ಪಟಾಕಿ ಅವಘಡ | ಸಾವಿಗೀಡಾದವರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಿಸಿದ ಸಿಎಂ

Date:

ಹಾವೇರಿಯ ಆಲದಕಟ್ಟಿಯಲ್ಲಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಐದು ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.

- Advertisement -

ಪಟಾಕಿ ಗೋದಾಮಿಗೆ ಬೆಂಕಿ ಬಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಆಲದಕಟ್ಟಿಯಲ್ಲಿ ನಡೆದಿದೆ. ಪಟಾಕಿ ಗೋದಾಮಿನ ಮಾಲೀಕನನ್ನು ಹಾವೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮಂಗಳವಾರ ಮಧ್ಯಾಹ್ನದ ವೇಳೆಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದು, ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಮೃತರನ್ನು ದ್ಯಾಮಪ್ಪ​​, ರಮೇಶ್ ಬಾರ್ಕಿ, ಶಿವಲಿಂಗ ಅಕ್ಕಿ, ಜಯಣ್ಣ ಎಂದು ಗುರುತಿಸಲಾಗಿದೆ.

ಮುಂದಿನ ತಿಂಗಳು ಗಣೇಶ ಚತುರ್ಥಿ ಇದ್ದುದರಿಂದ ಗೋದಾಮಿನಲ್ಲಿ ಪಟಾಕಿಗಳನ್ನು ದಾಸ್ತಾನು ಮಾಡಲಾಗಿತ್ತು. ಈ ನಡುವೆ ಅವಘಡ ಸಂಭವಿಸಿದ್ದು, ಕೋಟ್ಯಂತರ ಮೌಲ್ಯದ ಪಟಾಕಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ.

ಗೋದಾಮಿನ ಬಳಿ ವೆಲ್ಡಿಂಗ್​ ಕೆಲಸ ನಡೆಯುತ್ತಿತ್ತು. ವೆಲ್ಡಿಂಗ್ ಮಾಡುವಾಗ ಸಿಡಿದ ಬೆಂಕಿ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...