ಹಾವೇರಿ | ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಅನ್ಯಾಯ; ಸಮಿತಿ ರಚನೆಗೆ ರೈತರ ಆಗ್ರಹ

Date:

Advertisements

ಒಣ ಮೆಣಸಿನಕಾಯಿ ಬೆಳೆಗಾರರಿಗೆ ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಒಂದು ಸಮಿತಿ ರಚನೆ ಮಾಡಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಬೇಕು ಎಂದು ಕರ್ನಾಟಕ ರಾಜ ರೈತ ಸಂಘ ಹಾಗೂ ಹಸಿರು ಸೇನೆಯ ಹಾವೇರಿ ಜಿಲ್ಲಾಧ್ಯಕ್ಷ ಎಂ ಎನ್ ನಾಯಕ್ ಆಗ್ರಹಿಸಿದರು.

ಹಾವೇರಿ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿ, ಕೃಷಿ ಸಚಿವರು ಹಾಗೂ ಕೃಷಿ ಇಲಾಖೆಗೆ ಮನವಿ ಸಲ್ಲಿಸಿ ಮಾತಮಾಡಿದರು.

“ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಟೆಂಡರ್ ನಂತರ ರೈತರು ಅನ್ಯಾಯಕ್ಕೆ ಒಳಗಾಗಿ ತನ್ನ ಧೈರ್ಯ ಮತ್ತು ಆತ್ಮವಿಶ್ವಾಸ ಕಳೆದುಕೊಂಡಿದ್ದು, ಮಾರ್ಚ್‌ 11ರಂದು ಅನಿರೀಕ್ಷಿತ ಘಟನೆ ನಡೆದಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಾದರೂ ರೈತರಿಗರ ಕಮಿಟಿ ರಚನೆ ಮಾಡಿ ಸಮಸ್ಯೆ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

Advertisements

“ರೈತರ ಕೆಲಸ ದೇಶಕ್ಕೆ ಕೃಷಿ ಉತ್ಪನ್ನಗಳನ್ನು ಬೆಳೆದು ಕೊಡುವುದು. ಅದಕ್ಕೆ ರೈತರು ಬ್ಯಾಂಕ್‌ಗಳಲ್ಲಿ ಸಾಲ ಮಾಡಿ ದುಬಾರಿ ಬೀಜಗಳನ್ನು ಮತ್ತು ಕೀಟನಾಶಕಗಳನ್ನು ಬಳಸಿ ಒಳ್ಳೆಯ ಬೆಳೆಯನ್ನು ಬೆಳೆದು ಕರ್ನಾಟಕಕ್ಕೆ ಒಣ ಮೆಣಸಿನಕಾಯಿ ರೂಪದಲ್ಲಿ ಕೊಟ್ಟಿದ್ದಾರೆ. ರೈತರು ಕಳೆದ ವರ್ಷ ಬ್ಯಾಡಗಿ ಡಬ್ಬಿ ಹಾಗೂ ಕಡ್ಡಿ ಮೆಣಸಿನಕಾಯಿಗೆ ₹40,000 ಬೆಲೆ ನೋಡಿ ಈ ವರ್ಷ ತೆಗೆದುಕೊಂಡಿರುವ ಸಾಲವನ್ನು ತೀರಿಸಬಹುದೆಂದು ಉತ್ತಮ ಗುಣಮಟ್ಟದ ಮೆಣಸಿನಕಾಯಿಯನ್ನು ಬೆಳೆದು ಮಾರುಕಟ್ಟೆಗೆ ತಂದಿದ್ದಾರೆ” ಎಂದು ಹೇಳಿದರು.

“ಮಾರುಕಟ್ಟೆಯಲ್ಲಿ ಕೆಲವು ಮಧ್ಯವರ್ತಿಗಳ ಹಾವಳಿ ಹಾಗೂ ಗುಜರಾತಿನ ಗುಂದಲ್ ಮಾರ್ಕೆಟ್‌ನ ಬೆಲೆ ಏರಿಳಿತದ ಕಾರಣ ಮತ್ತು ಬ್ಯಾಡಗಿ ಹಾಗೂ ಹಾವೇರಿ ಜಿಲ್ಲಾದ್ಯಂತ ಸರ್ಕಾರಿ ಗೋದಾಮುಗಳಲ್ಲಿ ರೈತರ ಕೃಷಿ ಉತ್ಪನ್ನಗಳನ್ನು ಇಡಲು ಖಾಸಗಿ ಮಾರಾಟಗಾರರ ಹಾವಳಿಯಿಂದ ಅವಕಾಶ ಇಲ್ಲದಂತಾಗಿದ್ದು, ಹಾವೇರಿ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗ ಸಂವಹನ ಅಂತರದಿಂದ ಈ ಘಟನೆ ಉಂಟಾಗಿದೆ. ಹಾಗಾಗಿ ರೈತರ ವಿರುದ್ಧ ಯಾವುದೇ ಮೊಕದ್ದಮೆ ದಾಖಲು ಮಾಡಬಾರದು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾರ್ವಜನಿಕ ರಸ್ತೆ ತಡೆಯುವುದಕ್ಕೆ ಯಾರಿಗೂ ಅವಕಾಶವಿಲ್ಲ: ಜಿಲ್ಲಾಧಿಕಾರಿ

“ಜಿಲ್ಲಾಧಿಕಾರಿಗಳಾದ ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವರು, ರೈತರಿಗೆ ಒಳ್ಳೆಯ ಮಾರುಕಟ್ಟೆ ಒದಗಿಸಬೇಕು. ರೈತರ ಕೆಲಸ ದೇಶಕ್ಕೆ ಹಾಗೂ ರಾಜ್ಯಕ್ಕೆ ಕೃಷಿ ಉತ್ಪನ್ನಗಳನ್ನು ಉತ್ಪಾದಿಸಿ ಕೊಡುವುದು, ಬ್ಯಾಡಗಿ ಮೆಣಸಿನಕಾಯಿ ಇಡೀ ಜಗತ್ತಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದು, ಇಡೀ ಜಗತ್ತಲ್ಲಿ ಬ್ಯಾಡಗಿ ಮೆಣಸಿನಕಾಯಿಗೆ ಒಳ್ಳೆಯ ಮಾರ್ಕೆಟ್ ಇದ್ದಮೇಲೆ ಯಾಕೆ ಇಂಥ ಘಟನೆ ಉಂಟಾಯಿತು. ತಾವು ಒಂದು ತಂಡವನ್ನು ರಚನೆ ಮಾಡಿ ಶೀಘ್ರದಲ್ಲೇ ತಪ್ಪಿಸ್ತರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು, ಬ್ಯಾಡಗಿ ಹಾಗೂ ಹಾವೇರಿ ಜಿಲ್ಲಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಎಸಿ ಹಾಗೂ ಎಸಿ ರಹಿತ ಗೋಡೌನ್‌ಗಳನ್ನು ಕಟ್ಟಿಸಿಕೊಟ್ಟು ರೈತ ಬೆಳೆದ ಕೃಷಿ ಉತ್ಪನ್ನಗಳಿಗೆ ಶೇಖರಣ ಸೌಲಭ್ಯ ಮಾಡಿದ್ದಲ್ಲಿ ಇಂತಹ ಅನಿರೀಕ್ಷಿತ ಹಾಗೂ ಕಾನೂನು ಬಾಹಿರ ಘಟನೆಗಳನ್ನು ತಡೆಗಟ್ಟಬಹುದು” ಎಂದು ಹೇಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X