“ಮಾನವ ಕಳ್ಳ ಸಾಗಾಣಿಕೆ ಎಂಬುದು ಸಂಘಟಿತ ಅಪರಾಧವಾಗಿ ಸಮಾಜದಲ್ಲಿ ಹೆಮ್ಮರವಾಗಿ ಬೆಳೆಯುತ್ತಿದೆ. ಇದನ್ನು ತಡೆಗಟ್ಟಲು ಎಲ್ಲರ ಸಹಕಾರ ಅತ್ಯಗತವಾಗಿದೆ” ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಪ್ಪ ಎನ್. ಅವರು ಹೇಳಿದರು.
ಹಾವೇರಿ ಪಟ್ಟಣದ ಇಜಾರಿಲಕಮಾಪೂರ ಸರ್ಕಾರಿ ಪದವಿಪೂರ್ವ ಮಹಿಳಾ ವಿದ್ಯಾಲಯದಲ್ಲಿ ಗುರುವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವರಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪದವಿ ಪೂರ್ವ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ಮನುಷ್ಯನ ಆಸೆಗೆ ಮಿತಿಯಿಲ್ಲ, ಮನುಷ್ಯ ತಾನು ಸುಖವಾಗಿರಲು ಎಲ್ಲ ಪಾಪಕೃತ್ಯಗಳನ್ನು ಮಾಡಲು ಹಿಂಜರಿಯುವುದಿಲ್ಲ. ಸಮಾಜದಲ್ಲಿ ಹಿಂದಿನಿಂದಲೂ ಸಣ್ಣ ಮಕ್ಕಳಿಂದ ಹಿಡಿದು ವಯಸ್ಕರ ಹೆಣ್ಣು ಮಕ್ಕಳು. ಗಂಡು ಮಕ್ಕಳು ಹಾಗೂ ವೃದ್ಧರು ಆಮಿಷಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ವಿಷಾಧ ವ್ಯಕ್ತಪಡಿಸಿದರು. ಕಾನೂನು ನೆರವಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸಬಹುದು ಹಾಗೂ ಎಲ್ಲರೂ ಇಂತಹ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಹೇಳಿದರು.
ಎಸ್.ಎಚ್.ಮಜೀದ್ ಅವರು ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್.ಎನ್.ಡಿಳ್ಳೆಪ್ಪನವರ ಅವರು ಮಾನವ ಕಳ್ಳ ಸಾಗಾಣಿಕೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ನಿರ್ದೇಶಕ ಮಹಿಳೆಯರ ಮತ್ತು ಮಕ್ಕಳ ಸೌಲಭ್ಯಗಳ ಕುರಿತು ಉಪನ್ಯಾಸ ನೀಡಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಸ್ವಾತಂತ್ರ್ಯ ದಿನಾಚರಣೆ, ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಸೂಚನೆ
ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶೈಲಜಾ ಎಚ್.ವಿ.. ಜಿಲ್ಲಾ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಸಿ.ಪಿ.ಜಾವಗಲ್. ಜಂಟಿ ಕಾರ್ಯದರ್ಶಿ ಎನ್.ಎನ್.ಕಾಳೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ಶೈಲಾ ಕುರಹಟ್ಟಿ, ಪ್ರಾಚಾರ್ಯ ಬಸವರಾಜ ಇಟ್ಟಿಗುಡಿ ಇತರರು ಉಪಸ್ಥಿತರಿದ್ದರು.