ಹಾವೇರಿ | ತಾಲೂಕಿನ ಸಮಸ್ಯೆಗಳ ಕುರಿತು ಸಭೆ; ಬೇಡಿಕೆ ಈಡೇರಿಕೆಗೆ ರೈತರ ಒತ್ತಾಯ

Date:

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕ ದಂಡಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸವಣೂರು ಉಪ ವಿಭಾಗಾಧಿಕಾರಿ ಎ.ಸಿ ಮತ್ತು ತಾಲೂಕ ದಂಡಾಧಿಕಾರಿಗಳು ತಾಲೂಕಿನ ಹಲವಾರು ಸಮಸ್ಯೆಗಳ ಕುರಿತು ಸಭೆ ನಡೆಸಿದರು,

ಈವೇಳೆ ಬರಗಾಲ ಬಂದು ಆರು ತಿಂಗಳು ಕಳೆದರೂ ಸರ್ಕಾರದಿಂದ ಬರುವಂತಹ ಬರ ಪರಿಹಾರದ ಹಣ ರೈತರ ಖಾತೆಗೆ ಜಮೆ ಆಗದ ಹಣವನ್ನು ಜಮಾ ಮಾಡಬೇಕು. ಪ್ರತೀ ಇಲಾಖೆಯಲ್ಲಿ ಬರಗಾಲದ ಪರಿಹಾರದಿಂದ ಬರುವಂತ ಕಾಮಗಾರಿಗಳನ್ನು ಆರಂಭಿಸಬೇಕು. ಈ ಕುರಿತು ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂಬ ಅನೇಕ ವಿಷಯಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಸಭೆಯಲ್ಲಿ ಭಾಗಿಯಾಗಿದ್ದ ರೈತ ಮುಖಂಡರು, ಚರ್ಚೆಯಲ್ಲಿ ನಾವು ಬೇಡಿಕೆ ಇಟ್ಟ ವಿಷಯಗಳನ್ನು ವಾರದೊಳಗೆ ಪರಿಹಾರವಾಗದಿದ್ದರೆ, ದೆಹಲಿ ಮಾದರಿಯಲ್ಲಿ ಶಿಗ್ಗಾಂವ ತಾಲೂಕು ತಹಸೀಲ್ದಾರ, ದಂಡಾಧಿಕಾರಿ ಅವರ ಕಚೇರಿ ಮುಂದೆ ನೂರಾರು ಟ್ರ್ಯಾಕ್ಟರ್‌ಗಳೊಂದಿಗೆ ಕಚೇರಿಗೆ ಬೀಗಹಾಕಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವದಡಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾಧ್ಯಕ್ಷ ಮುತ್ತಣ್ಣ ಗುಡಿಗೇರಿ, ಉಪಾಧ್ಯಕ್ಷ ಮಹಾಂತೇಶ್ ಬಾರ್ಕೆರ್, ತಾಲೂಕ ಗೌರವಾಧ್ಯಕ್ಷ ಪಂಚಾಕ್ಷರಿ ಹಿರೇಮಠ, ಮುಖಂಡರಾದ ನಿಂಗನಗೌಡ ರಾಯನಗೌಡ, ಈರಪ್ಪ ಸುಣಗಾರ, ನಾಗಪ್ಪ ಕೊಟ್ಟನದ, ಶೇಖಪ್ಪ ಇನ್ನೂ ಹತ್ತಾರು ರೈತ ಮುಖಂಡರು ಈ ಸಭೆಯಲ್ಲಿ ಭಾಗಿಯಾಗಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...