ಹಾವೇರಿ | ಪ್ರತಿ ಹಳ್ಳಿಗಳಲ್ಲೂ ಮಾನವ ಬಂಧುತ್ವದ ನಡೆ ಸಮುದಾಯಗಳ ಕಡೆ ಕಾರ್ಯಕ್ರಮ : ಎಚ್.ಆಯ್.ಬೆಳಗಲಿ

Date:

“ಮಾನವ ಬಂಧುತ್ವದ ನಡೆ-ಸಮುದಾಯಗಳ ಕಡೆ” ಎಂಬ ವಿನೂತನವಾದ ಕಾರ್ಯಕ್ರಮವನ್ನು ಶಿಗ್ಗಾಂವ ತಾಲೂಕ ಸಮಿತಿಯಿಂದ ಹಮ್ಮಿಕೊಂಡಿದ್ದು, ಈವತ್ತಿನಿಂದ ಈ ಕಾರ್ಯಕ್ರಮವನ್ನು ಪ್ರತಿ ಹಳ್ಳಿಗಳಲ್ಲಿ ಹಮ್ಮಿಕೊಂಡು, ಬುದ್ಧ ಬಸವ ಅಂಬೇಡ್ಕರ ರವರ ತತ್ವ-ಸಿದ್ದಾಂತ, ವಿಚಾರಗಳನ್ನು ಮತ್ತು ಆದರ್ಶಗಳನ್ನು ಪ್ರತಿ ಸಮುದಾಯದ ಜನರಿಗೆ, ಜನ ಸಾಮಾನ್ಯರಿಗೆ ತಿಳಿಸುವ ಕಾರ್ಯಕ್ರಮ ಆಗಿರುತ್ತದೆ” ಎಂದು ಮಾನವ ಬಂಧುತ್ವ ವೇದಿಕೆ ತಾಲ್ಲೂಕು ಸಂಚಾಲಕರು ಎಚ್. ಆಯ್. ಬೆಳಗಲಿ ಹೇಳಿದರು.

- Advertisement -

ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ನಾಡು ಕಂಡ ಸರಳ, ಸಜ್ಜನಿಕ, ವಿಷೇಶ ಮತ್ತು ವಿಶಿಷ್ಟ ರಾಜಕಾರಣಿ, ವಿಜಾರವಾದಿ ಚಿಂತಕ ಸಮಾಜ ಸುಧಾರಕ ಹಾಗೂ ಅಹಿಂದ ರತ್ನ ಸನ್ಮಾನ್ಯ ಶ್ರೀ ಸತೀಶ ಜಾರಕಿಹೋಳಿಯವರು  ಬುದ್ಧ ಬಸವ ಅಂಬೇಡ್ಕರ ರವರ ತತ್ವ-ಸಿದ್ದಾಂತ, ವಿಚಾರ ಮತ್ತು ಆದರ್ಶಗಳ ಅಡಿಯಲ್ಲಿ “ಮಾನವ ಬಂಧುತ್ವ ವೇದಿಕೆಯನ್ನು” ಹುಟ್ಟು ಹಾಕಿ, ಸಂಸ್ಥಾಪ ಅಧ್ಯಕ್ಷರಗಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

‘ಬುಧ್ದನ ಶಾಂತಿ ಮತ್ತು ಪ್ರೀತಿ’ ‘ಬಸವಣ್ಣನ ಕಾಯಕ ತತ್ವ’ ಮತ್ತು ‘ಅಂಬೇಡ್ಕರವರ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು’ ಪ್ರತಿ ಮನೆಗೆ, ಸಮುದಾಯಗಳಿಗೆ, ಸಮಾಜಕ್ಕೆ ತಿಳಿಸುವ ಮೂಲಕ ವೈಚಾರಿಕತೆ ಮತ್ತು ವೈಜ್ಞಾನಿಕ ಚಿಂತನೆಗಳತ್ತ ಜನರನ್ನು ಕರೆಯುವ ಕಾರ್ಯಕ್ರಮ ಇದಾಗಿದೆ” ಎಂದು ಹೇಳಿದರು.

“ಇವತ್ತಿಗೂ ಹಳ್ಳಿಗಳ್ಳಿ ಜಾತಿ-ಧರ್ಮದ ಆಧಾರದಲ್ಲಿ ತಾರತಮ್ಯ, ಅಸ್ಪೃಶ್ಯತೆ, ಮೇಲು-ಕಿಳು, ಕೋಮುದ್ವೇಷ ಮತ್ತು ಮೂಢನಂಬಿಕೆ ಬಹಳಷ್ಟು ಇದೆ. ಸಂವಿಧಾನ ಖಾತ್ರಿಪಡಿಸುವ ಹಕ್ಕು ಹಾಗೂ ಕರ್ತವ್ಯಗಳ ಕುರಿತು ಜಾಗೃತಿ ಮೂಡಿಸಿ, ಶಾಂತಿ-ಸೌಹಾರ್ಧತೆ ಮತ್ತು ಸಮಾನತೆಯಿಂದ ಕೂಡಿರುವ ಅತ್ಯತ್ತಮ ಸಮಾಜವನ್ನು ಕಟ್ಟುವುದಕ್ಕಾಗಿ ಈ ಕಾರ್ಯಕ್ರಮವನ್ನು ಪ್ರತಿ ಹಳ್ಳಿಗಳಲ್ಲಿ ಹಮ್ಮಿಕೊಳ್ಳಲಿದ್ದೇವೆ” ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನಾ ಸಂಚಾಲಕರು ಶೇಕಪ್ಪ ಡಿ ಮಾದರ ಹಾಗೂ ಮೆಹಬೂಬಸಾಬ ನದಾಫ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...