“ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಜಾರಿಗಾಗಿ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೆ, ಇದುವರೆಗೂ ಯೋಜನೆ ಜಾರಿ ಮಾಡಿಲ್ಲ. ಯೋಜನೆ ಜಾರಿಯಾದರೆ ನೀರಾವರಿ ಸೌಲಭ್ಯ ಲಭ್ಯವಾಗುತ್ತದೆ. ಕೃಷಿಗೆ ಹೆಚ್ಚಿನ ಅನುಕೂಲವಾಗುತ್ತದೆ” ಎಂದು ರೈತ ಸಂಘದ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಅಸಮಾಧಾನ ವ್ಯಕ್ತಪಡಿಸಿದರು.
ಹಾವೇರಿ ಪಟ್ಟಣದ ವಿಧಾನಸಭೆ ಉಪ ಸಭಾಧ್ಯಕ್ಷ ಹಾಗೂ ಶಾಸಕ ರುದ್ರಪ್ಪ ಲಮಾಣಿ ಅವರ ಮನೆ ಎದುರು ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಅನುಷ್ಠಾನಗೊಳಿಸಬೇಕೆಂದು ರೈತ ಸಂಘ ಪ್ರತಿಭಟಿಸಿ ಮನವಿ ಸಲ್ಲಿಸಿ ಮಾತಾಡಿದರು.
ಯೋಜನೆ ಬಗ್ಗೆ ಅಧಿವೇಶನದಲ್ಲಿ ಮಾತನಾಡಬೇಕು ಎಂದು ಒತ್ತಾಯಿಸಿ ಶಾಸಕರ ಮನೆ ಎದುರು ಪ್ರತಿಭಟನೆ ನಡೆಸುತ್ತಿದ್ದೇವೆ. ಇದು ಸಾಂಕೇತಿಕ ಪ್ರತಿಭಟನೆ. ಯೋಜನೆ ಜಾರಿಯಾಗದಿದ್ದರೆ, ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.
ಈ ಸುದ್ದಿ ಓದಿದ್ದೀರಾ? ಗುಬ್ಬಿ | ಸುರಿಗೇನಹಳ್ಳಿ ಗುಡ್ಡದ ರಂಗನಾಥಸ್ವಾಮಿ ದೇಗುಲದಲ್ಲಿ ಮುಂದುವರಿದ ಕಳ್ಳತನ
ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರು ರೈತರು ಉಪಸ್ಥಿತರಿದ್ದರು.
