ಹಾವೇರಿ | ಹಾಸ್ಟೆಲ್ ಸೌಲಭ್ಯ ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲ: ವಾರ್ಡನ್‌ಗಳ ಮೇಲೆ ಕ್ರಮಕ್ಕೆ ವಿದ್ಯಾರ್ಥಿಗಳ ಧರಣಿ

Date:

ಹಾಸ್ಟೆಲ್ ಮೂಲಭೂತ ಸೌಕರ್ಯಗಳಿಂದ ವಂಚಿಸಿ, ಹಾಸ್ಟೆಲ್ ಅನ್ಯಾಯವನ್ನು ಪ್ರಶ್ನೆ ಮಾಡಿದ ವಿದ್ಯಾರ್ಥಿಗಳ ಟಾರ್ಗೆಟ್ ಖಂಡಿಸಿ, ವಾರ್ಡನ್ ಮಾಡಿದ ತಪ್ಪನ್ನು ಮುಚ್ಚಿಹಾಕಲು ಪಾಲಕರಿಗೆ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿದ ವಾರ್ಡನ್ ಅಮಾನತು ಮಾಡಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳು ಧರಣೆ ನಡೆಸಿದರು.

- Advertisement -

ಹಾವೇರಿ ತಾಲೂಕಿನ ಗಾಂಧಿಪುರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಸರಿಯಾದ ಉತ್ತಮ ಗುಣಮಟ್ಟದ ಆಹಾರ ನೀಡುವುದಿಲ್ಲ, ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ಪುಸ್ತಕಗಳು, ಆಟದ ಸಲಕರಣೆಗಳು ಸೇರಿದಂತೆ ಹಾಸ್ಟೆಲ್ ಸೌಕರ್ಯಗಳನ್ನು ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿ ತಾಲೂಕು ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಪತ್ರ ಬರೆಯಲಾಗಿದೆ ಹಾಗೂ ಕಳೆದ ಡಿಸೆಂಬರ್ ತಿಂಗಳಲ್ಲಿ ಹೋರಾಟವನ್ನು ಕೂಡ ಮಾಡಿದ್ದಾರೆ. ಆದರೂ ಅಧಿಕಾರಿಗಳ ಯಾವುದೇ ರೀತಿಯ ಕ್ರಮಕೈಗೊಳದೆ ಕೇವಲ ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ವಿದ್ಯಾರ್ಥಿಗಳು ನಡೆಸುತ್ತಿರುವ ನ್ಯಾಯಯುತ ಹೋರಾಟ ಧರಣಿಯನ್ನು ಬೆಂಬಲಿಸಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ಹಾಸ್ಟೆಲ್ ಅವ್ಯವಸ್ಥೆ, ಅನ್ಯಾಯದ ವಿರುದ್ಧ ಪ್ರಶ್ನೆ ಮಾಡಿದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಅವರ ಪಾಲಕರಿಗೆ ಇಲ್ಲಸಲ್ಲದ ಆರೋಪಗಳನ್ನು ತಾವು ಮಾಡಿದ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ರೀತಿಯ ಪಿತೂರಿ ಮಾಡುತ್ತಿರುವುದು ಸರಿಯಲ್ಲ ಖಂಡನೀಯ. ಕೋತಿ ತಾನು ತಿನ್ನುವುದು ಮೇಕೆ ಮೂತಿಗೆ ತೋರಿಸಿತ್ತು ಅನ್ನೊ ರೀತಿಯಲ್ಲಿ ವಾರ್ಡನ್ ತಾನು ಮಾಡಿದ ಭ್ರಷ್ಟಾಚಾರ, ಅವ್ಯವಸ್ಥೆ, ಅನ್ಯಾಯವನ್ನು ಮುಚ್ಚಿಕೊಳ್ಳಲು ವಿದ್ಯಾರ್ಥಿಗಳ ಮನೆಗೆ ಹೋಗಿ ಆರೋಪ ಮಾಡುತ್ತಿರುವುದು ಸೂಕ್ತ ತನಿಖೆ ನಡೆಸಬೇಕು ಸಂಬಂಧಿಸಿದ ವಾರ್ಡನ್ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್‌ಎಫ್‌ಐ 8

ಎಸ್ಎಫ್ಐ ಹಾಸ್ಟೆಲ್ ಘಟಕ ಅಧ್ಯಕ್ಷ ಪರಶುರಾಮ ಕೊಪ್ಪಳದ ಮಾತನಾಡಿ, ಊಟ, ವಸತಿ ಸಮಸ್ಯೆಗಳು, ಪುಸ್ತಕ, ಕಂಪ್ಯೂಟರ್ ಲ್ಯಾಬ್ ತೆರೆಯಿರಿ ಎಂದು ಕೇಳಿದರೆ ಸರಿಯಾಗಿ ಸ್ಪಂದಿಸದ ವಾರ್ಡನ್ ವರ್ಗಾವಣೆ ಮಾಡಿ ಎಂದು ತಾಲೂಕು ಅಧಿಕಾರಿಗಳಿಗೆ ದೂರ ನೀಡಿದರಿಂದ ವಿದ್ಯಾರ್ಥಿಗಳ ಮನೆಗೆ ವಾರ್ಡನ್ ಲಕ್ಷ್ಮಣ ಅವರು ಹೋಗಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ. ಆತಂಕಕ್ಕೆ ಒಳಗಾದ ಪಾಲಕರು ವಿದ್ಯಾರ್ಥಿಗಳಿಗೆ ಬೈದಾಡಿ ಕಾಲೇಜಿಗೆ ಹೋಗಬೇಡಿ ಎಂದು ಗಲಾಟೆ ಮಾಡಿದ್ದಾರೆ ಎಂದು ತಮ್ಮ ಅಳಲು ತೋಡಿಕೊಂಡರು ಎಂದರು.

ಸ್ಥಳಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಆಂಜನೇಯ ಅವರನ್ನು ಕಿರಾಣಿ, ತರಕಾರಿ ದಾಸ್ತಾನು ಕೊಠಡಿ ಪರಿಶೀಲನೆ ನಡೆಸಲು ಒತ್ತಾಯಿಸಿದರು. ಒತ್ತಡಕ್ಕೆ ಮಣಿದು ಪರಿಶೀಲನೆ ನಡೆದ ಅಧಿಕಾರಿಗಳು ಹುಳು ಬಿದ್ದಿದ್ದ ಕಾಳು ಕಡ್ಡಿ, ಕೊಳೆತ ತರಕಾರಿ ನೋಡಿ ಕೋಪಗೊಂಡು ವಾರ್ಡನ್ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಮಂಗಳೂರು | ಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ ಪೊಲೀಸರು!

‘ಭರವಸೆ ಬೇಡ. ಆದೇಶ ಬೇಕು. ಅಲ್ಲಿಯವರೆಗೂ ಕೊಳೆತ ತರಕಾರಿ, ಹುಳು ಬಿದ್ದ ಪದಾರ್ಥಗಳನ್ನು ಹಾಸ್ಟೆಲ್ ಮುಂದೆ ಇಟ್ಟು ಧರಣಿ ಮುಂದುವರೆಸುತ್ತೇವೆ’ ಎಂದು ವಿದ್ಯಾರ್ಥಿಗಳು ಪಟ್ಟುಹಿಡಿದರು.

ಈ ಸಂದರ್ಭದಲ್ಲಿ ಮಂಜುನಾಥ್ ಹುಲಮನಿ, ವಸಂತ್ ವಡ್ಡರ, ರಘುಪತಿ ಕರಮ್ಮನವರ, ಅರುಣ್ ಮಿನಕಟ್ಟಿ, ಕೃಷ್ಣ ಕೆಸರಹಳ್ಳಿ, ಕುಶಾಲ್ ಲಮಾಣಿ, ಸುನಿಲ್ ಲಮಾಣಿ, ನಾಗೇಂದ್ರ ಎಮ್, ಕಿರಣ್ ಲಮಾಣಿ, ನವೀನ ಬಡ್ಡೆಪ್ಪನವರ, ಅರುಣ್ ಕುಮಾರ್ ನಾಗವತ್, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...