ಹಾವೇರಿ | ಐದು ಕೋಟಿ ರೂ ಕಾಮಗಾರಿ: ಶಾಸಕ ಶ್ರೀನಿವಾಸ ಮಾನೆ ಚಾಲನೆ

Date:

ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಮೂಲಸೌಲಭ್ಯ ಕಲ್ಪಿಸಿ ಗುಣಮಟ್ಟದ ಶಿಕ್ಷಣ ದೊರಕಿಸಲು ಕಾಳಜಿ ವಹಿಸಲಾಗಿದೆ. ತಾಂತ್ರಿಕ ಶಿಕ್ಷಣ ದೊರಕಿಸಿ, ಗ್ರಾಮೀಣ ಪ್ರದೇಶದ ಯುವ ಸಮೂಹದ ಕೌಶಲ್ಯ ಹೆಚ್ಚಿಸುವುದರಿಂದ ಭವಿಷ್ಯದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಸಿಗಲಿವೆ” ಎಂದು ಶಾಸಕ ಶ್ರೀನಿವಾಸ್ ಮಾನೆ ಅವರು ಪಾಲಿಟೆಕ್ನಿಕ್ ಕಾಲೇಜಿನ ಐದು ಕೋಟಿ ರೂ ಚಾಲನೆ ನೀಡಿ ಹೇಳಿದರು.

- Advertisement -

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಪಟ್ಟಣದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2023-24 ನೇ ಸಾಲಿನ ರಾಜ್ಯ ಅಭಿವೃದ್ಧಿ ಕಾರ್ಯಕ್ರಮದಡಿ ಒಂದು ಕೋಟಿ 5 ಲಕ್ಷ ರೂ. ವೆಚ್ಚದಲ್ಲಿ ಮೊದಲ ಮಹಡಿ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಉದ್ಯೋಗಾಧಾರಿತ ಶಿಕ್ಷಣ ಪಡೆಯುವುದರಿಂದ ಸ್ಥಳೀಯ ಹಂತದಲ್ಲಿಯೇ ಸ್ವ ಉದ್ಯೋಗದಲ್ಲಿ ತೊಡಗುವ ಮೂಲಕ ಸ್ವಾವಲಂಬಿ ಜೀವನ ನಡೆಸಬಹುದಾಗಿದೆ. ಯುವ ಸಮೂಹದ ಕೌಶಲ್ಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿಶೇಷ ಕಾಳಜಿ ವಹಿಸಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಡಿಕೆ, ತೆಂಗು, ಹನಿ ನೀರಾವರಿ ಉಪಕರಣಗಳು ಬೆಂಕಿಗಾಹುತಿ, ರೈತ ಕಂಗಾಲು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಪರಶುರಾಮ ಖಂಡೂನವರ, ಉಪಾಧ್ಯಕ್ಷೆ ವೀಣಾ ಗುಡಿ, ಪ್ರಾಚಾರ್ಯ ಜಗದೀಶ ತಾವರೆ, ಪುರಸಭೆ ಮಾಜಿ ಅಧ್ಯಕ್ಷ ಖುರ್ಷಿದ್ ಹುಲ್ಲತ್ತಿ ಮುಖಂಡರಾದ ರಾಜೂ ಗುಡಿ, ರವಿ ದೇಶಪಾಂಡೆ, ಸಿಕಂದ‌ರ್ ವಾಲಿಕಾರ, ಮಾಲತೇಶ ಕಾಳೇರ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...