ಹಾವೇರಿ | ಕೆಲಸ ಮಾಡದ ಸಿಸಿ ಕ್ಯಾಮೆರಾಗಳು: ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ

Date:

ಹಾವೇರಿ ನಗರದ ಟ್ರಾಫಿಕ್ ಜಂಕ್ಷನ್‌ಗಳು, ಸೂಕ್ಷ್ಮ ಸ್ಥಳಗಳು ಮತ್ತು ಪ್ರಮುಖ ಸ್ಥಳಗಳಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳು ಕೆಟ್ಟುಹೋಗಿವೆ. ಹಾಳಾಗಿರುವ ಕ್ಯಾಮೆರಾಗಳನ್ನು ರಿಪೇರಿ ಮಾಡಿಸಲಾಗಿಲ್ಲ. ಸಿಸಿ ಕ್ಯಾಮೆರಾಗಳು ಕೆಲಸ ಮಾಡದೇ ಇರುವ ಅವಧಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದು ತಿಳಿದುಬಂದಿದೆ.

ನಗರದಲ್ಲಿ ಕಳೆದ ಎರಡು ವರ್ಷಗಳಲ್ಲಿ 38 ಸಿಸಿ ಕ್ಯಾಮೆರಾಗಳು ಸ್ಥಗಿತಗೊಂಡಿವೆ. ಈ ಅವಧಿಯಲ್ಲಿ ಸರಗಳ್ಳತನ, ದರೋಡೆ ಮತ್ತು ಸಂಚಾರ ನಿಯಮಗಳ ಉಲ್ಲಂಘನೆಯಂತಹ ಅಪರಾಧಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ.

ಕುತೂಹಲದ ಸಂಗತಿ ಎಂದರೆ, ಹಾವೇರಿ ನಗರ ಪಾಲಿಕೆಯ (ಸಿಎಂಸಿ) ಸಾಮಾನ್ಯ ಸಭೆಯು 2021ರಲ್ಲಿ ನಗರದ ಆಯ್ದ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು 25 ಲಕ್ಷ ರೂ. ವೆಚ್ಚದ ಯೋಜನೆಗೆ ಮಂಜೂರಾತಿ ನೀಡಿತ್ತು. ಮಂಜೂರಾತಿ ನೀಡಿ ಎರಡು ವರ್ಷ ಕಳೆದಿವೆ. ಆದರೂ, ನಗರದಲ್ಲಿ ಒಂದೇ ಒಂದು ಕ್ಯಾಮೆರಾ ಕೂಡ ಕಾರ್ಯನಿರ್ವಹಿಸುತ್ತಿಲ್ಲ. ಪಾಲಿಕೆಯು 2022ರಲ್ಲಿ ಕರ್ನಾಟಕ ಸ್ಟೇಟ್ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ಗೆ (ಕಿಯೊನಿಕ್ಸ್) ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಜವಾಬ್ದಾರಿ ನೀಡಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಿಯೊಜಿಕ್ಸ್‌ ಅಧಿಕಾರಿಗಳು ನಗರದಾದ್ಯಂತ ಕ್ಯಾಮೆರಾಗಳನ್ನು ಅಳವಡಿಸಲು ಇಬ್ಬರು ಗುತ್ತಿಗೆದಾರರನ್ನು ನೇಮಿಸಿದ್ದರು. ಆದರೆ, ಈ ಎರಡು ವರ್ಷಗಳ ಸುದೀರ್ಘ ಅವಧಿಯಲ್ಲಿ ಕೇವಲ ಆರು ಸಿಸಿ ಕ್ಯಾಮೆರಾಗಳನ್ನು ಮಾತ್ರ ಅಳವಡಿಸಲಾಗಿದೆ. ಸಿಸಿ ಕ್ಯಾಮೆರಾಗಳನ್ನು ಅಳವಡಿಸದ ಪರಿಣಾಮ, ನಗರದಲ್ಲಿ ಚೈನ್ ಸ್ನ್ಯಾಚಿಂಗ್, ಕಳ್ಳತನ ಮತ್ತು ಹಿಂಸಾಚಾರದಂತಹ ಅಪರಾಧಗಳನ್ನು ತಡೆಯಲು ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎಂದು ಹೇಳಲಾಗಿದೆ.

ಪೊಲೀಸ್ ಇಲಾಖೆಯು 2016-17ರಲ್ಲಿ ಹಲವು ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಿತ್ತು. ಆದರೆ ಈ ಎಲ್ಲ ಕ್ಯಾಮೆರಾಗಳು ದುರಸ್ತಿಯಲ್ಲಿವೆ. ಇತ್ತೀಚೆಗಷ್ಟೇ ಜನವರಿ 6ರಿಂದ 8ರವರೆಗೆ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಯದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಜಿಲ್ಲಾಧಿಕಾರಿಗೆ ಪೊಲೀಸ್ ಇಲಾಖೆ ಹೊಸದಾಗಿ ಮನವಿ ಸಲ್ಲಿಸಿತ್ತು. ಅದಾಗ್ಯೂ, ಸಿಸಿ ಕ್ಯಾಮೆರಾ ಅಳವಡಿಕೆ ಅನುಷ್ಠಾನಗೊಂಡಿರಲಿಲ್ಲ.

ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಕಾರಣದಿಂದಾಗಿ ಹಾವೇರಿ ನಗರದಲ್ಲಿ ಅಪರಾಧಗಳು, ಕಳ್ಳತನ ಪ್ರಕರಣಗಳು, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಿವೆ. ಕಳೆದ ಹಲವು ತಿಂಗಳುಗಳಿಂದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಹಗಲು ದರೋಡೆ ಪ್ರಕರಣಗಳ ಸಂಖ್ಯೆಯೂ ಹೆಚ್ಚಿದೆ. ಸಿಸಿ ಕ್ಯಾಮರಾಗಳಿಲ್ಲದೆ, ದೃಶ್ಯ ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣಗಳನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ₹10,000 ಲಂಚ ಪಡೆದಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಅಮಾನತು

“ನಾವು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು 123 ಸ್ಥಳಗಳನ್ನು ಗುರುತಿಸಿದ್ದೇವೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ವಿವರವಾದ ಕ್ರಿಯಾ ಯೋಜನೆಗಳನ್ನು ಸಲ್ಲಿಸಿದ್ದೇವೆ. ಇದನ್ನು ಕಾರ್ಯಗತಗೊಳಿಸಲು ನಾವು ಕಾಯುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಾವೇರಿ ನಗರದಲ್ಲಿ ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು ಎಂದು ಪಾಲಿಕೆ ಸದಸ್ಯ ಸಂಜೀವಕುಮಾರ ನೀರಲಗಿ ಭರವಸೆ ನೀಡಿದ್ದಾರೆ. ಶೀಘ್ರದಲ್ಲಿಯೇ ಸಮಸ್ಯೆ ಬಗೆಹರಿಯಲಿದೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜ್ವಲ್‌ ರೇವಣ್ಣ ಪ್ರಕರಣ ಯಾವುದೇ ಡಿಟರ್ಜೆಂಟ್‌ನಿಂದ ಹೋಗುವ ಕಲೆಯಲ್ಲ: ಮಾಜಿ ರಾಜ್ಯಸಭಾ ಸದಸ್ಯ ಜವರೇಗೌಡ

ದೇವೇಗೌಡ ಅವರ ಕುಟುಂಬದಿಂದ ಸಮಾಜದ ಮೇಲಾಗಿರುವ ಅತ್ಯಾಚಾರ, ದುರ್ನಡತೆಯನ್ನು ಯಾವುದೇ ನಾಗರಿಕರೂ...

ಎಂ.ಉಷಾ ಅವರ‌ ‘ಬಾಳ‌ ಬಟ್ಟೆ’ ಕಾದಂಬರಿಗೆ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ

ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು 2024ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಡಾ.ಎಂ.ಉಷಾ...

ತುಮಕೂರು | ಬಿಯರ್‌ ಬಾಟಲಿ ಹಿಡಿದು ಹೊಡೆದಾಡಿದ ಕೆಪಿಟಿಸಿಎಲ್‌ ಎಂಜಿನಿಯರ್‌ಗಳು

ತುಮಕೂರು ಜಿಲ್ಲೆಯ ಪಾವಗಡದ ಕೆಪಿಟಿಸಿಎಲ್‌ನ ಇಬ್ಬರು ಜೂನಿಯರ್‌ ಎಂಜಿನಿಯರ್‌ಗಳು ಹಾಗೂ ಇಬ್ಬರು...

ಬೆಂಗಳೂರು | ‘ಜಾಹೀರಾತು ಮುಕ್ತ ಅಭಿಯಾನ’ಕ್ಕೆ ಕೈ ಜೋಡಿಸಲು ನಾಗರಿಕರಲ್ಲಿ ಮನವಿ ಮಾಡಿದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ...