಲಾ, ಗೌರವಾಧ್ಯಕ್ಷ ಮಲ್ಲೇಶಪ್ಪ ಪರಪ್ಪನವರ, ವಾಸುದೇವ ಕಮಾಟಿ, ರುದ್ರಪ್ಪ ಹಣ್ಣಿ, ಮಹೇಶ ವಿರುಪಣ್ಣನವರ, ಸೋಮಪ್ಪ ಜಡೆಗೊಂಡರ್, ಶ್ರೀಕಾಂತ ದುಂಡಣ್ಣನವರ, ಉಮೇಶ ಮೂಡಿ, ಶ್ರೀಧರ ಮಲಗುಂದ, ಎಂ.ಎ. ಬಡಗಿ, ಶಂಕರಗೌಡ ಪಾಟೀಲ, ಮಹಲಿಂಗಪ್ಪ ಅಕ್ಕಿವಳ್ಳಿ ಹಾಗೂ ನೂರಾರು ರೈತರು ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...