ಹಾವೇರಿ | 77 ಗ್ರಾಮಗಳ, 162 ಕೆರೆಗಳಿಗೆ ನೀರು ಹರಿಸಲು ಶಾಸಕ ಶ್ರೀನಿವಾಸ ಮಾನೆ ಚಾಲನೆ

Date:

Advertisements

ಏತ ನೀರಾವರಿ ಯೋಜನೆಯ ಪಂಪ್ ಗೆ ಶಾಸಕ ಶ್ರೀನಿವಾಸ ಮಾನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಬಾಳಂಬೀಡ ಗ್ರಾಮದ ಪಂಪಹೌಸ್‌ನಲ್ಲಿ ಚಾಲನೆ ನೀಡಿ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲಾಯಿತು.

ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು ಹಾಗಾಗಿ ಪಂಪ್ ಚಾಲನೆಗೊಳಿಸಿ ತಾಲೂಕಿನ 77 ಗ್ರಾಮಗಳ 162 ಕೆರೆಗಳಿಗೆ ನೀರು ಹರಿಸಲಾರಂಭಿಸಲಾಯಿತು.

ಶಾಸಕ ಶ್ರೀನಿವಾಸ ಮಾನೆ ಮಾತನಾಡಿ “ಈ ಯೋಜನೆಯಿಂದ ಜನ, ಜಾನುವಾರು, ಕುಡಿಯುವ ನೀರು ಹಾಗೂ ಅಚ್ಚುಕಟ್ಟು ಪ್ರದೇಶದ ರೈತರ ಉಪಯೋಗಕ್ಕಾಗಿ ನೀರು ಪೂರೈಸುವ ಜೊತೆಗೆ ಅಂತರ್ಜಲ ಮಟ್ಟದ ಸುಧಾರಣೆಗೂ ಅನುಕೂಲವಾಗಲಿದೆ. ಕಳೆದ ವರ್ಷ ಯೋಜನೆ ವ್ಯಾಪ್ತಿಯ ಎಲ್ಲ ಕೆರೆಗಳನ್ನು ತುಂಬಿಸಿರುವ ಕಾರಣ ಅನುಕೂಲವಾಗಿತ್ತು. ಈ ಬಾರಿ ಅವಧಿಗೆ ಮೊದಲೇ ಪಂಪ್ ಆರಂಭಿಸಲಾಗಿದ್ದು, ಕರಗಳಿಗೆ ನೀರು ಹರಿಸಲಾಗುತ್ತಿದೆ ಎಂದು ಹೇಳಿದರು.

Advertisements

“ನದಿ ನೀರು ಸದ್ಬಳಕೆ ಮಾಡಿಕೊಂಡು ಎಲ್ಲ ಕೆರೆಗಳನ್ನು ತುಂಬಿಸುವಂತೆ” ಇದೇ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ನೀರಾವರಿ ನಿಗಮದ ಎಇಇ ಪ್ರಹ್ಲಾದ ಶೆಟ್ಟಿ ಮಾತನಾಡಿ, “3250 ಎಚ್.ಪಿ. ಸಾಮರ್ಥ್ಯದ ಒಟ್ಟು 6 ಪಂಪುಗಳನ್ನು ಅಳವಡಿಸಲಾಗಿದ್ದು, ಸದ್ಯ ದಿನದ 22 ಗಂಟೆಗಳ ಕಾಲ ಒಂದು ಪಂಪು ನೀರು ಹರಿಸಲಿದೆ. ನೀರಿನ ಹರಿವು ಆಧರಿಸಿ ಇನ್ನುಳಿದ ಪಂಪುಗಳನ್ನು ಆರಂಭಿಸಲಾಗುವುದು. ವರದಾ ನದಿಯಿಂದ ಒಟ್ಟು 0.445 ಟಿಎಂಸಿ ನೀರನ್ನು ಎತ್ತಿ ಕೆರೆಗಳನ್ನು ತುಂಬಿಸಲಾಗುವುದು ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಜಿಪಂ ಮಾಜಿ ಸದಸ್ಯ ಮಿಯ್ಯಾಜಾನ್ ಕಂಬಳಿ, ತಾಪಂ ಮಾಜಿ ಅಧ್ಯಕ್ಷ ರಾಜೇಂದ್ರ ಬಾರ್ಕಿ, ಮುಖಂಡರಾದ ಫಕ್ಕೀರಪ್ಪ ಚಿಕ್ಕಜ್ಜನವರ, ಶಿವಣ್ಣ ಬಾರ್ಕಿ, ಮಂಜಣ್ಣ ತಡಸದ, ಬಸವರಾಜ ಚಲವಾದಿ, ದಿನೇಶ ಕಂಬಿ, ರುದ್ರಪ್ಪ ಹೇರೂರ, ದೇವೇಂದ್ರಪ್ಪ ಕತ್ತಿ, ಉಡುಚಪ್ಪ ಮಾಸಣಗಿ, ರಾಜೇಂದ್ರ ಜಿನ್ನಣ್ಣನವರ, ಗುಡ್ಡಣ್ಣ ಕೆಂಚಣ್ಣನವರ, ರಫೀಕ್ ಉಪ್ಪಣಸಿ ಜಗದೀಶ್ ಹರಿಜನ್  ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X