ಹಾವೇರಿ | ಟ್ರಕ್ ಚಾಲಕನನ್ನು ಕೊಂದು 1 ಕೋಟಿ ಮೌಲ್ಯದ ಸ್ಟೀಲ್ ಕದ್ದ ದುಷ್ಕರ್ಮಿಗಳು

Date:

ಹೆದ್ದಾರಿ ದರೋಡೆಕೋರರು ಟ್ರಕ್ ಚಾಲಕನನ್ನು ಕೊಲೆ ಮಾಡಿ 1 ಕೋಟಿ ರೂಪಾಯಿ ಮೌಲ್ಯದ 13 ಟನ್ ಉಕ್ಕನ್ನು (ಸ್ಟೀಲ್) ದರೋಡೆ ಮಾಡಿರುವ ಘಟನೆ ಹಾವೇರಿಯಲ್ಲಿ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.

- Advertisement -

ಉಕ್ಕಿನ ಕಚ್ಚಾ ಸಾಮಗ್ರಿ ತುಂಬಿದ್ದ ಟ್ರಕ್ ಮಹಾರಾಷ್ಟ್ರದ ಮೀರಜ್‌ನಿಂದ ಚೆನ್ನೈಗೆ ಗುರುವಾರ ರಾತ್ರಿ ತೆರಳುತ್ತಿತ್ತು. ಹಾವೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರ ಹಾನಗಲ್ ಬೈಪಾಸ್ ಬಳಿ ಕಳ್ಳರು ಟ್ರಕ್‌ ಮೇಲೆ ದಾಳಿ ನಡೆಸಿ, ಚಾಲಕನನ್ನು ಹತ್ಯೆಗೈದಿದ್ದಾರೆ. ಲಾರಿಯಲ್ಲಿದ್ದ ಉಕ್ಕಿನ ಸಾಮಗ್ರಿಗಳನ್ನು ಹೊತ್ತೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಸಾಂಗ್ಲಿ ನಿವಾಸಿ, ಚಾಲಕ ಗೋವಿಂದ್ ಖಂಡೇಕರ್ (40) ಹತ್ಯೆಗೀಡಾದ ದುರ್ದೈವಿ ಎಂದು ಗುರುತಿಸಲಾಗಿದೆ. ರಸ್ತೆ ಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಗೋಂವಿದ್ ಪತ್ತೆಯಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶುಕ್ರವಾರ ಅವರು ಸಾವನ್ನಪ್ಪಿದ್ದಾರೆ.

ದರೋಡೆಕೋರರು ಚಾಲಕ ಗೋವಿಂದ್ ಮೇಲೆ ಹಲ್ಲೆ ನಡೆಸಿ ರಾಷ್ಟ್ರೀಯ ಹೆದ್ದಾರಿಯ ನೆಲೋಗಲ್ ಬಳಿ ಬಿಟ್ಟು ಹೋಗಿದ್ದಾರೆ ಎಂದು ಹಾವೇರಿ ಎಸ್‌ಪಿ ಶಿವಕುಮಾರ್ ಗುಣಾರೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...