ಹಾವೇರಿ |ತಡಸ ಹುಬ್ಬಳ್ಳಿ  ಶಿರಸಿ ರಸ್ತೆ, ಕಾಮಗಾರಿ ಅಪೂರ್ಣ; ಸರಿಪಡಿಸದಿದ್ದರೆ ಕರವೇ ಪ್ರತಿಭಟನೆ

Date:

ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಲ್ಲಿ ಅನೇಕ ಹೋರಾಟಗಳಿಂದ ಹುಬ್ಬಳ್ಳಿ ಶಿರಸಿ ರಸ್ತೆಯ ಕಾಮಗಾರಿಯು ಮಂಜುರಾಗಿ ಚಾಲನೆಗೊಂಡಿತ್ತು ಆದರೆ ಈ ಕಾಮಗಾರಿಯು ಪೂರ್ಣಗೊಳ್ಳದೆ ಅಪೂರ್ಣವಾಗಿದೆ” ಎಂದು ಕರವೇ ಸ್ವಾಭಿಮಾನಿ ಬಳಗ ಮುಖಂಡರು ಹಾವೇರಿ ಜಿಲ್ಲೆಯ ಶಿಗ್ಗಾವಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ನಂತರ ಕತವೇ ಸ್ವಾಭಿಮಾನಿ ಬಳಗ ಜಿಲ್ಲಾಧ್ಯಕ್ಷರು ಯಲ್ಲಪ್ಪ ಮರಾಠೆ ಮಾತನಾಡಿ, “ಈ ರಸ್ತೆಯ ಮಧ್ಯದಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಬೇಕಾಗಿತ್ತು. ರಸ್ತೆಯ ಅಕ್ಕ ಪಕ್ಕದಲ್ಲಿ ಪುಟ್ಬಾತ್ ನಿರ್ಮಾಣವಾಗಬೇಕಾಗಿತ್ತು. ಕಾಮಗಾರಿ ಪ್ರಾರಂಭಗೊಂಡು ಸುಮಾರು ವರ್ಷಗಳೇ ಕಳೆದು ಹೋದರು ಇನ್ನೂ ಆಗಿಲ್ಲ. ಕಾಮಗಾರಿಯೂ ಕೂಡ ಪೂರ್ಣಗೊಂಡಿಲ್ಲ. ಪುಟ್ಬಾತ್ ಮತ್ತು ರಸ್ತೆಯ ಮಧ್ಯದಲ್ಲಿ ವಿದ್ಯುತ್ ಇಲ್ಲದೆ ಪಾದಾಚಾರಿಗಳಿಗೆ ಬಹಳಷ್ಟು ತೊಂದರೆಗಳಾಗುತ್ತವೆ. ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

“ಇದಕ್ಕೆ ಸಂಬಂಧಿಸಿದಂತೆ 10 ಹಲವಾರು ಬಾರಿ ನಮ್ಮ ಸಂಘಟನೆಯಿಂದ ಮೌಕಿಕವಾಗಿ ಹಾಗೂ ಲಿಖಿತವಾಗಿ ದೂರು ಸಲ್ಲಿಸಿದರು ಪ್ರಯೋಜನವಾಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಗುತ್ತಿಗೆ ಪಡೆದ ಗುತ್ತಿಗೆದಾರನ ಮೇಲೆ ಯಾವುದೇ ಕ್ರಮ ಕೈಗೊಳ್ಳದಿದ್ದು, ಲೋಕೋಪಯೋಗಿ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ನಮಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಅಧಿಕಾರಿಗಳು ಶಾಮೀಲಾಗಿರುವುದು ಕಂಡು ಬರುತ್ತದೆ. ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಈ ಹುಬ್ಬಳ್ಳಿ ಶಿರಸಿ ರಸ್ತೆಯ ಕಾಮಗಾರಿಯು ಗ್ರಾಮದ ಜನರ ಬಹುದಿನದ ಕನಸಾಗಿತ್ತು. ಆದರೆ ಇದುವರೆಗೆ ಕಾಮಗಾರಿಯು ಅಪೂರ್ಣಗೊಂಡಿದ್ದು, ಗ್ರಾಮದ ಜನರಲ್ಲಿ ಬೇಸರ ಮೂಡಿಸುತ್ತಿದೆ. ಆದ ಕಾರಣ ತಾವುಗಳು ಸಂಬಂಧಪಟ್ಟ ಗುತ್ತಿಗೆ ಪಡೆದ ಗುತ್ತಿಗೆದಾರನಿಗೆ ಸೂಕ್ತ ನಿರ್ದೇಶನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಮನವಿ ಸಲ್ಲಿಸಿದರು.

“ಒಂದು ವೇಳೆ ಇನ್ನು 15 ದಿನಗಳ ಒಳಗಾಗಿ ಕಾಮಗಾರಿಯೂ ಆರಂಭಗೊಳ್ಳದೆ ಇದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ತಮ್ಮ ಕಾರ್ಯಾಲಯದ ಎದುರುಗಡೆ ಅಹೋರಾತ್ರಿ ಪ್ರತಿಭಟನೆಗೆ ಮುಂದಾಗ ಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಮನವಿ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಳಗ ರಾಜ್ಯ ಉತ್ತರ ಕರ್ನಾಟಕ ಕಾರ್ಯಾಧ್ಯಕ್ಷರು ಯೂಸೂಫ್ ಸೈಕಲಗಾರ, ಸಂಘಟನೆಯ ತಾಲೂಕು ಅಧ್ಯಕ್ಷರು ಶಂಕರ್ ಬಡಿಗೇರ, ಉಪಾಧ್ಯಕ್ಷರು ಶಿವು ಕಮ್ಮಾರ, ರಾಜಾಭಕ್ಷ ಮಾನೆಗಾರ, ದೇವರಾಜ ಈಳೇಗಾರ, ಸೇರಿದಂತೆ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ...

ಉತ್ತರ ಕನ್ನಡ | ಸೆ.24ರಂದು ಯೆಲ್ಲೋ ಅಲರ್ಟ್‌: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...