ಷೇರು ಮಾರುಕಟ್ಟೆಯಲ್ಲಿ ಹಣ ಹಾಕಿದರೆ ಹೆಚ್ಚಿನ ಲಾಭ ಬರುತ್ತದೆಂದು ನಂಬಿಸಿ ವಂಚಿಸುತ್ತಿದ್ದ ಆರೋಪದ ಮೇಲೆ ಓರ್ವನನ್ನು ಬಂಧಿಸುವಲ್ಲಿ ಹಾವೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಂದ್ರಪ್ಪ ಶಿವಪ್ಪ ತೋಟದ ಬಂಧಿತ ಆರೋಪಿ. ಈತ ಹೆಚ್ಚು ಲಾಭ ಕೊಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಹಾಕಿಸಿಕೊಂಡು ಮೋಸ ಮಾಡುತ್ತಿದ್ದ ಎಂದು ಆರೋಪಿಸಿ ಹಾನಗಲ್ ತಾಲೂಕಿನ ಶೀಗಿಹಳ್ಳಿ ಗ್ರಾಮದ ಮನೋಜ ಹಾದಿಮನಿ ಎಂಬವರು ಹಾವೇರಿ ನಗರದ ಸಿಇಎನ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದರು.
“ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಪ್ರತಿದಿನ ಶೇ.2ಕ್ಕಿಂತ ಹೆಚ್ಚಿನ ಲಾಭ ಕೊಡುತ್ತೇನೆಂದು ನಂಬಿಸಿದ್ದ. ನಂತರ ತನ್ನ ವಿವಿಧ ಬ್ಯಾಂಕ್ ಖಾತೆಗಳಿಗೆ ₹5.85 ಲಕ್ಷ(₹5,83,500) ಹಣ ಹಾಕಿಸಿಕೊಂಡು ನಾಪತ್ತೆಯಾಗಿದ್ದ. ಹೂಡಿಕೆ ಮಾಡಿದ ಹಣ ಮತ್ತು ಲಾಭದ ಹಣವನ್ನೂ ಕೊಡದೆ ಮೋಸ ಮಾಡಿದ್ದಾನೆ” ಎಂದು ಮನೋಜ ಹಾದಿಮನಿ ದೂರಿನಲ್ಲಿ ಉಲ್ಲೇಖಿಸಿದ್ದರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಚಲಿಸುತ್ತಿದ್ದ ಕೆಕೆಆರ್‌ಟಿಸಿ ಬಸ್ಸಿನ ಚಕ್ರ ಸ್ಫೋಟ; ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರ ಮೆಚ್ಚೆಗೆ
ದೂರಿನ ಆಧಾರದ ಮೇರೆಗೆ ಡಿವೈಎಸ್‌ಪಿ ಪ್ರಗ್ಯಾ ಆನಂದ್ ಮಾರ್ಗದರ್ಶನದಲ್ಲಿ ಸಿಪಿಐ ಶಿವಶಂಕರ ಗಣಾಚಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಸಿಇಎನ್ ಕ್ರೈಂ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ವಿಶೇಷ ಸೂಚನೆ: ಜನರ ಮೊಬೈಲ್ಗೆ ಕರೆ ಮಾಡಿ ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಆನ್‌ಲೈನ್ ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಇಲಾಖೆ ಈ ಬಗ್ಗೆ ಜಾಗೃತಿ ಮೂಡಿಸಿದರೂ ಜನರು ಮೋಸ ಹೋಗುತ್ತಲೇ ಇದ್ದಾರೆ. ಅಪರಿಚಿತ ಕರೆಗಳಿಗೆ ಯಾರೂ ಕೂಡ ಪ್ರತಿಕ್ರಿಯೆ ನೀಡದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.