ಹಾವೇರಿ | ಕರ್ನಾಟಕ ರತ್ನ ಡಾ// ವಿಷ್ಣುವರ್ಧನ್ ಅವರ ಪುತ್ತಳಿ ನಿರ್ಮಿಸಲು ಕರವೇ ಸ್ವಾಭಿಮಾನಿ ಬಳಗ ಒತ್ತಾಯ

Date:

ಕರ್ನಾಟಕ ರತ್ನ ಡಾ//ವಿಷ್ಣುವರ್ಧನ್ ರವರ ಪುತ್ತಳಿಯನ್ನು ಹಾವೇರಿ ಪಟ್ಟಣದಲ್ಲಿ ಸೂಕ್ತವಾದ ಸ್ಥಳದಲ್ಲಿ ನಿರ್ಮಾಣ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ವತಿಯಿಂದ ಹಾವೇರಿ ಪಟ್ಟಣದ ನಗರಸಭೆಯಲ್ಲಿ ಪ್ರತಿಭಟನೆ ನಡೆಸಿ ಆಯುಕ್ತರಿಗೆ ಮನವಿ ಮನವಿ ಸಲ್ಲಿಸಿದರು.

- Advertisement -

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರವೇ ಸ್ವಾಭಿಮಾನಿ ಬಳಗ ಜಿಲ್ಲಾಧ್ಯಕ್ಷರು ಯಲ್ಲಪ್ಪ ಮರಾಠೆ ಮಾತನಾಡಿ, “ಪಟ್ಟಣದ ವೃತ್ತಕ್ಕೆ ಡಾಕ್ಟರ್ ವಿಷ್ಣುವರ್ಧನರವರ ಹೆಸರಿಡಬೇಕು. ಇದು ಬರೆ ನಮ್ಮ ಕನಸಲ್ಲ ಅನೇಕ ಕನ್ನಡಿಗರ ಕನಸು, ಅವರ ಅಭಿಮಾನಿಗಳ ಕನಸು. ಈ ಕನಸನ್ನು ತಾವು ಆದಷ್ಟು ಬೇಗ ನಮ್ಮ ಜಿಲ್ಲೆಯಲ್ಲಿ ನನಸು ಮಾಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕರ್ನಾಟಕ ರತ್ನ ಡಾಕ್ಟರ್ ವಿಷ್ಣುವರ್ಧನರವರ ಪುತ್ತಳಿಯನ್ನು ನಿರ್ಮಿಸುವ ಮುಖಾಂತರ ತಾವುಗಳು ಅಭಿಮಾನಿಗಳ ಆಸೆಯನ್ನು ಪೂರೈಸಿದಂತಾಗುತ್ತದೆ” ಎಂದು ಮನವಿ ಸಲ್ಲಿಸಿದರು.

ಈ ಮನವಿಯನ್ನು ಸ್ವೀಕರಿಸಿದ ನಗರಸಭೆ ಆಯುಕ್ತರು ಮಾತನಾಡಿ, “ತಾವು ನೀಡಿದ ಮನವಿಯನ್ನು ನಮ್ಮ ನಗರಸಭೆ ಕಮಿಟಿ ಜೊತೆ ಚರ್ಚಿಸಿ ಇದಕ್ಕೆ ಸೂಕ್ತ ಸ್ಥಳ ಪರಿಶೀಲನೆ ಮಾಡಿ ಕರ್ನಾಟಕ ರತ್ನ ಡಾಕ್ಟರ್ ವಿಷ್ಣುವರ್ಧನ್ ರವರ ಪುತ್ತಳಿಯನ್ನು ನಿರ್ಮಿಸಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಭರವಸೆ ನೀಡಿದರು.

ಈ ಮನವಿ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಳಗದ ಸಂಸ್ಥಾಪಕರು ಅಧ್ಯಕ್ಷರು ಡಾ. ಎಂ ಲಿಂಗರಾಜು, ಉತ್ತರ ಕರ್ನಾಟಕ ಕಾರ್ಯಾಧ್ಯಕ್ಷರು ಯೂಸುಫ್ ಸೈಕಲಗಾರ, ಮಹಿಳಾ ಜಿಲ್ಲಾಧ್ಯಕ್ಷರು ಗೀತಾಬಾಯಿ ಲಮಾಣಿ, ಜಿಲ್ಲಾ ಉಪಾಧ್ಯಕ್ಷರು ಪ್ರದೀಪ್ ಗೌಡರ್, ಜಿಲ್ಲಾ ಯುವ ಘಟಕದ ಅಧ್ಯಕ್ಷರು ರಿಯಾಜ್ ಲೋಹಾರ, ಹಾವೇರಿ ತಾಲೂಕ ಅಧ್ಯಕ್ಷರು ರಾಜಾಭಕ್ಷ ಮಾನೇಗಾರ, ಖಲಂದರ್ ಎಲೆದಹಳ್ಳಿ, ಶಂಕರ್ ಬಡಿಗೇರ, ದೇವರಾಜ್ ಈಳಗೇರ, ಯುನೊಸ್ ಕಿಲ್ಲೆದಾರ್, ನಿಲಮ್ಮ ಅಂಗಡಿ, ಶೇಕವ್ವ   ಹುಲುಗುರು, ಅರುಂಧತಿ ಆರೇರ, ಪುಷ್ಪ ಲಮಾಣಿ, ಮಹಾವೀರ ಹಳ್ಳಿಯವರು, ರಿಯಾಯಿಜುದ್ದೀನ್ ಕಚವಿ, ಹೊನ್ನೂರ್ ಸಾಬ್, ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...