ಹಾವೇರಿ | ಬಾಳಂಬೀಡ ಗ್ರಾ. ಪಂಚಾಯತ್‌ನಲ್ಲಿ ಹಣ ದುರುಪಯೋಗ: ಸೂಕ್ತ ಕ್ರಮಕ್ಕೆ ಒತ್ತಾಯ

Date:

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮ ಪಂಚಾಯತಿಯಲ್ಲಿ ಕಳೆದ 2021 ರಿಂದ 2024ವರೆಗೆ 14,15 ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಸಾರ್ವಜನಿಕ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರ ಕುರಿತು ತನಿಖೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಅಕ್ಷಯ್ ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದೆ.

- Advertisement -

ಮನವಿ ಸಲ್ಲಿಸಿ ದಸಂಸ ರಾಜ್ಯ ಸದಸ್ಯ ಉಡಚಪ್ಪ ಮಳಗಿ ಮಾತನಾಡಿ, “ಬಾಳಂಬೀಡ ಗ್ರಾಮ ಪಂಚಾಯತಿಯಲ್ಲಿ 14,15 ನೇ ಹಣಕಾಸು ಯೋಜನೆ ಅಡಿಯಲ್ಲಿ ಸಾರ್ವಜನಿಕ ಹಣ ದುರುಪಯೋಗ ಮಾಡಲಾಗಿದ್ದು, ಕುಡಿಯುವ ನೀರು, ಬೊರ್‌ವೆಲ್ ದುರಸ್ತಿ, ವಿದ್ಯುತ್ ಬಿಲ್, ಚರಂಡಿ ದುರಸ್ತಿ ಹಾಗೂ ಸ್ವಚ್ಛತೆ, ಬೀದಿ ದೀಪ, ನೈರ್ಮಲೀಕರಣ, ಹೈ ಮಾಸ್ಟ್‌ ಬೀದಿ ದೀಪ ಸಾಮಗ್ರಿಗಳ ಖರೀದಿ, ಮಿನಿ ವಾಟರ್ ನಿರ್ವಹಣೆ ಕಾಮಗಾರಿಗಳಿಗೆ ಬಳಸಬೇಕಾದ ಹಣದಲ್ಲಿ ಯಾವುದನ್ನು ಸರಿಯಾಗಿ ನಿರ್ವಹಣೆ ಮಾಡದೇ ಹಣವನ್ನು ಖರ್ಚು ಹಾಕಿ ಸಾರ್ವಜನಿಕ ಹಣ ದುರುಪಯೋಗ ಪಡೆಸಿಕೊಂಡು ಲೂಟಿ ಮಾಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ವಿಚಾರದಲ್ಲಿ ಜಿಲ್ಲಾ ಪಂಚಾಯತ್ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ಕುಂದಗೋಳ ತಾಲೂಕಿನಲ್ಲಿ ಸಮಸ್ಯೆಗಳದ್ದೇ ಕಾರುಬಾರು; ಕ್ಯಾರೇ ಎನ್ನದ ಅಧಿಕಾರಿಗಳು!

ಮನವಿ ಸಲ್ಲಿಸುವ ಸಂದರ್ಭದಲ್ಲಿ ದಸಂಸ ಮುಖಂಡರಾದ ಮಂಜಪ್ಪ ಮಾರೋಳ, ವೈ. ಎನ್.ಮಾಸೂರ, ಜಗದೀಶ್ ಹರಿಜನ, ಮಂಜುನಾಥ ದೊಡ್ಡಮರಿಯಮ್ಮನವರ, ಮಹೇಶಪ್ಪ ಶಾಕಾರ, ಶಿವು ಮುದಿಮಲ್ಲಣ್ಣವರ, ಶ್ರೀಮತಿ ರೇಣುಕಾ ಬಡಕಣ್ಣವರ, ಬಸವಣ್ಣಪ್ಪ ಅರಳಿಹಳ್ಳಿ,ಶಂಭುಲಿಂಗಪ್ಪ ದಿವಟರ,ಕೃಷ್ಣಕಾಂತ ಹೊಳಿಯಪ್ಪನವರ, ಮಂಜುನಾಥ್ ಮಾಸೂರ,ಹನಮಂತಪ್ಪ ಹೌಶಿ, ಗೀತಾ ಹಳೆಶಿಡೆನೂರ,ರತ್ನವ್ವ ದೊಡ್ಡಮನಿ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...