ಹಾವೇರಿ | ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ; ಕಠಿಣ ಕಾಯ್ದೆ ರೂಪಿಸಲು SFI ಆಗ್ರಹ

Date:

ಹುಬ್ಬಳ್ಳಿಯ ಇನಾಂ ವೀರಾಪುರದ ಗರ್ಭಿಣಿ ಯುವತಿ ಮಾನ್ಯಾ ಪಾಟೀಲ ಮರ್ಯಾದೆಗೇಡು ಹತ್ಯೆ ಖಂಡಿಸಿ, ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಲು ಹಾಗೂ ಕಠಿಣ ಕಾಯ್ದೆ ರೂಪಿಸಲು ಆಗ್ರಹಿಸಿ ಹಾವೇರಿ ಜಿಲ್ಲೆಯ ಹಿರೇಕೆರೂರ ಪಟ್ಟಣದ ತಹಶೀಲ್ದಾರ ಕಚೇರಿ ಎದುರು SFI ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿದ ನಂತರ ಎಸ್ಎಫ್ಐ ಜಿಲ್ಲಾ ಮುಖಂಡ ಅರುಣ್ ನಾಗವತ್ ಮಾತನಾಡಿ, “ಮರ್ಯಾದಾ ಹತ್ಯೆ ಪಿಡುಗನ್ನು ಬುಡಸಮೇತ ಕಿತ್ತುಹಾಕಲು ಸರ್ಕಾರ ಇಚ್ಛಾಶಕ್ತಿ ತೋರಬೇಕು. ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ, ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಅಮಾನವೀಯ ಅಪರಾಧಗಳನ್ನು “ಘೋರ ಅಪರಾಧ” ಎಂದು ಪರಿಗಣಿಸಿ, ಮರ್ಯಾದಾ ಹತ್ಯೆ ವಿರುದ್ಧ ಕಠಿಣ ಕಾಯ್ದೆ ರೂಪಿಸಲು ಸರ್ಕಾರ ಮುಂದಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಅನ್ಯ ಜಾತಿ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದಕ್ಕೆ ಏಳು ತಿಂಗಳ ಗರ್ಭಿಣಿಯಾಗಿದ್ದ ಮಾನ್ಯಾ ಪಾಟೀಲ ಮೇಲೆ ಸ್ವತಃ ತಂದೆ ಹಾಗೂ ಕುಟುಂಬಸ್ಥರು ನಡೆಸಿದ್ದ ಮರ್ಯಾದೆಗೇಡು ಭೀಕರ ಹತ್ಯೆಯು ನಾಗರೀಕ ಸಮಾಜಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಅಮಾನವೀಯವಾಗಿ ಹತ್ಯೆ ಮಾಡಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಅಂತರ್ಜಾತಿ ವಿವಾಹವಾಗುವ ಎಲ್ಲ ಯುವಕ ಯುವತಿಯರಿಗೆ ಸೂಕ್ತ ಕಾನೂನು ರಕ್ಷಣೆ ನೀಡಬೇಕು. ಅವರಿಗೆ ಸಾಮಾಜಿಕವಾಗಿ ಆರ್ಥಿಕ ಬಲ ತುಂಬಲು ಪ್ರೋತ್ಸಾಹ ಧನ ಹೆಚ್ಚಳಗೊಳಿಸಬೇಕು ಹಾಗೂ ಮೀಸಲಾತಿ ಸೌಲಭ್ಯ ಒದಗಿಸುವುದು ಸೇರಿದಂತೆ ವಿಶೇಷ ಸೌಲಭ್ಯಗಳನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಹಾವೇರಿ | ಕಲುಷಿತ ಆಹಾರ ಸೇವನೆ; ಹಾಸ್ಟೆಲ್ ವಿದ್ಯಾರ್ಥಿಗಳ ಅಸ್ವಸ್ಥ, ಆಸ್ಪತ್ರೆಗೆ ದಾಖಲು

“ಮುಂದೆ ಈ ರೀತಿ ಘಟನೆಗಳು ನಡೆಯದಂತೆ ಈಗಾಗಲೇ ಅವಮರ್ಯಾದಾ ಹತ್ಯೆಗೆ ಸಂಬಂಧಿಸಿದಂತೆ ಸುಪ್ರೀಂ ‌ಕೋರ್ಟ್ ಹಲವು ಮಹತ್ವದ ಆದೇಶಗಳನ್ನು ನೀಡಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ದೇಶದ ಸರ್ವೊಚ್ಛ ನ್ಯಾಯಾಲಯದ ಆದೇಶಗಳನ್ನು ಬದ್ದತೆಯಿಂದ ಪಾಲಿಸುವ ಮೂಲಕ ಸಮಾಜದಲ್ಲಿ ಮರ್ಯಾದೆಗೇಡು ಹತ್ಯೆಯ ವಿರುದ್ದ ಕಠಿಣ ಕಾನೂನು ಜಾರಿಗೆ ತರಬೇಕು” ಎಂದರು.

ಮನವಿ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಹರ್ಷಾ ಕೆ, ವಿನಯ್ ಚೌಟಿ, ಚೇತನ್ ಟಿ, ಮಂಜು ಹೆಚ್, ಪ್ರಮೋದ್ ಜಿ, ಸುನಿಲ್ ಎ, ಅಮೀರ್ ಖಾನ್, ಶಿವಪ್ಪ ಅಂಗಡಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡಿ: ಉಮಾಶ್ರೀಗೆ ಕುತುಬುದ್ದೀನ್ ಕಾಜಿ ಮನವಿ

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡುವುದು, ಬಾಕಿ ಉಳಿದಿರುವ ಕಾಮಗಾರಿಗಳನ್ನು...

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...