ಹಾವೇರಿ | ವಿಶ್ವಗುರು ಬಸವೇಶ್ವರರ 190ನೇ ಜಯಂತಿಯಂದು ಸಾಮೂಹಿಕ ವಿವಾಹ

Date:

Advertisements

ಮಾಹಾನ್ ನಾಯಕರ ದಿನಾಚಾರಣೆಗಳು ಬಡವರ ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಉಪಯುಕ್ತ ಕಾರ್ಯ ಮಾಡುವ ಮೂಲಕ ಅರ್ಥಪೂರ್ಣ ಆಚರಣೆಗೆ ನಾಂದಿಯಾಗಲಿ ಎಂದು ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆಯ ರಾಜ್ಯಾಧ್ಯಕ್ಷ ತಿರಕಪ್ಪ ಕೆ ಚಿಕ್ಕೇರಿ ಹೇಳಿದರು.

ಹಾವೇರಿ ನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 133ನೇ ಜಯಂತಿ, ಡಾ.ಬಾಬು ಜಗಜೀವನ್‌ ರಾಮ್ ಅವರ 117ನೇ ಜಯಂತಿ ಹಾಗೂ ವಿಶ್ವಗುರು ಶ್ರೀ ಬಸವೇಶ್ವರ ಅವರ 190ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಸಾಮೂಹಿಕ ವಿವಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಸಮಾನತೆಯ ಹರಿಕಾರ, ವಿಶ್ವಗುರು ಬಸವೇಶ್ವರರ ದಿನಾಚಾರಣೆಯ ಈ ದಿನ ಬಡವರ ಬದುಕಿಗೆ ಬೆಳಕಾಗುವ ಸಾಮೂಹಿಕ ವಿವಾಹ ಕಾರ್ಯ ಸಾಮಾಜಿಕ ಕಳಕಳಿಯ ಕೆಲಸವಾಗಿದೆ. ಸರ್ವರೂ ಸಮಾನರು ಎಂದು ಬಸವಣ್ಣನವರು 12ನೇ ಶತಮಾನದಲ್ಲಿಯೇ ನಮಗೆ ತಿಳಿಸಿದ್ದಾರೆ.  ಡಾ. ಬಿ ಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಿ ಎಲ್ಲರ ಧ್ವನಿಯಾಗಿದ್ದಾರೆ. ದೇಶದಲ್ಲಿ ಡಾ.ಬಾಬು ಜಗಜೀವನ ರಾಮ್ ಅವರು ಆದರ್ಶ ಜೀವನ ಸಾಗಿಸುವ ಮೂಲಕ ಮಹಾನ್ ನಾಯಕರು ನಮ್ಮ ಜೀವನಕ್ಕೆ ಉತ್ತಮ ಸಂದೇಶ ನೀಡಿದ್ದಾರೆ” ಎಂದರು.

Advertisements

ಕಾರ್ಯಕ್ರಮದ ಉದ್ಘಾಟನೆ ಮಾಡಿದ ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಮಾತನಾಡಿ, “ಸಂಘಟನೆಗಳು ಇಂತಹ ಸಾಮಾಜಿಕ ಕೆಲಸ ಮಾಡಿದಾಗ ಜನರ ಮೆಚ್ಚುಗೆಗೆ ಪಾತ್ರರಾಗುತ್ತೇವೆ. ಈ ಮೂರು ಮಾಹಾನ್ ನಾಯಕರ ಜನ್ಮದಿನದ ನೆನೆಪಿಗಾಗಿ ಸಾಮೂಹಿಕ ವಿವಾಹ ಹಮ್ಮಿಕೊಂಡಿದ್ದು, ಶ್ಲಾಘನೀಯವಾಗಿದೆ. ವಿವಾಹವಾದ ನವ ಜೋಡಿಗಳು ಮಾಹಾನ್ ನಾಯಕರ ತತ್ವ ಸಿದ್ದಾಂತದಡಿ ಉತ್ತಮ ಬದುಕಿಗೆ ಸಾಕ್ಷಿಯಾಗಿರಿ” ಎಂದು ಹೇಳಿ ಕಾರ್ಯಕ್ರಮದ ಯಶಸ್ವಿಗಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈತರಿಗೆ ವೈಜ್ಞಾನಿಕವಾಗಿ ಬೆಳೆನಷ್ಟ ಪರಿಹಾರ ಘೋಷಿಸಬೇಕು: ರಾಜ್ಯಾಧ್ಯಕ್ಷ ಭಾಗ್ಯರಾಜ್

ಈ ಸಂದರ್ಭದಲ್ಲಿ ಮುಖಂಡರುಗಳಾದ ಡಿ ಎಸ್ ಮಾಳಗಿ, ಸಂತೋಷ ಕನ್ನಮ್ಮನವರ, ವೈ ಎನ್ ಮಾಸೂರ, ದುರಗೇಶ ಗೊಣೆಮ್ಮನವರ, ರವಿ ಹುಣಸಿಮರದ, ಮಂಜಪ್ಪ ಮರೋಳ, ಬಸವರಾಜ ಕಾಳೆ ಸದೇರಿದಂತೆ ಬಹುತೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X