ಹಾವೇರಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Date:

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಇನ್ಸೂರೆನ್ಸ್ ಕಂಪನಿ ರೈತ ಹೋರಾಟಕ್ಕೆ ಮಣಿದು ಮಧ್ಯಂತರ ಪರಿಹಾರ 129 ಕೋಟಿ ಹಣ ರೈತರ ಖಾತೆಗೆ ಜಮಾ ಮಾಡಿತ್ತು. ಉಳಿದ 69 ಕೋಟಿ ಬಾಕಿ ಹಣ ಕೊಡುವಲ್ಲಿ 2023-24ನೇ ಸಾಲಿನ ಬೆಳೆ ವಿಮಾ ವಿಷಯದಲ್ಲಿ ಸಾಕಷ್ಟು ತಾರತಮ್ಯ ನಡೆದಿದೆ. ಕೇಂದ್ರ ಸರ್ಕಾರ ತಕ್ಷಣ ರೈತರ ನೆರವಿಗೆ ಬರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಜಿಲ್ಲೆಯಲ್ಲಿ 2 ತಿಂಗಳಿಂದ ಜಿಟಿ-ಜಿಟಿ ಸುರಿಯುತ್ತಿರುವ ಮಳೆಯಿಂದ ಬೆಳೆ ನಾಶವಾಗಿದ್ದು ಸರಕಾರ ತಕ್ಷಣ ಬೆಳೆ ಪರಿಹಾರ ಕೊಡಬೇಕು. ಹೆಸ್ಕಾಂ ಕಂಪನಿ ಒಂದು ವರ್ಷದಿಂದ ಹೊಸ ಪಂಪ್‌ಸೆಟ್‌ಗಳಿಗೆ ಅರ್ಜಿ ಪಡೆಯುವುದನ್ನು ನಿಲ್ಲಿಸಿರುವುದರಿಂದ ಬಹಳ ತೊಂದರೆಯಾಗಿದ್ದು ಅರ್ಜಿ ಪಡೆಯಬೇಕು. ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಕೆಲವು ಹಳ್ಳಿಗಳಿಗೆ ರೇಲ್ವೇ ಟ್ರ್ಯಾಕ್ ನಿರ್ಮಿಸಲು ರೈತರ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ.

ತುಂಗಾ ಮೇಲ್ದಂಡೆ ಕಾಲುವೆಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಜಮೀನು ಕಳೆದುಕೊಂಡಿದ್ದು ಕೆ.ಐ.ಡಿ.ಬಿ. ಬಲವಂತವಾಗಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳುವುದನ್ನು ಕೈ ಬಿಡಬೇಕು. ಶಾಶ್ವತ ಬರಗಾಲ ಎದುರಿಸುತ್ತಿರುವ ಜಿಲ್ಲೆಯಲ್ಲಿ ತುಂಗಭದ್ರ, ವರದಾ, ಕುಮದ್ವತಿ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಆಮೆಗತಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಸಾವಿರಾರು ಕೋಟಿ ಹಣವೆಚ್ಚ ಮಾಡಿ ಕಾಮಗಾರಿ ಹಿಂದಿನ ಕೆಲವು ಕೆರೆಗಳಿಗೆ ನೀರು ಬೀಳದೆ ಇರುವುದು ಅಧಿಕಾರಿಗಳ ಅವೈಜ್ಞಾನಿಕ ನೀತಿ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಆರ್ ವಿ ಕೆಂಚಳ್ಳೆರ ಮಾತನಾಡಿ, ಜಿಲ್ಲೆಯಲ್ಲಿ ಕಳೆದ 6 ತಿಂಗಳಿಂದ ಹಾಲಿನ ಸಹಾಯಧನ ನೀಡಿಲ್ಲ. ಹಾಲಿನ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕಳೆದ ನಾಲ್ಕೈದು ತಿಂಗಳಿಂದ ಬರಗಾಲ ಹಾಗೂ ಅತಿವೃಷ್ಟಿಯಿಂದ ಬೆಳೆ ಬಾರದೆ ಇರುವುದರಿಂದ ಬ್ಯಾಂಕುಗಳಲ್ಲಿ ಕೃಷಿ ಸಾಲವನ್ನು ಪಡೆದಿದ್ದು ಸಕಾಲಕ್ಕೆ ಮರುಪಾವತಿ ಮಾಡಲು ಸಾದ್ಯವಾಗಿಲ್ಲ. ಕಟ್ಟುಬಾಕಿಯಾದ ರೈತರಿಗೆ ಒ.ಟಿ.ಎಸ್ ನಲ್ಲಿ ಸಾಲ ಕಟ್ಟಿಸಿಕೋಳ್ಳಬೇಕು.

ಇದನ್ನೂ ಓದಿ ಹಾವೇರಿ | ವಕ್ಫ್‌ ಮಸೂದೆ ಮೂಲಕ ಮುಸ್ಲಿಮರ ಆಸ್ತಿ ಕಸಿಯಲು ಬಿಜೆಪಿ ಹುನ್ನಾರ: ಅಪ್ಸರ್ ಕೊಡ್ಲಿಪೇಟೆ

ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ವಿವಿಧ ತಾಲೂಕು, ಹಳ್ಳಿಗಳ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ...