“ಕನ್ನಡಿಗರ ಭಾವನೆಗಳ ದಕ್ಕೆ ತರುವಂತೆ ‘ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು’ ಎಂಬ ತಪ್ಪು ಮತ್ತು ದುರುದ್ದೇಶ ಪೋರಿತ ಹೇಳಿಕೆ ನಟ ರಾಜಕಾರಣಿ ಕಮಲ್ ಹಾಸನ್ ಅವರು ನೀಡಿದ್ದಾರೆ” ಎಂದು ಕರವೇ ಪ್ರವೀಣ್ ಶೆಟ್ಟಿ ಬಣ ತಾಲೂಕು ಅಧ್ಯಕ್ಷ ಭರಮಪ್ಪ ಡಮ್ಮಳ್ಳಿ ಹೇಳಿದರು.
ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಥಗ್ ಲೈಫ್ ಕಮಲ್ ಹಾಸನ್ ಅವರ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯನ್ನು ತಡೆಯಲು ಆಗ್ರಹಿಸಿ. ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.
“ಈ ಸುಳ್ಳು ಮತ್ತು ಆಧಾರ ರಹಿತ ಹೇಳಿಕೆಯನ್ನು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವು ಆಘಾತವನ್ನುಂಟು ಮಾಡಿದೆ ಕನ್ನಡಿಗರಿಂದ ತೀವ್ರ ಖಂಡನೆ ಮತ್ತು ವಿರೋಧ ವ್ಯಕ್ತವಾದರೂ ಕಮಲ್ ಹಾಸನ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಯಾಚಿಸದೆ ತಮ್ಮ ಹೇಳಿಕೆಗೆ ಬದ್ಧರಾಗಿರುವುದು ಕನ್ನಡಿಗರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ” ಎಂದು ಕಿಡಿಕಾರಿದರು.
“ಕನ್ನಡ ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಕಾರ್ಯನಿರ್ವ ಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಕಮಲ್ ಹಾಸನ್ ಅವರು ಈ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಈ ಹಿನ್ನಲೆಯಲ್ಲಿ ಅವರ ಹೊಸ ಚಿತ್ರ ತಗ್ ಲೈಫ್ ಈ ಸಿನಿಮಾವು ಜೂನ್ 5 ತೆರೆ ಕಾಣಲು ನಿಗದಿಯಾಗಿದೆ ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ತಡೆಯುವ ನಿರ್ಧಾರವನ್ನು ನಾವು ಕೈಗೊಂಡಿದ್ದೇವೆ. ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಅಕ್ರಮಗಳನ್ನು ಕೈಗೊಳ್ಳಬೇಕು” ಎಂದು ಎಚ್ಚರಿಕೆ ನೀಡಿದರು.
ಮನವಿ ಸಂದರ್ಭದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣ ಮುಖಂಡರು ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಅಶೋಕ್ ಬಡಿಗೇರ. ತಾಲೂಕು ಉಪಾಧ್ಯಕ್ಷ ಚಂದ್ರು ಕೂಟಿಹಾಳ ತಾಲೂಕ ಸಂಘಟನಾ ಕಾರ್ಯದರ್ಶಿ ಈರಪ್ಪ ಬಣಕಾರ. ಹಂಸಬಾವಿ ಹೂಬಳಿ ಘಟಕದ ಅಧ್ಯಕ್ಷ ರಾಜಶೇಖರ್ ಬಳ್ಳಾರಿ, ಅಬಲೂರ ಗ್ರಾಮ ಘಟಕದ ಅಧ್ಯಕ್ಷ ರಾಜು ಸಣಬಿನ. ಚಿಕ್ಕೋಣತಿ ಗ್ರಾಮ ಘಟಕದ ಅಧ್ಯಕ್ಷ ರಮೇಶ್ ಒಬಳೇರ ಹಂಸಬಾವಿ ಗ್ರಾಮ ಘಟಕದ ಅಧ್ಯಕ್ಷರಾದ ಇಲಿಯಾಸ ದ್ಯಾಮನಕೂಪ್ಪ, ದೀಪು ಚೌಟಗೇರ, ಗುರುವಪ್ಪ ವಡ್ಡರ, ತಾಲುಕ ಮುಖಂಡರು ರಾಜು ದೂಡ್ಡ ಎಲಿವಾಳ ತಾಲೂಕು ಮುಖಂಡರು ನವೀನ್ ಸಜ್ಜನ ಶೆಟ್ಟರ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.
