ಹಾವೇರಿ | ಮೇ ೫, ಪರಿಶಿಷ್ಟ ಜಾತಿ ಸಮುದಾಯದ ಸಮೀಕ್ಷೆ  ಆರಂಭ: ಜಿಲ್ಲಾಧಿಕಾರಿ

Date:

Advertisements

ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ಅವರ ಏಕ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ-೨೦೨೫ಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯಲ್ಲಿ  ಮೇ ೫ ರಿಂದ ಮೂರು ಹಂತದಲ್ಲಿ  ಪರಿಶಿಷ್ಟ ಜಾತಿ ಸಮುದಾಯ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ಕಾರ್ಯ  ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾಧಿಕಾರಿಗಳು  ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷರಾದ ಡಾ.ವಿಜಯಮಹಾಂತೇಶ ದಾನಮ್ಮನವರ  ತಿಳಿಸಿದ್ದಾರೆ.

“ಈ ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರು, ಪ್ರತಿ ೧೦ ರಿಂದ ೧೨ ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರನ್ನು ನೇಮಿಸಲಾಗಿದೆ” ಎಂದು ಹೇಳಿದ್ದಾರೆ.

ಮೊದಲ ಹಂತ:  ಮೇ ೫ ರಿಂದ ಮೇ ೧೭ರವರೆಗೆ ಮೊದಲ ಹಂತ ಗಣತಿ ಜರುಗಲಿದ್ದು, ಈ  ಅವಧಿಯಲ್ಲಿ  ನೇಮಕಗೊಂಡ ಗಣತಿದಾರರು ತಮಗೆ ವಹಿಸಿರುವ  ಮತಗಟ್ಟೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಸಮುದಾಯಗಳ ಮನೆ ಮನೆಗೆ ತೆರಳಿ ಗಣತಿ ಕಾರ್ಯಕೈಗೊಳ್ಳುವರು.

Advertisements

ಎರಡನೇ ಹಂತ: ಮನೆ-ಮನೆ ಗಣತಿಯಲ್ಲಿ ಬಾಕಿ ಉಳಿದವರಿಗಾಗಿ  ಎರಡನೇ ಹಂತದಲ್ಲಿ ಮೇ ೧೯ ರಿಂದ ಮೇ ೨೧ರವರೆಗೆ  ಮತಗಟ್ಟೆ ವ್ಯಾಪ್ತಿಯಲ್ಲಿ ಗುರುತಿಸಿರುವ ವಿಶೇಷ ಶಿಬಿರಗಳಿಗೆ ಪರಿಶಿಷ್ಟ ಜಾತಿ ಸಮುದಾಯದವರು ತೆರಳಿ ಗಣಿತಿದಾರರಿಗೆ ಮಾಹಿತಿ ನೀಡಬೇಕು.

ಮೂರನೇ ಹಂತ:  ಮೇ ೧೯ ರಿಂದ ಮೇ ೨೩ರವರೆಗೆ ಮೂರನೇ ಹಂತದ ಗಣತಿ ಜರುಗಲಿದ್ದು, ಈ ಅವಧಿಯಲ್ಲಿ  ಮನೆ ಮನೆ ಸಮೀಕ್ಷೆ ಹಾಗೂ ವಿಶೇಷ ಶಿಬಿರದಲ್ಲಿ ಜಾತಿಯ ಬಗ್ಗೆ ಘೋಷಣೆ ಮಾಡಿಕೊಳ್ಳದೇ ಇರುವವರು ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು( ಸ್ವಯಂ ಘೋಷಣೆಗೆ ಆಧಾರ್ ನಂಬರ್ ಹಾಗೂ ಜಾತಿ ಪ್ರಪತ್ರದ ಆರ್.ಡಿ. ನಂಬರ್ ಕಡ್ಡಾಯವಾಗಿರುತ್ತದೆ).

ಮಾಹಿತಿ ನೀಡಿ: ಈ ಗಣತಿ ಸಮಯದಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲಾಗುತ್ತದೆ. ಈ ಸಮಯದಲ್ಲಿ ಸಾರ್ವಜನಿಕರು ಗಣಿದಾರರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ(ರೇಷನ್ ಕಾರ್ಡ್) ಮೊಬೈಲ್ ನಂಬರ್ ಕಡ್ಡಾಯವಾಗಿ ನೀಡಬೇಕು.

ಈ ಸುದ್ದಿ ಓದಿದ್ದೀರಾ? ಧಾರವಾಡ | ರಸ್ತೆಗೆ ಬಾಗಿದ ವಿದ್ಯುತ್ ಕಂಬಗಳು; ಆತಂಕದಲ್ಲಿ ಸಾರ್ವಜನಿಕರು

ಆಧಾರ್ ಕಾರ್ಡ್ ಮಾಡಿಸಿ: ಈ ಗಣತಿಯು ಪರಿಶಿಷ್ಟ ಜಾತಿಯ ಒಳಮೀಸಲಾತಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಒಳ ಪಂಗಡಗಳ ಕುರಿತು ಸ್ಪಷ್ಡವಾಗಿ ಗಣತಿದಾರರಿಗೆ ತಿಳಿಸಲು ಕೋರಲಾಗಿದೆ.  ಈವರೆಗೆ ಆಧಾರ್ ಕಾರ್ಡ್ ಹೊಂದದೇ ಇರುವ ಪರಿಶಿಷ್ಟ ಜಾತಿ ಸಮುದಾಯದವರು ಗಣತಿ ಕಾರ್ಯ ಮುಕ್ತಾಯವಾಗುವುದರೊಳಗಾಗಿ ಆಧಾರ್  ಕೇಂದ್ರಗಳಿಗೆ ತೆರಳಿ ಆಧಾರ್ ಕಾರ್ಡ್ ಮಾಡಿಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X