ಹಾವೇರಿ | ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ

Date:

Advertisements

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಜೆಎಂಎಫ್‌ಸಿ ನ್ಯಾಯಾಲಯವು ತಾಲೂಕಿನ ಪ್ರಾತಿನಿಧ್ಯವನ್ನು ಹೆಚ್ಚಿಸಲು, ನ್ಯಾಯಾಂಗ ಮತ್ತು ಸಮಾಜವನ್ನು ಬಲಪಡಿಸಲು ಪ್ರಮುಖ ಪಾತ್ರ ವಹಿಸುತ್ತದೆಂಬ ವಿಶ್ವಾಸವಿದೆ. ಶೀಘ್ರದಲ್ಲಿಯೇ ಸಂಚಾರಿ ನ್ಯಾಯಾಲಯ ಶಾಶ್ವತಗೊಳ್ಳಲಿದೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾ. ಹೇಮಂತ ಚಂದನಗೌಡರ ಹೇಳಿದರು.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಸಂಚಾರಿ ದಿವಾಣಿ ಮತ್ತು ಜೆಎಂಎಫ್‌ಸಿ(ಪ್ರಥಮ ದರ್ಜೆಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್) ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದರು.

ನ್ಯಾ. ಕೃಷ್ಣ ದೀಕ್ಷಿತ್ ಮಾತನಾಡಿ, “ತ್ವರಿತ ನ್ಯಾಯ ಒದಗಿಸುವ ಮೂಲಕ ನ್ಯಾಯಾಂಗ ವ್ಯವಸ್ಥೆ ಮೇಲೆ ಜನರಿಗೆ ನಂಬಿಕೆ ಬರುವಂತೆ ಮಾಡಬೇಕು. ನ್ಯಾಯಾಂಗ ವ್ಯವಸ್ಥೆ ಕುಸಿಯಲು ಅವಕಾಶ ಕಲ್ಪಿಸಬಾರದು. ಕಕ್ಷಿದಾರರೊಂದಿಗೆ ಪ್ರೀತಿ, ಗೌರವ, ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು. ನೂತನ ನ್ಯಾಯಾಲಯದ ಕ್ರೀಯಾಶೀಲತೆ ಪ್ರಮಾಣ ಹೆಚ್ಚಾಗಬೇಕು. ವಕೀಲರು ಕನ್ನಡದಲ್ಲಿಯೇ ವಾದ ಮಂಡಿಸುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯದ ಬಗ್ಗೆ ನಂಬಿಕೆ ಹೆಚ್ಚುತ್ತದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ಸಂವಿಧಾನ ಶಿಲ್ಪಿ ದಿನದರ್ಶಿಕೆ ಬಿಡುಗಡೆ

ಶಾಸಕ ಯು ಬಿ ಬಣಕಾರ ಮಾತನಾಡಿ, “ತಾಲೂಕಿನ ಗಡಿಭಾಗದ ಗ್ರಾಮಗಳ ನಿವಾಸಿಗಳಿಗೆ ಈ ನ್ಯಾಯಾಲಯ ಹೆಚ್ಚು ಅನುಕೂಲವಾಗಲಿದೆ. ಮನೆ ಮನೆಗೆ ನ್ಯಾಯ ಒದಗಿಸುವ ಮಹತ್ವದ ಕೆಲಸ ಇದರಿಂದ ನನಸಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ ಸಿ ಸದಾನಂದಸ್ವಾಮಿ, ಲೋಕೋಪಯೋಗಿ ಇಲಾಖೆ ಹಾವೇರಿ ವಿಭಾಗದ ಎನ್ ಎನ್ ಪಾಟೀಲ, ನೂತನ ತಾಲೂಕು ವಕೀಲದ ಸಂಘದ ಅಧ್ಯಕ್ಷ ಬಿ ಎಚ್ ಬನ್ನಿಕೋಡ, ಉಪಾಧ್ಯಕ್ಷ ಹಿರಿಯ ವಕೀಲ ಎಸ್ ವಿ ತೋಗರ್ಸಿ, ಪ್ರಧಾನ ಕಾರ್ಯದರ್ಶಿ ಮಾರುತಿ ಜೋಕನಾಳ, ಎಸ್ ಎಸ್ ಪಾಟೀಲ, ಕುಮಾರ ಕೋಟಿಹಾಳ, ಸದಸ್ಯ ಪಿ ಡಿ ಬಸನಗೌಡ್ರ, ವಿ ಆರ್ ದ್ರೌಪಕ್ಕಳವರ, ಸುರೇಶ ಬೆಣ‍್ಣಿ, ಅಬ್ದುಲ್ ರೆಹಮಾನ್ ಹೊನ್ನಾಳಿ, ಸುರೇಶ ದ್ಯಾವಕ್ಕಳವರ, ಫಕೀರೇಶ ತುಮ್ಮಿನಕಟ್ಟಿ ಸೇರಿದಂತೆ ವಕೀಲರು, ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X