ಹಾವೇರಿ | ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ: ಕಠಿಣ ಕ್ರಮಕ್ಕೆ ಎಸ್ಎಫ್ಐ, ಡಿವೈಎಫ್ಐ ಒತ್ತಾಯ

Date:

ಬ್ಯಾನರ್ ತೆರವುಗೊಳಿಸುವ ವಿಷಯವಾಗಿ ಹಾವೇರಿ ನಗರಸಭೆ ಪೌರಕಾರ್ಮಿಕರಾದ ರಾಜು ದೊಡ್ಮನಿ ಹಾಗೂ ಪೀರಪ್ಪ ಶಿರಬಡಗಿ ಮತ್ತಿತರರ ಮೇಲೆ ಮಾರಕಾಸ್ತ್ರಗಳಿಂದ ಅಮಾನುಷವಾಗಿ ಮಾರಣಾಂತಿಕ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಹಾಗೂ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಿಲ್ಲಾ ಸಮಿತಿಗಳು ಒತ್ತಾಯಿಸಿದೆ.

- Advertisement -

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆಗಖು, ನಗರದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರ ಮೇಲಿನ ಹಲ್ಲೆಯನ್ನು ಡಿವೈಎಫ್ಐ, ಎಸ್ಎಫ್ಐ ಜಿಲ್ಲಾ ಸಮಿತಿಗಳು ತೀವ್ರವಾಗಿ ಖಂಡಿಸುತ್ತವೆ. ಶಾಂತಿ ಸೌಹಾರ್ದತೆಗೆ ಹೆಸರುವಾಸಿಯಾದ ಹಾವೇರಿ ನಗರದಲ್ಲಿ ಹಾಡಹಗಲೇ ಇಂತಹ ಅಮಾನುಷ ಘಟನೆಗಳು ನಡೆಯುತ್ತಿರುವುದು ದುರದೃಷ್ಟಕರ. ಜಿಲ್ಲಾ ಕೇಂದ್ರ ನಗರದಲ್ಲಿ ಕಾನೂ‌ನು ಸುವ್ಯವಸ್ಥೆಯು ಎಷ್ಟರ ಮಟ್ಟಿಗೆಯಿದೆ ಎಂಬುದನ್ನು ಈ ಗಲಾಟೆ ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನು ಓದಿದ್ದೀರಾ? ಹಾವೇರಿ | ಪೌರ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಈ ಪ್ರಕರಣದಲ್ಲಿ ಪೌರಕಾರ್ಮಿಕರಿಗೆ ಹಲ್ಲೆ ಎಸಗಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಜೊತೆಗೆ ಪೌರ ಕಾರ್ಮಿಕರಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವ ಜೊತೆಯಲ್ಲಿ ನಿರ್ಭೀತರಾಗಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಡಿವೈಎಫ್ಐ, ಎಸ್ಎಫ್ಐ ಜಿಲ್ಲಾ ಸಮಿತಿಗಳು ಆಗ್ರಹಿಸುತ್ತವೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಡಿವೈಎಫ್ಐ ಜಿಲ್ಲಾ ಸಂಚಾಲಕ ನಾರಾಯಣ ಕಾಳೆ, ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...