ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಾವೇರಿ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.
ಪಿ.ಯು.ಸಿ ಯಲ್ಲಿ 93 ಶೇ. ಅಂಕ ಪಡೆದು ತೇರ್ಗಡೆಯಾಗಿರುವ ಕಲಬುರಗಿ ಜಿಲ್ಲೆಯ ಕು. ಸ್ಪಂದನಾ ಎಸ್. ನಡಗೇರಿ ಸೇರಿದಂತೆ ಸಾಧನೆಗೈದ ಪತ್ರಕರ್ತರ ಮಕ್ಕಳಿಗೆ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿ, ಮಾತನಾಡಿದರು. ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ದಿಕ್ಸೂಚಿ ಮಾತನ್ನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಲೀಂ ಅಹ್ಮದ್, ರುದ್ರಪ್ಪ ಲಮಾಣಿ ಸೇರಿದಂತೆ ಹಲವರು ಭಾಗವಸಿದ್ದರು.
