“ಗುತ್ತಲ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೀದಿ ನಾಯಿಗಳಿಂದ ಪಟ್ಟಣದ ಜನರಿಗೆ ಸಾಕಷ್ಟು ಸಮಸ್ಯೆಗಳು ಆಗುತ್ತಿವೆ. ಶಾಲಾ ಮಕ್ಕಳಿಗೆ, ಕೆಲಸಕ್ಕೆ ಹೋಗುವ ಜನರಿಗೆ, ಮಹಿಳೆಯರಿಗೆ, ವಾಹನ ಸವಾರರಿಗೆ, ಅಷ್ಟೇ ಅಲ್ಲದೇ ಎತ್ತು, ಎಮ್ಮೆ, ಆಕಳುಗಳ ಮೇಲೆ ದಾಳಿ ಮಾಡಿ ಕಚ್ಚುತ್ತಿವೆ. ಕೂಡಲೇ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು” ಎಂದು ಕರವೇ ಹಾವೇರಿ ತಾಲ್ಲೂಕು ಅಧ್ಯಕ್ಷ ಹಾಲೇಶ ಹಾಲಣ್ಣನವರ ಒತ್ತಾಯಿಸಿದರು.
ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಗ್ರಾಮದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬಿದಿನಾಯಿಗಳ ಸಂಖ್ಯೆ ಹಾಗೂ ಅವುಗಳಿಂದ ಆಗುತ್ತಿರುವ ಸಮಸ್ಯೆಗಳಿಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಗುತ್ತಲ ಪಟ್ಟಣದ ಮುಖ್ಯಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.
“ಬೀದಿ ನಾಯಿಗಳ ದಲಿಯಿಂದ ಸಾಕಷ್ಟು ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಇದರಿಂದಾಗಿ ಗುತ್ತಲ ಪಟ್ಟಣದ ಸಾರ್ವಜನಿಕರು, ಮಕ್ಕಳು ಭಯದಿಂದ ಓಡಾಡುವ ಪರಿಸ್ಥಿತಿ ಉಂಟಾಗಿದೆ” ಎಂದು ಹೇಳಿದರು.
“ಸರಕಾರಿ ಪ್ರಾಥಮಿಕ ಶಾಲೆಯ ಮುಂದೆ ಇರುವ ಚಿಕನ್ ಹಾಗೂ ಮೀನು ಮಾರುವ ಅಂಗಡಿಗಳ ಮುಂದೆ 40ಕ್ಕೂ ಹೆಚ್ಚು ಬೀದಿ ನಾಯಿಗಳು ಗುಂಪು ನಿಂತಿರುತ್ತವೆ. ಈ ವೇಳೆ ದಾರಿಯಲ್ಲಿ ಹೋಗುವ ಜನರಿಗೆ, ಮಹಿಳೆಯರಿಗೆ, ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚುತ್ತಿವೆ. ಇವುಗಳನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಬೇರೆ ಕಡೆ ಸ್ಥಳಾಂತರಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಈ ಸಂದರ್ಭದಲ್ಲಿ ಹಾವೇರಿ ತಾಲೂಕು ಅಧ್ಯಕ್ಷ ಹಾಲೇಶ್ ಹಾಲಣ್ಣನವರ, ಯುವ ಘಟಕದ ಅಧ್ಯಕ್ಷ ಫಕ್ರುದ್ದೀನ್ ಅಂಗಡಿಕಾರ, ಶೇಕಪ್ಪ ನರಸಣ್ಣವರ, ಕರಬಸ್ಸು ಕುರುಬಗೇರಿ, ನಿಂಗಪ್ಪ ಅಂಗೂರ, ಶಿವಲಿಂಗಪ್ಪ ಗೊರವರ ಹಾಗೂ ಪಟ್ಟಣದ ಸಾರ್ವಜನಿಕರು ಪಾಲ್ಗೊಂಡಿದ್ದರು