ಹಾವೇರಿ | ಸಮಾಜವಾದ ಜಾರಿಯಾದರೆ ಶ್ರಮಿಕರಿಗೆ ತಮ್ಮ ಶ್ರಮದ ಪ್ರತಿಫಲ ಸಿಗುತ್ತದೆ: ಬಸವರಾಜ ಪೂಜಾರ

Date:

“ದೇಶದ ಚುಕ್ಕಾಣಿ ಹಿಡಿದಿರುವ ಬಂಡವಾಳಶಾಹಿ ವರ್ಗ ತೊಲಗಲಿ ಸಮಾಜವಾದ ಜಾರಿಯಾಗಬೇಕು ಆಗ ಮಾತ್ರ ಶ್ರಮಿಕರಿಗೆ ತಮ್ಮ ಶ್ರಮದ ಪ್ರತಿಫಲ ಸಿಗಲು ಸಾಧ್ಯವಾಗುತ್ತದೆ” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.

- Advertisement -

ಹಾವೇರಿ ನಗರದ ಪರಿವೀಕ್ಷಣಾ ಮಂದಿರದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ) ಜಿಲ್ಲಾ ಸಮಿತಿಗಳು ಶನಿವಾರ ಆಯೋಜಿಸಿದ ಅಂತಾರಾಷ್ಟ್ರೀಯ ಕೆಂಪು ಪುಸ್ತಕ ದಿನದ ಅಂಗವಾಗಿ “ಯು.ಎಸ್.ಸಾಮ್ರಾಜ್ಯಶಾಹಿ ” ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

“ಸಮಾನತೆಯ ಪ್ರತಿಪಾದಕರು, ಕಾರ್ಮಿಕರ ಪಿತಾಮಹ ಕಾರ್ಲ್ ಮಾರ್ಕ್ಸ್ ಮತ್ತು ಫೆಡ್ರಿಕ್ ಎಂಗೆಲ್ಸ್ ಕಮ್ಯೂನಿಸ್ಟ್‌ ಪ್ರಣಾಳಿಕೆಯನ್ನು 1948 ಫೆಬ್ರವರಿ 21 ರಂದು ಪ್ರಕಟಿಸಿ ಬಿಡುಗಡೆ ಮಾಡಿದರು. ಅದರ ಭಾಗವಾಗಿ ಅಂದಿನಿಂದ ಇಂದಿನವರೆಗೂ ಚಳುವಳಿಯ ನಾನಾ ಹಾದಿಯಲ್ಲಿ ಕಮ್ಯೂನಿಸ್ಟ್‌ ಸಾಹಿತ್ಯ ಪುಸ್ತಕಗಳು ಬರೆದು ಒಂದುಗೂಡಿಸುವ ಹೋರಾಟದ ಭಾಗವೇ ಕೆಂಪುಪುಸ್ತಕ ದಿನ” ಎಂದರು.‌

“ಕೆಂಪುಪುಸ್ತಕ ದಿನದ ಹಿನ್ನೆಲೆಯಲ್ಲಿ ಹಿರಿಯ ಸಂಗಾತಿ ವಸಂತರಾಜ ಎನ್ ಕೆ ಅವರು ಕನ್ನಡದಲ್ಲಿ ಬರೆದ ಯು.ಎಸ್.ಸಾಮ್ರಾಜ್ಯಶಾಹಿ ಪುಸ್ತಕವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಿ ಅಮೇರಿಕಾದ ಸಾಮ್ರಾಜ್ಯಶಾಹಿ ನೀತಿಯನ್ನು ಜನರಿಗೆ ಅರ್ಥೈಸಲು ಸಾದ್ಯವಾಗಿದೆ” ಎಂದರು.

ಇಡಾರಿ ಸಂಸ್ಥೆ ಮುಖ್ಯಸ್ಥರು ಹಾಗೂ ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗ ಸದಸ್ಯರು ಪರಿಮಳ ಜೈನ್ ಮಾತನಾಡಿ, “ಕಾರ್ಮಿಕರು ಶ್ರಮಿಸಿ ಸಿದ್ಧಪಡಿಸಿದ ಅನೇಕ ವಸ್ತುಗಳ ಮೇಲೆ ಅಧಿಕಾರ ಇಲ್ಲವಾಗಿಸುವುದೆ ಸಾಮ್ರಾಜ್ಯಶಾಹಿ. ವಸಾಹತುಶಾಹಿಗಳ ಸರ್ವಾಧಿಕಾರ ತಿರಸ್ಕರಿಸಬೇಕಾಗಿದೆ. ಯುವಜನತೆ ಸಾಮ್ರಾಜ್ಯಶಾಹಿ ಪುಸ್ತಕ ಓದಬೇಕು ದೇಶದ ಮೇಲಿನ ಜಾಗತಿಕ ದಬ್ಬಾಳಿಕೆ ತಿಳಿಯಬೇಕಿದೆ” ಎಂದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ಅಮೆರಿಕಾ ಜೊತೆಗೆ ನಡೆದ ಒಪ್ಪಂದ ರೈತರಿಗೆ ಭಾರಿ ದೊಡ್ಡ ಅನ್ಯಾಯವಾಗಿದೆ. ಅಮೇರಿಕಾದ ಅಧ್ಯಕ್ಷ ಟ್ರಂಪ್ ತನ್ನ ಸರ್ವಾಧಿಕಾರಿ ನೀತಿಗಳಿಂದ ವಿವಿಧ ಸಣ್ಣಪುಟ್ಟ ದೇಶಗಳ ಮೇಲೆ ಪರಿಣಾಮಗಳು ಬಿರುತ್ತವೆ ಅದರ ಎಚ್ಚರಿಕೆಯಿಂದ ನಮ್ಮ ದೇಶದ ಪ್ರಧಾನಿ ಸ್ನೇಹ ಸಂಬಂಧಗಳನ್ನು ಮಾಡಬೇಕು. ಇದರ ಹಿನ್ನಡೆ ಮುನ್ನಡೆಯನ್ನು ಸಾಮ್ರಾಜ್ಯಶಾಹಿ ಪುಸ್ತಕವು ತಿಳಿಸುತ್ತದೆ” ಎಂದರು.

ಈ ಸಂದರ್ಭದಲ್ಲಿ ನಿಮ್ಹಾನ್ಸ್ ಸಂಶೋದಕರಾದ ಡಾ. ಶಿವಾನಂದ ಯರೆಸೀಮಿ, ಎಸ್ಎಫ್ಐ ಡಿವೈಎಫ್ಐ ಮುಖಂಡರಾದ ಅರುಣ ನಾಗಾವತ್, ಬಸವರಾಜ ಬಾರ್ಕಿ, ಖಲಂದರ ಅಲ್ಲಿಗೌಡ್ರ, ಬಸನಗೌಡ ಭರಮಗೌಡ್ರ, ಮಧುಕರ್ ಸನದಿ, ಹಿರಿಯರಾದ ರವೀಂದ್ರನಾಥ್ ಭಟ್, ಬಾಲ ಸಂಘಂ ನ ಧನುಷ್ ದೊಡ್ಮನಿ, ಅನ್ವಿಕಾ ಆರ್.ಬಿ ಹಾಗೂ ತೇಜಸ್ ದೊಡ್ಮನಿ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...