ವಿದ್ಯುತ್ ಖಾಸಗೀಕರಣದ ಪ್ರಸ್ತಾವನೆಯಿಂದ ಹಿಂದೆ ಸರಿದಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ( ಕೋಡಿಹಳ್ಳಿ ಚಂದ್ರಶೇಖರ್) ಜಿಲ್ಲಾ ಅಧ್ಯಕ್ಷ ಅನಿಲ್‌ರಾಜ್ ಡೊಳ್ಳಿನ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟನೆ ನೀಡಿರುವ ಅವರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ವಿದ್ಯುತ್ ಖಾಸಗೀಕರಣದ ವಿರುದ್ಧ ರಾಜ್ಯದಾದ್ಯಂತ. ಪ್ರತಿಭಟನೆ ನಡೆಸುವ ಮೂಲಕ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ತಹಶೀಲ್ದಾರ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ವಿದ್ಯುತ್ ಖಾಸಗೀಕರಣದಿಂದ ರೈತರು ಎದುರಿಸಬಹುದಾದ ಅನಾನುಕೂಲ ಹಾಗೂ ಅಪಾಯದ ಕುರಿತು ರಾಜ್ಯ ಸರ್ಕಾರವನ್ನು ಎಚ್ಚರಿಸುವ ದಿಶೆಯಲ್ಲಿ ಹೋರಾಟ ನಡೆಸಿತ್ತು ಎಂದಿದ್ದಾರೆ.
ವಿದ್ಯುತ್ ಖಾಸಗೀಕರಣದ ವಿಷಯದಲ್ಲಿ ರಾಜ್ಯ ಸರ್ಕಾರವು ರೈತರ ಪರವಾಗಿ ಸಕರಾತ್ಮಕ ನಿಲುವು ಕೈಗೊಂಡಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ಅವರು, ಇದಕ್ಕಾಗಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರನ್ನು ಅಭಿನಂದಿಸಿದ್ದಾರೆ.




