ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಖಾತೆ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಸೆ.14 ರಂದು ಹಾವೇರಿ ಜಿಲ್ಲೆಯಲ್ಲಿ ಪ್ರವಾಸಕೈಗೊಂಡಿದ್ದಾರೆ.
ಬೆಳಗ್ಗೆ 11 ಗಂಟೆಗೆ ತೀರ್ಥಹಳ್ಳಿಯಿಂದ ಹೊರಟು, ಮಧ್ಯಾಹ್ನ 1-30ಕ್ಕೆ ರಾಣೀಬೆನ್ನೂರಿಗೆ ಆಗಮಿಸಿ, ಮೃತ್ಯುಂಜಯ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.