ಹಾವೇರಿ | ನಕಲಿ ದಾಖಲೆಗಳನ್ನು ನೀಡಿ ಮಾಶಾಶ,ನ ಪಡೆಯುವ ಫಲನುಭವಿಗಳ ಮೇಲೆ ಕ್ರಮ ಕೈಗೊಳ್ಳಲು ಕರವೇ ಸ್ವಾಭಿಮಾನಿ ಬಣ ಒತ್ತಾಯ

Date:

Advertisements

“ಹಾವೇರಿ ಜಿಲ್ಲಾದ್ಯಂತ ನಕಲಿ ದಾಖಲೆಗಳನ್ನು ಸರ್ಕಾರಕ್ಕೆ ನೀಡಿ ಸಂದ್ಯಾ ಸುರಕ್ಷಾ ಮತ್ತು ವಿಶೇಷಚೇತನರ ಮಾಶಾಶನ ಪಡೆಯುತ್ತಿದ್ದು ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗುತ್ತದೆ” ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಅಧ್ಯಕ್ಷರು ಯಲ್ಲಪ್ಪ ಮರಾಠೆ ಆರೋಪಿಸಿದರು.

ಹಾವೇರಿ ಪಟ್ಟಣದ ತಹಸೀಲ್ದಾರ ಕಛೇರಿ ಎದುರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ನಕಲಿ ದಾಖಲೆಗಳನ್ನು ನೀಡಿ ಸಂದ್ಯಾ ಸುರಕ್ಷಾ ಮತ್ತು ವಿಶೇಷಚೇತನರ ಮಾಶಾನನ ಪಡೆಯುತ್ತಿರುವದನ್ನು ಖಂಡಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“2018-19 ನೇ ಸಾಲಿನಿಂದ 2024 ರವರೆಗೆ ಸರ್ಕಾರಕ್ಕೆ ನಕಲಿ ದಾಖಲೆಗಳನ್ನು ನೀಡಿ ಈ ಮಾಶಾಸನ ಪಡೆಯುತ್ತಿರುವವರಿಗೆ ಸರ್ಕಾರದಿಂದ ನಿವೃತ್ತ ಜಿಲ್ಲಾ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಬೇಕು. ಹಾಗೆ ಸಮಿತಿಯಲ್ಲಿ ಜಿಲ್ಲಾ ವಿಭಾಗೀಯ ಅಧಿಕಾರಿಗಳು ಶ್ರವಣದೋಷ ತಜ್ಞರು, ಅಂಧತ್ವ ತಜ್ಞರು, ಮಾನಸಿಕ ತಜ್ಞರು ಹಾಗೂ ಕೀಲು ಎಲುಬು ಮತ್ತು ಮೂಳೆ ತಜ್ಞರು ಹಾಗೂ ವಯಸ್ಸಿನ ದೃಢೀಕರಣ ನೀಡುವ ತಜ್ಞರು ಒಳಪಟ್ಟಂತೆ ಸಮಿತಿ ರಚನೆ ಮಾಡಬೇಕು. 2018-2024 ರವರೆಗೆ ಆಗಿರುವ ವಿಶೇಷಚೇತನರು ಮತ್ತು ಸಂದ್ಯಾ ಸುರಕ್ಷ ಅಡಿಯಲ್ಲಿ ಮಾಶಾಸನ ಪಡೆಯುತ್ತಿರುವವರನ್ನು ಪರಿಶೀಲನೆ ಮಾಡಿ ನಿಜವಾದ ಫಲಾನುಭವಿಗಳಿಗೆ ನ್ಯಾಯ ಒದಗಿಸಿಕೊಡಬೇಕು” ಎಂದು ಒತ್ತಾಯಿಸಿದರು.

Advertisements

“ವಿಶೇಷಚೇತನರು ಮತ್ತು ಸಂದ್ಯಾ ಸುರಕ್ಷ ಅಡಿಯಲ್ಲಿ ಅರ್ಜಿ ಸಲ್ಲಿಸಿದಾಗ ನೀಡಿರುವ ದಾಖಲೆಗಳನ್ನು ಕುಲಂಕೂಷವಾಗಿ ಪರಿಶೀಲನೆ ಮಾಡದೇ, ಮಂಜೂರಾತಿ ಪ್ರಮಾಣ ಪತ್ರ ನೀಡಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿರುವ ಮತ್ತು ಅಕ್ರಮ ಎಸಗಿರುವ ತಪ್ಪಿತಸ್ತ ಅಧಿಕಾರಿಗಳ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಒಂದು ತಿಂಗಳ ಒಳಗಾಗಿ ಸಮಿತಿ ರಚನೆ ಮಾಡಿ ನಕಲಿ ಫಲಾನುಭವಿಗಳನ್ನು ಕಂಡು ಹಿಡಿದು ನಿಜವಾದ ಫಲಾನುಭವಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ತಹಶೀಲ್ದಾರ ಕಾರ್ಯಾಲಯದ ಎದುರುಗಡೆ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಶಿರಹಟ್ಟಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸಿಇಓ ಭರತ್ ಎಸ್ ಭೇಟಿ

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣ ಜಿಲ್ಲಾ ಮಹಿಳಾ ಅಧ್ಯಕ್ಷರು ಗೀತಾಬಾಯಿ ಲಮಾಣಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಖಲಂದರ ಎಲೆದಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯುಸೂಫ ಸೈಕಲಗಾರ, ಜಿಲ್ಲಾ ಜಂಟಿ ಕಾರ್ಯದರ್ಶಿ ಈರಪ್ಪ ಅಂಗಡಿ, ಹಾವೇರಿ ತಾಲೂಕು ಅಧ್ಯಕ್ಷ ರಾಜೇಸಾಬ ಮಾನೆಗಾರ, ಹಿರೇಕೆರೂರ ತಾಲೂಕು ಅಧ್ಯಕ್ಷ ಪ್ರಕಾಶ ಡೊಂಬರ, ರಟ್ಟಿಹಳ್ಳಿ ತಾಲೂಕು ಅಧ್ಯಕ್ಷ ರಾಮಚಂದ್ರಪ್ಪ ಹಿಂಡಸಗಟ್ಟಿ, ಶಿಗ್ಗಾಂವ್ ತಾಲೂಕು ಅಧ್ಯಕ್ಷ ಶಂಕರ ಬಡಿಗೇರ, ಬ್ಯಾಡಗಿ ತಾಲೂಕು ಅಧ್ಯಕ್ಷ ಬಸವರಾಜ ಪಟ್ಟಣಶೆಟ್ಟಿ, ಹಾವೇರಿ ಮಹಿಳಾ ತಾಲೂಕು ಅಧ್ಯಕ್ಷ ನಾಗಮ್ಮ ಕಾಳೇರ, ಮೆಹಮೂದ ಮುಲ್ಲಾ, ದಾದಾಪೀರ ಮಲ್ಲಾಡದ, ರೇಷ್ಮಾ ಬೀರಬ್ಬಿ, ಅನ್ನಪೂರ್ಣ ಅರಿಕೇರಿ, ದೇವರಾಜ ತಳವಾರ, ರವಿ ಮಾಮನಿ, ಹೊನ್ನೂರಸಾಬ ಕೊಪ್ಪಳ, ಮಹಾವೀರ ಹಳ್ಳಿಯವರ, ದೇವೆಂದ್ರ ಹಾನಗಲ್ಲ, ಅಬ್ದುಲಖಾದರ ಕೊಲ್ಲಾಪೂರ ರಜಾಕ ಪುರದಗೇರಿ, ಅಜ್ಜತುಲ್ಲಾ ಎಲೆದಹಳ್ಳಿ. ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X