ಹಾವೇರಿ | ಮೆಕ್ಕೆಜೋಳಕ್ಕೆ ಕನಿಷ್ಠ 3 ಸಾವಿರ ಬೆಲೆ ನಿಗದಿ ಮಾಡಲು ರೈತರಿಂದ ಸರ್ಕಾರಕ್ಕೆ ಮನವಿ

Date:

“ರೈತರು ಬೆಳೆದ ಮೆಕ್ಕೆಜೋಳಕ್ಕೆ ಕನಿಷ್ಠ ₹3,000 ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲ್ಲೂಕಿನ ಹುಲಿಹಳ್ಳಿ ಬಳಿ ಇರುವ ಎಪಿಎಂಸಿ ಎದುರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.

- Advertisement -

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರು ಹನಮಂತಪ್ಪ ಕಬ್ಬಾರ ಮಾತನಾಡಿ, “ಹಾವೇರಿ ಜಿಲ್ಲಾದ್ಯಂತ ಹೆಚ್ಚಿನ ರೈತರು ಮೆಕ್ಕೆಜೋಳ ಬೆಳೆದಿದ್ದಾರೆ. ಬೇರೆ ಬೇರೆ ಜಿಲ್ಲೆಗಳಿಂದ ಮೆಕ್ಕೆಜೋಳ ರಾಣೆಬೆನ್ನೂರ ಮಾರುಕಟ್ಟೆಗೆ ಬಂದಿದ್ದು, ಸೂಕ್ತ ಬೆಲೆ ಇಲ್ಲ. ಈಗ ಮೆಕ್ಕೆಜೋಳವನ್ನು 1,700 ರಿಂದ 1,950 ರೂಪಾಯಿಗೆ ಖರೀದಿ ಮಾಡುತ್ತಿದ್ದು ರೈತರಿಗೆ ನಷ್ಟ ಆಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಹೊಸದಾಗಿ ನಿರ್ಮಾಣವಾದ ಮೆಗಾ ಮಾರ್ಕೆಟ್ ಕರ್ನಾಟಕದಲ್ಲಿಯೇ ದೊಡ್ಡ ಮಾರುಕಟ್ಟೆಯಾಗಿದೆ. ಇಲ್ಲಿ ಇ-ಟೆಂಡ‌ರ್ ವ್ಯವಸ್ಥೆ ಇದೆ. ಆದರೆ ನಾವು 3ರಿಂದ ಸಾಯಂಕಾಲ 5:30ರವರೆಗೆ ಕಾಯುತ್ತಿದ್ದೇವೆ, ಆಗಿಲ್ಲ. ಇದು ರಾತ್ರಿ 9 ಅಥವಾ 11 ಆದರೂ ಆಗಬಹುದು ಎನ್ನುತ್ತಿದ್ದಾರೆ. ಇದರಿಂದ ರೈತರು ಮುಗಿಸಿಕೊಂಡು ಮನೆಗೆ ಹೋಗಲಿಕ್ಕೆ ತೊಂದರೆ ಆಗುತ್ತದೆ. ಆದ್ದರಿಂದ ಬೆಳಗ್ಗೆ 11ಕ್ಕೆ ಇ-ಟೆಂಡರ್ ಪ್ರಕ್ರಿಯೆ ಮುಗಿಸಿ, ಸಂಜೆ 6ರರೊಳಗೆ ತೂಕ ಮಾಡಿ ಖರೀದಿ ಮಾಡಲಿಕ್ಕೆ ಅನೂಕುಲ ಮಾಡಿಕೊಟ್ಟರೆ, ರೈತರು ಬೇಗ ಕೊಟ್ಟು ಹೊಗಲಿಕ್ಕೆ ಅನುಕೂಲ ಆಗುತ್ತದೆ” ಎಂದರು.

“ಮೆಕ್ಕೆಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ ₹3,000 ಕೊಟ್ಟರೆ ರೈತರಿಗೆ ಅನುಕೂಲ ಆಗುತ್ತದೆ. ರಾಜ್ಯ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಪಿ.ಡಿ.ಎಸ್ ನಿಂದ ಹೊರಗೆ ಇಟ್ಟಿದ್ದರಿಂದ ರೈತರಿಗೆ ಅನ್ಯಾಯವಾಗಿದೆ. ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

“ಜೊತೆಗೆ ಈರುಳ್ಳಿ, ಭತ್ತ, ಬೆಳ್ಳುಳ್ಳಿ ಇತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡಿ ಸರ್ಕಾರ ರೈತರ ಹಿತರಕ್ಷಣೆಯ ಬಗ್ಗೆ ಚಿಂತನೆ ಮಾಡಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರು ಹನುಮಂತಪ್ಪ ದ್ವಿಗಿಹಳ್ಳಿ, ಮಹೇಶ ಕೊಟ್ಟೂರು, ರಾಜಶೇಖರ ದೂದಿಹಳ್ಳಿ, ಮಂಜುನಾಥ ಸಂಬೋಜಿ, ರಾಜೇಶ ಅಂಗಡಿ, ಬಸವರಾಜ ಮೇಗಳಗೇರಿ, ಲಲೀತಾ ಲಮಾಣಿ, ಶೈಲಮ್ಮ ಅರಳಗೇರಿ, ನೀಲಮ್ಮ ಮೇಗಳಗೇರಿ, ಕೊಟ್ರಮ್ಮ ಕಾಯಕದ, ಅಮೀದಾಬಾನಿ ಶೀಡೇನೂರು, ನಾಗಮ್ಮ ತಳವಾರ, ಮಹದೇವಪ್ಪ ಬಣಕಾರ, ಚಂದ್ರಶೇಖರ ಪಾಟೀಲ, ನಿಂಗಪ್ಪ ಸತ್ಯಪ್ಪನವರ, ಪರಸಪ್ಪ ಚಿತ್ತಣ್ಣನವರ ಇನ್ನೂ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...