ಹಾವೇರಿ | ವೆನೆಜುವೆಲಾ ಮೇಲೆ ಸಾಮ್ರಾಜ್ಯಶಾಹಿ ಅಮೇರಿಕಾ ಆಕ್ರಮಣ; ಎಸ್ಎಫ್ಐ-ಡಿವೈಎಫ್ಐ ಖಂಡನೆ

Date:

“ಸಾರ್ವಭೌಮ ರಾಷ್ಟ್ರವಾದ ವೆನೆಜುವೆಲಾ ವಿರುದ್ಧ ಅಮೆರಿಕ ಸಂಯುಕ್ತ ಸಂಸ್ಥಾನವು ನಡೆಸಿರುವ ಘೋರ ಸೇನಾ ಆಕ್ರಮಣವನ್ನು ಡಿವೈಎಫ್ಐ ಪ್ರಬಲವಾಗಿ ಖಂಡಿಸುತ್ತದೆ. ವೆನೆಜುವೆಲಾದ ಕ್ಯಾರಕಾಸ್ ಮತ್ತು ಇತರ ಪ್ರದೇಶಗಳಲ್ಲಿ ನಾಗರಿಕ ಮತ್ತು ಮಿಲಿಟರಿ ಸ್ಥಳಗಳ ಮೇಲೆ ಅಮೇರಿಕಾ ನಡೆಸಿರುವ ಬಾಂಬ್ ದಾಳಿಯು ಅಂತರಾಷ್ಟ್ರೀಯ ಕಾನೂನು, ವಿಶ್ವಸಂಸ್ಥೆಯ ಚಾರ್ಟರ್ ಹಾಗೂ ಸಾರ್ವಭೌಮತ್ವ ಮತ್ತು ಹಸ್ತಕ್ಷೇಪ ಮಾಡದಿರುವ ಮೂಲಭೂತ ತತ್ವಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಡಿವೈಎಫ್ಐ ಕಾರ್ಯದರ್ಶಿ ಬಸವರಾಜ ಪೂಜಾರ  ಹೇಳಿದರು.

- Advertisement -

ಹಾವೇರಿ ಪಟ್ಟಣದ ಗಾಂಧಿ ವೃತ್ತದಲ್ಲಿ ಎಸ್ಎಫ್ಐ, ಡಿವೈಎಫ್ಐ ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ವೆನಿಜುವೆಲಾ ದೇಶದ ಮೇಲೆ ಸಾಮ್ರಾಜ್ಯಶಾಹಿ ಅಮೇರಿಕಾದ ಆಕ್ರಮಣವನ್ನು ಖಂಡಿಸಿ, ಅಧ್ಯಕ್ಷ ಮುದುರೋ ಹಾಗೂ‌ ಮುದುರೊ ಪತ್ನಿಯ ಬಿಡುಗಡೆಗಾಗಿ ಆಗ್ರಹಿಸಿ ಮತ್ತು ವೆನೆಜುವೆಲಾ ಜನತೆಗೆ ಸೌಹಾರ್ದ ಬೆಂಬಲ ನೀಡಿ  ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಅಮೇರಿಕಾದ ಈ ದುಷ್ಕೃತ್ಯವು ಪ್ರತ್ಯೇಕ ಘಟನೆಯಲ್ಲ. ಆದರೆ ಏಷ್ಯಾ, ಆಫ್ರಿಕಾ, ಲ್ಯಾಟಿನ್ ಅಮೇರಿಕಾ ಮತ್ತು ಪಶ್ಚಿಮ ಏಷ್ಯಾದಾದ್ಯಂತ ಹಲವಾರು ದೇಶಗಳ ಶಾಂತಿಯುತ ಅಸ್ತಿತ್ವವನ್ನು ನಾಶಪಡಿಸಿದ ಯುಎಸ್ ಸಾಮ್ರಾಜ್ಯಶಾಹಿಯ ದೀರ್ಘ ಮತ್ತು ಹಿಂಸಾತ್ಮಕ ಇತಿಹಾಸದ ಮುಂದುವರಿಕೆಯಾಗಿದೆ. ಇರಾಕ್, ಅಫ್ಘಾನಿಸ್ತಾನ್ ಮತ್ತು ಲಿಬಿಯಾದಿಂದ ಚಿಲಿ, ವಿಯೆಟ್ನಾಂ ಮತ್ತು ಈಗ ವೆನೆಜುವೆಲಾ ಇವುಗಳ ಆಡಳಿತದಲ್ಲಿ ಯುಎಸ್ ಸಾಮ್ರಾಜ್ಯಶಾಹಿಯು ಕುಟೀಲ ನೀತಿಯಿಂದ ಹಸ್ತಕ್ಷೇಪ ನಡೆಸಿರುವುದು ಈ ದೇಶಗಳಲ್ಲಿ ಅಪಾರ ಮಾನವ ಸಂಕಟ, ರಾಜಕೀಯ ಅಸ್ಥಿರತೆ ಮತ್ತು ಆರ್ಥಿಕ ವಿನಾಶಕ್ಕೆ ಕಾರಣವಾಗಿವೆ. ಇವೆಲ್ಲವೂ ಅಮೇರಿಕಾಕ್ಕಿರುವ ಸಂಪನ್ಮೂಲಗಳ ಮೇಲಿನ ಹಾಗೂ ಭೂ ರಾಜಕೀಯ ಪ್ರಾಬಲ್ಯ ಮೆರೆದು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳುವ ಸಾಮ್ರಾಜ್ಯಶಾಹಿಯ ಯುದ್ಧಕೋರ ದಾಹವಾಗಿದೆ. ಜಾಗತಿಕ ಮನುಷ್ಯರಲ್ಲಿ ಶಾಂತಿ ಐಕ್ಯತೆ ಬಯಸುವರೆಲ್ಲರೂ ಸಾಮ್ರಾಜ್ಯಶಾಹಿ ಈ ನಡೆಯನ್ನು ತೀವ್ರವಾಗಿ ಖಂಡಿಸಬೇಕಿದೆ” ಎಂದರು.

“ಭಾರತದ ಯುವಕರು ವೆನೆಜುವೆಲಾದ ಜನರು ಮತ್ತು ಸಾಮ್ರಾಜ್ಯಶಾಹಿಯನ್ನು ವಿರೋಧಿಸುವ ಎಲ್ಲಾ ರಾಷ್ಟ್ರಗಳೊಂದಿಗೆ ಒಗ್ಗಟ್ಟಿನಿಂದ ನಿಂತಿದ್ದಾರೆ. ಸಾಮ್ರಾಜ್ಯಶಾಹಿ ಯುದ್ಧಗಳ ವಿರುದ್ಧ ಒಂದಾಗಲು ಮತ್ತು ಶಾಂತಿ, ಸಾರ್ವಭೌಮತ್ವ ಮತ್ತು ಸ್ವ-ನಿರ್ಣಯವನ್ನು ರಕ್ಷಿಸಲು ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಶಾಂತಿ-ಪ್ರೀತಿಯ ಶಕ್ತಿಗಳಿಗೆ ಎಸ್ಎಫ್ಐ-ಡಿವೈಎಫ್ಐ ಕರೆ ನೀಡುತ್ತವೆ” ಎಂದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ವೆನೆಜುವೆಲಾ ವಿರುದ್ಧದ ಪ್ರಸ್ತುತ ಆಕ್ರಮಣವು ಬಲವಂತವಾಗಿ ಆಡಳಿತ ಬದಲಾವಣೆಯನ್ನು ಹೇರುವ ಮತ್ತು ದೇಶದ ಆಯಕಟ್ಟಿನ ಸಂಪನ್ಮೂಲಗಳನ್ನು, ವಿಶೇಷವಾಗಿ ತೈಲ ಮತ್ತು ಖನಿಜಗಳನ್ನು ವಶಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಬಾಹ್ಯ ಹಸ್ತಕ್ಷೇಪವಿಲ್ಲದೆ ತಮ್ಮ ಸ್ವಂತ ರಾಜಕೀಯ ಭವಿಷ್ಯವನ್ನು ನಿರ್ಧರಿಸುವ ಹಕ್ಕನ್ನು ರಕ್ಷಿಸಿಕೊಳ್ಳುವ ಹೋರಾಟದಲ್ಲಿ ಎಸ್ಎಫ್ಐ – ಡಿವೈಎಫ್ಐ ವೆನೆಜುವೆಲಾದ ಜನರು ಮತ್ತು ಅವರ ಕಾನೂನುಬದ್ಧ ಸರ್ಕಾರದೊಂದಿಗೆ ದೃಢವಾಗಿ ನಿಲ್ಲುತ್ತವೆ” ಎಂದರು.

“ಸಾಮ್ರಾಜ್ಯಶಾಹಿ ಮಿಲಿಟರಿ ಹಸ್ತಕ್ಷೇಪದಿಂದ ಮುಕ್ತವಾಗಿ ಲ್ಯಾಟಿನ್ ಅಮೆರಿಕವನ್ನು ಶಾಂತಿಯ ವಲಯವೆಂದು ಘೋಷಿಸಬೇಕು. ಯುಎಸ್ ಆಕ್ರಮಣವನ್ನು ತಕ್ಷಣವೇ ನಿಲ್ಲಿಸಲು, ಕೆರಿಬಿಯನ್ ಪ್ರದೇಶದಿಂದ ಎಲ್ಲಾ ಯುಎಸ್ ಮಿಲಿಟರಿ ಉಪಸ್ಥಿತಿಯನ್ನು ಹಿಂತೆಗೆದುಕೊಳ್ಳಲು ಎಸ್ಎಫ್ಐ-ಡಿವೈಎಫ್ಐ ಆಗ್ರಹಿಸುತ್ತವೆ. ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಗೈಯ್ಯುತ್ತಿರುವ ಯುಎಸ್ ಸರ್ಕಾರದ ದುರ್ವರ್ತನೆಯನ್ನು ಬಲವಾಗಿ ವಿರೋಧಿಸುತ್ತವೆ” ಎಂದರು.

ಪ್ರತಿಭಟನೆಯಲ್ಲಿ ಸಾಮ್ರಾಜ್ಯಶಾಹಿ ಅಮೇರಿಕಾಗೆ ಧಿಕ್ಕಾರ!

ಅಂತರಾಷ್ಟ್ರೀಯ ಸೌಹಾರ್ದತೆ ಚಿರಾಯುವಾಗಲಿ! ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಡಿಎಸ್ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಉಡಚಪ್ಪ ಮಾಳಗಿ, ಬಹುಜನ ಚಳುವಳಿ ಮುಖಂಡ ಎಮ್.ಕೆ ಮಕಬುಲ್, ಅಲೆಮಾರಿ ಸಮುದಾಯ ಸಂಘಟನೆ ಜಿಲ್ಲಾಧ್ಯಕ್ಷ ಸೆಟ್ಟಿ ವಿಭೂತಿ ನಾಯಕ್, ಅಂಗವಿಕಲ‌ ಸಂಘಟನೆ ಮುಖುಂಡರಾದ ಮಂಜುನಾಥ ಕಮ್ಮಾರ, ಬಸನಗೌಡ ಪಾಟೀಲ, ಎಸ್ಎಫ್ಐ ಡಿವೈಎಫ್ಐ ಮುಖಂಡರಾದ ಅರುಣ ನಾಗಾವತ್, ಚೈತ್ರಾ ಕೊರವರ, ಜೀವನಸಿಂಗ್ ರಜಪೂತ, ಧನುಷ್ ದೊಡಮನಿ, ಸೌಮ್ಯಾ ಕ್ಯಾತನ್ ಸೇರಿದಂತೆ ಇತರರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...