ಹಾವೇರಿ | ಬಸ್‌ನಲ್ಲಿ ವಿಷ ಕುಡಿದ ಪ್ರೇಮಿಗಳು; ಯುವತಿ ಸಾವು

Date:

ತಮ್ಮ ಪ್ರೀತಿಯನ್ನು ಪೋಷಕರು ವಿರೋಧಿಸ ಕಾರಣಕ್ಕಾಗಿ ಪ್ರೇಮಿಗಳಿಬ್ಬರು ಬಸ್‌ನಲ್ಲಿ ವಿಷ ಸೇವಿಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ವಿಷ ಸೇವಿಸಿದ್ದ ಯುವತಿ ಸಾವನ್ನಪ್ಪಿದ್ದು, ಯುವಕ ಬದುಕುಳಿದಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗಿದೆ.

20 ವರ್ಷದ ಹೇಮ ಮೃತ ದುರ್ದೈವಿ. ಆಕೆ ಬೆಂಗಳೂರಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಆಕೆಯ ಪ್ರೇಮಿ ಅಖಿಲ್ ಬಾಗಲಕೋಟೆ ಜಿಲ್ಲೆಯವನಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಯುವತಿಯ ಪೋಷಕರು ಅವರು ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ಪೋಷಕರ ವಿರೋಧದಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಸ್ಲೀಪಿಂಗ್‌ ಕೋಚ್‌ವುಳ್ಳ ಖಾಸಗಿ ಬಸ್‌ನಲ್ಲಿ ಟಿಕೆಟ್ ಬುಕ್ ಮಾಡಿಕೊಂಡಿದ್ದ ಇಬ್ಬರೂ, ಬಸ್‌ ಹತ್ತಿದ ಬಳಿಕ ವಿಷ ಸೇವಿಸಿ ಮಲಗಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾರ್ಗ ಮಧ್ಯೆ ಬಸ್‌ ನಿಲ್ಲಿಸಿದಾಗ ವಿಷದ ವಾಸನೆ ಬಂದು ಸಹ ಪ್ರಯಾಣಿಕರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಇಬ್ಬರೂ ವಿಷ ಸೇವಿಸಿರುವುದು ಗೊತ್ತಾಗಿದೆ. ಕೂಡಲೇ, ಇಬ್ಬರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಹೇಮಾ ಮೃತಪಟ್ಟಿದ್ದಾರೆ. ಯುವಕನಿಗೆ ಚಿಕಿತ್ಸೆ ನೀಡಲಾಗಿದ್ದು, ಆತ ಚೇತರಿಸಿಕೊಳ್ಳುತ್ತಿದ್ದಾನೆ.

ಬಸ್‌ ಹತ್ತುವ ಮುನ್ನ ತನ್ನ ಪೋಷಕರಿಗೆ ಕರೆ ಮಾಡಿದ್ದ ಯುವತಿ, “ನಮ್ಮ ವಿವಾಹಕ್ಕೆ ನೀನು ಒಪ್ಪಿಗೆ ಕೊಡಲ್ಲ. ಹಾಗಾಗಿ, ಮುಂಬೈಗೆ ಹೋಗುತ್ತಿದ್ದೇವೆ” ಎಂದು ಹೇಳಿದ್ದಾಗಿ ಎಂದು ತಿಳಿದುಬಂದಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777 ಅಥವಾ 9152987821, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕಾಲಮಿತಿಯೊಳಗೆ ರಸ್ತೆ ಗುಂಡಿ ಮುಚ್ಚಲು ಸೂಚನೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ

"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ರಸ್ತೆಗುಂಡಿಗಳನ್ನು...

ರಾಜ್ಯದಲ್ಲಿ ಮೇ 31ರಿಂದ ಮುಂಗಾರು ಮಳೆ ಆರಂಭ

ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ವಾತಾವರಣ ತಂಪಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರ...

ಕಲಬುರಗಿ | ಬೈಕ್‌ಗೆ ಸಾರಿಗೆ ಬಸ್ ಢಿಕ್ಕಿ; ಒಂದೇ ಊರಿನ ಮೂವರು ಯುವಕರು ದುರ್ಮರಣ

ಸಾರಿಗೆ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಮೇಲೆ...

ಬೆಳಗಾವಿ | ಕರ್ನಾಟಕಕ್ಕೆ ಹರಿದುಬರುತ್ತಿದ್ದ ನೀರು ತಡೆದ ಮಹಾರಾಷ್ಟ್ರ; ಬ್ಯಾರೇಜ್‌ ಸುತ್ತ ಪೊಲೀಸ್‌ ನಿಯೋಜನೆ

ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬಿರುವ ರಾಜಾಪುರ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ...