ಹಾವೇರಿ | ಪರಿಸರ ನಾಶಕ್ಕೆ ಮನುಷ್ಯ ಸೃಷ್ಟಿಸುವ ವಸ್ತುಗಳೇ ಕಾರಣ: ಅಶೋಕ ಶಾಸ್ತ್ರಿ

Date:

“ಪರಿಸರ ಮನುಷ್ಯನ ಉತ್ತಮ ಬದುಕಿಗಾಗಿ ಸಕಲವನ್ನೂ ಕೊಡುತ್ತದೆ. ಆದರೆ ಅವನ ಸ್ವಾರ್ಥ ಮತ್ತು ದುರಾಸೆಯಿಂದಾಗಿ ಪ್ರಕೃತಿ ಮೇಲಿನ ಅಮಾನುಷ ದಾಳಿಯಿಂದಾಗಿ ಎಲ್ಲವೂ ಮಲೀನಗೊಂಡು ಪರಿಸರ ತನ್ನ ಸಮತೋಲನವನ್ನು ಕಳೆದುಕೊಳ್ಳುತ್ತಿದೆ. ಪರಿಸರ ನಾಶಕ್ಕೆ ಮನುಷ್ಯ ಸೃಷ್ಟಿಸುವ ವಸ್ತುಗಳೇ ಕಾರಣವಾಗುತ್ತಿರುವುದು ದುರಂತವೇ ಸರಿ. ತುರ್ತಾಗಿ ನಮ್ಮ ಜೀವನ ಶೈಲಿಯನ್ನು ಬದಲಿಸಿಕೊಂಡು ಪರಿಸರವನ್ನ ರಕ್ಷಿಸಿ ಬೆಳೆಸದಿದ್ದರೆ ಜೀವಸಂಕುಲಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ” ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕ ಅಶೋಕ ಶಾಸ್ತ್ರಿ ಆತಂಕ ವ್ಯಕ್ತಪಡಿಸಿದರು.

- Advertisement -

ಹಾವೇರಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಇಕೋ ಕ್ಲಬ್’  ವತಿಯಿಂದ ನಡೆದ ಪರಿಸರ ಸಂರಕ್ಷಣೆ ವಿಶೇಷ ಉಪನ್ಯಾಸ ಮತ್ತು ಪರಿಸರ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಇಂದು ಕುಡಿಯುವ ನೀರು, ಶುದ್ಧ ಗಾಳಿಯನ್ನು ಹಣ ಕೊಟ್ಟು ಪಡೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ತಿನ್ನುವ ಆಹಾರದಲ್ಲಿ ರಾಸಾಯನಿಕ ವಿಷ ಬೆರೆತಿದೆ. ಕಾಡುಗಳ ನಾಶ, ವಿಪರೀತ ನಗರೀಕರಣ, ಮಿತಿಮೀರಿದ ಕೈಗಾರಿಕೀಕರಣ, ಪ್ಲಾಸ್ಟಿಕ್ ವಸ್ತುಗಳ ಸೃಷ್ಟಿ, ಮನುಷ್ಯ ಜನ್ಯ ತ್ಯಾಜ್ಯಗಳು ಮತ್ತು ಇ- ತ್ಯಾಜ್ಯ ಅಸಮರ್ಪಕ  ನಿರ್ವಹಣೆಯಿಂದ ಪರಿಸರದ ಆರೋಗ್ಯ ಹದಗೆಡುತ್ತಿದೆ. ಕೂಡಲೇ ಎಚ್ಚೆತ್ತು ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸುವ ಹೊಣೆ ಎಲ್ಲರ ಮೇಲಿದೆ. ವಿದ್ಯಾರ್ಥಿಗಳು ಕನಿಷ್ಠ ಮನೆಗೊಂದು ಮರವನ್ನ ನೆಟ್ಟು ಬೆಳೆಸಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು” ಎಂದು ಕಿವಿಮಾತು ಹೇಳಿದರು.

ಪ್ರಾಸ್ತಾವಿಕವಾಗಿ ‘ಇಕೋ ಕ್ಲಬ್’ ನ ಸಂಚಾಲಕ ಶೇಖರ ಭಜಂತ್ರಿ ಮಾತನಾಡಿ, ಪಂಚಭೂತಗಳಿಂದ ಸೃಷ್ಟಿಯಾದ ನಾವು ನಮ್ಮ ಸ್ವಾರ್ಥಕ್ಕಾಗಿ ಈ ಸೃಷ್ಟಿಯ ಪಂಚಭೂತಗಳನ್ನೇ ಮಲೀನಗೊಳಿಸಿದ್ದೇವೆ. ಭೂಮಿ ತಾಯಿ ಎಂದು ಪೂಜಿಸಿ, ಅವಳ ಒಡಲನ್ನೇ ಬಗೆಯುತ್ತೇವೆ. ನೆಲ, ಜಲ ಗಾಳಿಗೂ ವಿಷ ತುಂಬಿದ್ದೇವೆ. ಕಾರ್ಖಾನೆ, ವಾಹನಗಳ ಹೊಗೆಯಿಂದ ದೆಹಲಿ, ಮುಂಬೈ ಕೊಲ್ಕತ್ತಾದಂತಹ ದೊಡ್ಡ ನಗರಗಳು ವಿಷಯುಕ್ತ ಹೊಗೆಯಿಂದ ಮುಚ್ಚಿಕೊಳ್ಳುತ್ತವೆ. ಇದರಿಂದ ಜೀವಿಗಳ ಉಸಿರಾಟಕ್ಕೆ ಮತ್ತು ಸಸ್ಯಗಳ ಬೆಳವಣಿಗೆಗೆ ತೊಂದರೆಯಾಗುತ್ತಿದೆ. ಅಭಿವೃದ್ಧಿ ಎಂಬ ಕಲ್ಪನೆಯಿಂದ ಪರಿಸರದ ಮೇಲೆ ನೇರ ಪರಿಣಾಮ ಉಂಟಾಗುತ್ತಿದೆ. ಭೀಕರವಾಗಿ  ನಡೆಯುವ ಯುದ್ಧಗಳೂ ಪರಿಸರದ ಮೇಲಿನ ಯುದ್ಧಗಳಾಗಿವೆ. ಅರಣ್ಯ, ಜಲ ಮೂಲಗಳ ನಾಶದಿಂದ ಜೀವ ವೈವಿಧ್ಯತೆ ಅಪಾಯದಲ್ಲಿದೆ” ಎಂದರು.

“ನಿಸರ್ಗಕ್ಕೆ ನಾವು ಅನಿವಾರ್ಯವಲ್ಲ ಎಂಬ ಸತ್ಯವನ್ನ ಅರಿತು ನಾವು ಪರಿಸರವನ್ನು ಸಂರಕ್ಷಣೆ ಮಾಡದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸಲಾರರು. ಆದ್ದರಿಂದ ಪರಿಸರದ ಕುರಿತ ಜಾಗೃತಿಯನ್ನು ಮೂಡಿಸಲು ಇಕೋ ಕ್ಲಬ್ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳ ಮೂಲಕ ಪರಿಸರ, ಜೀವಿಗಳ ಸಂರಕ್ಷಣೆ ಮತ್ತು ಅದರ ಮಹತ್ವದ ಕುರಿತು ತಿಳಿಸಲಾಗುತ್ತದೆ” ಎಂದರು.

ನಂತರ ಕವಿಗೋಷ್ಠಿಯಲ್ಲಿ ಉಪನ್ಯಾಸಕಿ ನಿರ್ಮಲ ಎಸ್., ವಿದ್ಯಾರ್ಥಿನಿಯರಾದ ಗಿರಿಜಾ ಕಡೆಕೊಪ್ಪ, ಅನಿತಾ ಕೋಣಿಯವರ, ಸಾನಿಯಾ ಗುಳೇದ, ಮೇಘ, ಐಶ್ವರ್ಯ, ಇತರರು ಪರಿಸರದ ಕುರಿತು ಸ್ವರಚಿತ ಕವಿತೆಗಳನ್ನ ವಾಚಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಪ್ರಾಮಾಣಿಕ ಮೆರೆದ ರಿತ್ತಿ ಕುಟುಂಬಕ್ಕೆ 30×40 ನಿವೇಶನ; ಲಕ್ಕುಂಡಿ ಗ್ರಾಪಂ ನಿರ್ಧಾರ

ತದನಂತರ ಉಪನ್ಯಾಸಕ ಎಸ್.ಎಸ್.ನಿಸ್ಸಿಮಗೌಡ್ರು ‘ಮನುಷ್ಯನ ಅಸ್ತಿತ್ವಕ್ಕೆ ಪರಿಸರ ಮತ್ತು ಜೀವ ವೈವಿಧ್ಯತೆಯ ಮಹತ್ವ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. 

ಪ್ರಾಚಾರ್ಯರು ಬಸವರಾಜ ಇಟ್ಟಿಗುಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪನ್ಯಾಸಕ ರಮೇಶ ಲಮಾಣಿ, ಮಂಜುನಾಥ ಹತ್ತಿಯವರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆರಂಭದಲ್ಲಿ ಭೂಮಿಕಾ ಬಸಾಪುರ ಪ್ರಾರ್ಥಿಸಿದರೆ, ಸುಚಿತ ನೂಕಾಪುರ ಸ್ವಾಗತಿಸಿದಳು. ತನುಷ ಪೂಜಾರ ನಿರೂಪಿಸಿ, ಅನಿತಾ ವಂದಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೋಯ್ಡಾ | ದೂರು ಹಿಂಪಡೆಯಲು ರೂ.10 ಲಕ್ಷ ಬೇಡಿಕೆ! ಅಬಕಾರಿ ನಿರೀಕ್ಷಕರಿಂದ ದೂರು

ಉತ್ತರ ಕನ್ನಡ ಜಿಲ್ಲೆ, ಜೋಯ್ಡಾದ ಅನಮೋಡ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ...

ಗದಗ | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ, ತಾಂತ್ರಿಕ ಕೌಶಲ್ಯ ಬೆಳೆಸುವುದು ಅಗತ್ಯ: ಆರ್.ಎಸ್ ಬುರಡಿ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವುದರ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ Gen Z ಪೀಳಿಗೆ ತನ್ನ ಶಕ್ತಿ ಪ್ರದರ್ಶಿಸಬೇಕು: ಪ್ರದೀಪ್ ಪಾಟೀಲ್

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ...

ವಿಜಯಪುರ | ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಬಳಸುವಂತೆ ಜಾಗೃತಿ ಅಭಿಯಾನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಹಾಗೂ ವಿವಿಧ...