‌ಹಾವೇರಿ | ಅತಿಥಿ ಉಪನ್ಯಾಸಕರ ನೇಮಕ ಮಾಡದ ಸರ್ಕಾರ: ತಿಂಗಳಿಂದ ಪಾಠಗಳಿಲ್ಲದೆ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಕೊಡಲಿ

Date:

Advertisements

ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಕೂಡ ಸರ್ಕಾರ ಅತಿಥಿ ಉಪನ್ಯಾಸಕರ ನೇಮಕ ಮಾಡದಿರುವುದರಿಂದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಭವಿಷ್ಯಕ್ಕೆ ಕೊಡಲಿ ಬೀಳುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೂಡಲೇ ಅತಿಥಿ ಉಪನ್ಯಾಸಕರನ್ನು ಕಾಯಂ ನೇಮಕಾತಿ ಮಾಡಿ, ತ್ವರಿತವಾಗಿ ತರಗತಿಗಳನ್ನು ನಡೆಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಯಿತು.

ನಗರದ ನೀಲನಗೌಡ್ರ ಬಡಾವಣೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ಬಳಿಕ ಪ್ರಾಂಶುಪಾಲರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್ಎಫ್ಐ ಜಿಲ್ಲಾ ಮುಖಂಡ ಅರುಣ್ ನಾಗವತ್ ಮಾತನಾಡಿ, “ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಕೊರತೆ ಇರುವ ಕಾರಣ ಸರ್ಕಾರ ಪ್ರತಿವರ್ಷದಂತೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುತ್ತಿತ್ತು. ಆದರೆ ದುರದೃಷ್ಟವಶಾತ್ 2025-26ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಈವರೆಗೆ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಂತೆ ಸರ್ಕಾರ ಹಾಗೂ ಅತಿಥಿ ಉಪನ್ಯಾಸಕರ ನಡುವಿನ ನೇಮಕಾತಿ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಭವಿಷ್ಯ ಹಾಳಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ” ಎಂದರು.

“ಆದಷ್ಟು ಬೇಗ ಸರ್ಕಾರ ಅತಿಥಿ ಉಪನ್ಯಾಸಕರ ನೇಮಕ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡಲಾಗುವುದು” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಎಸ್ಎಫ್ಐ ಕಾಲೇಜು ಘಟಕ ಅಧ್ಯಕ್ಷೆ ಚೈತ್ರ ಕೊರವರ ಮಾತನಾಡಿ, “ಪ್ರತಿ ವರ್ಷವೂ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೋಧನೆ ಮಾಡುವ ವಿಚಾರವಾಗಿ ವಿದ್ಯಾರ್ಥಿಗಳಿಗೆ ಭಾರೀ ಅನ್ಯಾಯ ನಡೆಯುತ್ತದೆ. ಕಳೆದ ವರ್ಷ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗಾಗಿ ಒಂದು ತಿಂಗಳ ಕಾಲ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಮಾಡಿದ ಪರಿಣಾಮವಾಗಿ ಸರಿಯಾಗಿ ತರಗತಿಗಳ ನಡೆಯಲಿಲ್ಲ. ಪ್ರಸ್ತುತ ದಿನಗಳಲ್ಲಿ ಸರ್ಕಾರವು ಒಂದು ತಿಂಗಳು ಕಳೆದರೂ ಇನ್ನೂ ಕೂಡ ಅತಿಥಿ ಉಪನ್ಯಾಸಕರ ನೇಮಕ ಮಾಡಿಲ್ಲ. ಇದರಿಂದ ವಿದ್ಯಾರ್ಥಿಗಳು ಪಾಠಗಳಿಂದ ದೂರ ಉಳಿಯುತ್ತಿದ್ದಾರೆ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆಯನ್ನು ದೂರ ಮಾಡುವುದಕ್ಕೆ ಎಲ್ಲ ಸರ್ಕಾರಿ ಕಾಲೇಜುಗಳಿಗೆ ಕಾಯಂ ಉಪನ್ಯಾಸಕರ ಅಗತ್ಯವಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಶಹಾಬಾದ್ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮಾನತಿಗೆ ಆಗ್ರಹಿಸಿ ಧರಣಿ

ಕಾರ್ಯದರ್ಶಿ ಗಂಗಾ ಯಲ್ಲಾಪುರ ಮಾತನಾಡಿ, “ರಾಜ್ಯದ ಅತಿಥಿ ಉಪನ್ಯಾಸಕರ ಪರವಾಗಿ ನೀತಿ ನಿಯಮಾವಳಿಗಳನ್ನು ರೂಪಿಸಿ ಸೇವಾ ಭದ್ರತೆ ಒದಗಿಸಿ ಸಕಾಲಕ್ಕೆ ವೇತನವನ್ನು ನೀಡಿ ಕಾಯಂ ನೇಮಕ ಮಾಡಿಕೊಂಡು ಕೂಡಲೇ ತರಗತಿಗಳು ಸುಸಜ್ಜಿತವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಾವಿತ್ರ ಕಡಕೋಳ, ಮುಬಾರಕ್ ಬಾನು ಹೊಂಬಾರದಿ, ಶ್ವೇತಾ ಕಠಾರಿ, ರಿಯನ ನದಾಫ, ಶಾಜಿಯಾ ಹುಳಗೇವಿ, ಸಲ್ಮಾ ನಿಯಕಲ್, ಅಸ್ಮಾ ಕೂಡಪಲಿ, ಸೃಷ್ಟಿ ಜಿ, ಸ್ವಪ್ನ ಹರಿಜನ ,ಗೌರಮ್ಮ ಪಾಟೀಲ್, ಯಶೋದಾ ಕಳಿವಲ್, ನಂದಿನಿ ಅಲದಕಟ್ಟಿ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X