ಹಾವೇರಿ | ಭಾರತದ ಅಭಿವೃದ್ಧಿಗೆ ಬಡವರಿಗೆ ಅನ್ನ, ಅಕ್ಷರ ಹರಡಬೇಕು: ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್

Date:

ಭಾರತ ಅಭಿವೃದ್ಧಿಯಾಗಬೇಕಾದರೆ ಬಡವರಿಗೆ ಅನ್ನ ಹಾಗೂ ಅಕ್ಷರ(ಶಿಕ್ಷಣ)ವನ್ನು ಹರಡಬೇಕು. ಪೂಜಾರಿ, ಪೌರೋಹಿತ್ಯವನ್ನು ನಿರ್ಮೂಲನೆ ಮಾಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್‌ ಅಭಿಪ್ರಾಯಪಟ್ಟರು.

- Advertisement -

ಹಾವೇರಿ ನಗರದಲ್ಲಿ ಎಸ್ಎಫ್ಐ ಹಾಸ್ಟೆಲ್ ಘಟಕದಿಂದ ಆಯೋಜಿಸಿದ್ದ ಯುವಜನರ ಸ್ಪೂರ್ತಿ, ಮಹಾ ಮಾನವತಾವಾದಿ ಸ್ವಾಮಿ ವಿವೇಕಾನಂದರ ಜನ್ಮದಿನ ಹಾಗೂ ಯುವಜನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಮಾನವೀಯತೆಯನ್ನು ಮರೆತ ಧರ್ಮಗಳು ಸಂಘರ್ಷಕ್ಕ ದಾರಿ ಮಾಡಿಕೊಡುತ್ತಿವೆ. ಚಿಕಾಗೋ ಸಮ್ಮೇಳನದಲ್ಲಿ ಸಹೋದರ-ಸಹೋದರಿಯರೆ ಎನ್ನುವ ಮೂಲಕ ಇಡೀ ಭಾರತ ದೇಶದ ಬೌದ್ಧಿಕ ಶ್ರೀಮಂತಿಕೆ ತೆರೆದಿಟ್ಟ ವಿವೇಕಾನಂದರನ್ನು ವಿದ್ಯಾರ್ಥಿ-ಯುವಜನರು ಆದರ್ಶವಾಗಿ ತೆಗೆದುಕೊಂಡು ಅವರ ವಿಚಾರಗಳನ್ನು ಅಭ್ಯಾಸ ಮಾಡಬೇಕು” ಎಂದರು.

“ಕುವೆಂಪು ಹಾಗೂ ವಿವೇಕಾನಂದರ ವಿಚಾರಧಾರೆಗಳು ಒಂದೇ ಆಗಿದ್ದವು. ವಿವೇಕಾನಂದರ ಹೆಸರಲ್ಲಿಯೂ ಇಂದು ಕೋಮುಗಲಭೆ, ಧರ್ಮಗಳ ಹೆಸರಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಕೆಲ ಮೂಲಭೂತವಾದಿಗಳು ಹೊರಟಿದ್ದಾರೆ. ಮೂಲಭೂತವಾದಿಗಳು ವಿವೇಕಾನಂದರನ್ನು ಕೇವಲ ಧರ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವುದು ವಿಷಾದನೀಯ. ಹಾಗಾಗಿ ಇಂದಿನ ಯುವಜನತೆ ವಿವೇಕಾನಂದರ ನಿಜ ಇತಿಹಾಸವನ್ನು ಓದುವ ಮೂಲಕ ಮೂಲಭೂತವಾದಿಗಳಿಂದ ಅವರ ಸಿದ್ಧಾಂತಗಳನ್ನು ಬಿಡುಗಡೆಗೊಳಿಸಿ ಸೌಹಾರ್ದತೆಯನ್ನು ಕಾಪಾಡಬೇಕಿದೆ” ಎಂದು ಯುವಜನರನ್ನು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಹಾವೇರಿ | ಎತ್ತಿನಗಾಡಿಗೆ ಬೈಕ್ ಡಿಕ್ಕಿ ; ತಾಯಿ ಮಗ ಸ್ಥಳದಲ್ಲೇ ಸಾವು

ಕಾರ್ಯಕ್ರಮದಲ್ಲಿ ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷ ಮುತ್ತುರಾಜ್ ದೊಡ್ಡಮನಿ, ತಾಲೂಕು ಅಧ್ಯಕ್ಷ ಸುಲೆಮಾನ್ ಮತ್ತಿಹಳ್ಳಿ, ಹಾಸ್ಟೆಲ್ ಘಟಕ ಅಧ್ಯಕ್ಷ ಪ್ರಜ್ವಲ್ ಹರಿಜನ, ಮುಖಂಡರಾದ ವಿರೂಪಾಕ್ಷ ಕೆ, ಧನುಷ್ ದೊಡ್ಡಮನಿ, ತೇಜಸ್ ಎನ್ ಡಿ, ಮನು ಕೆ, ಅಜೇಯ ಎಚ್, ಸಂಜೀವ್ ಪಾಟೀಲ್, ಪ್ರಕಾಶ್ ಕೆ ಆರ್, ನಾಗರಾಜ ಎಲ್, ನವೀನ ಲಮಾಣಿ, ವಿನಾಯಕ ಅಸುಂಡಿ, ರಘು ಎಲ್, ಪುನೀತ್ ಲಮಾಣಿ, ಸಿಬ್ಬಂದಿಗಳಾದ ವೆಂಕಟೇಶ ಕೊರಗರ, ರವಿ ಹಾವೇರಿ, ಫಕೀರಪ್ಪ ಭಜಂತ್ರಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...