ಹಾವೇರಿ | ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಂದ ಸರ್ಕಾರಿ ಶಾಲೆಯ ಗೋಡೆಗಳಿಗೆ ಸುಣ್ಣ-ಬಣ್ಣ

Date:

ಬೇಸಿಗೆ ಕಾಲದಲ್ಲಿ ಅಂದ ಕಳೆದುಕೊಂಡ ಶಾಲೆಗೆ ಚಂದದ ಬಣ್ಣದ ಶೃಂಗಾರ ಲೇಪನ ಕಾರ್ಯ ಬರದಿಂದ ಸಾಗಿದೆ. ಇನ್ನೇನು ಇದೇ ತಿಂಗಳು ಮೇ 29ರಿಂದ ಸರ್ಕಾರಿ ಕನ್ನಡ ಶಾಲೆಗಳು ಪ್ರಾರಂಭಗೊಳ್ಳಲಿವೆ.‌ ವಿದ್ಯಾರ್ಥಿಗಳು ರಜೆ ಮುಗಿಸಿ ಶಾಲೆಗೆ ಬಂದರೆ ಅಚ್ಚರಿ ಪಡಿಸಲು ಎನ್‌ಎಸ್‌ಎಸ್ ಶಿಬಿರಾರ್ಥಿಗಳು ಶಾಲೆಗೆ ಹೊಸ ಬಣ್ಣ ಬಳಿಯುವ ಕೆಲಸ ಭರದಿಂದ ಸಾಗಿದೆ.

- Advertisement -

ಹಾವೇರಿ ಪಟ್ಟಣದ ಗುದ್ಲೆಪ್ಪ ಹಳ್ಳಿಕೇರಿ (ಜಿಎಚ್) ಕಾಲೇಜಿನಲ್ಲಿ ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಎನ್ಎಸ್ಎಸ್ ಯೋಜನೆಯ ಅಡಿಯಲ್ಲಿ ಸರ್ಕಾರಿ ಶಾಲೆಗಳಿಗೆ ಬಣ್ಣ ಹಚ್ಚುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಾವೇರಿ ತಾಲೂಕಿನ ತೋಟದಯಲ್ಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಡು ಬಿಟ್ಟಿರುವ ಎನ್ಎಸ್ಎಸ್ ಶಿಬಿರಾರ್ಥಿಗಳು ಶಾಲೆಯ ಹೊರಗಿನ ಗೋಡೆಗೆ ಬಣ್ಣ ಹಚ್ಚುತ್ತಿದ್ದಾರೆ. ಅಂದ ಕಳೆದುಕೊಂಡ ಬಣ್ಣವನ್ನು ಸ್ವಚ್ಛಗೊಳಿಸಿ, ಶಾಲೆ ಆರಂಭವಾಗುವ ಮುಂಚೆ ಶಿಬಿರಾರ್ಥಿಗಳು ಶಾಲೆಯ ಗೋಡೆಗೆ ಹೊಸಬಣ್ಣ ಬಳಿಯುತ್ತಿರುವ ಕಾರ್ಯ ನಡೆದಿದೆ.

ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಂದ ಬಣ್ಣ

ಶಾಲೆಗಳು ಇಂದಿನಿಂದ(ಮೇ 29) ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಅಂದ ಕಳೆದುಕೊಂಡ, ಬಣ್ಣ ಮಾಸಿದ ಗೋಡೆಯ ಶಾಲೆಗೆ ವಿದ್ಯಾರ್ಥಿಗಳು ಪ್ರವೇಶಿಸಲು ಸೂಕ್ತ ಅಲ್ಲದಿರುವುದರಿಂದ ಶಾಲೆಯ ಅಭಿವೃದ್ಧಿ ಮಂಡಳಿಯ ಸದಸ್ಯರು, ಶಿಕ್ಷಕರು ಚರ್ಚೆ ಮಾಡುತ್ತಿದ್ದಾರೆ. ಇವರೆಲ್ಲರ ಸಹಕಾರದಿಂದ ಎನ್ಎಸ್ಎಸ್ ಭಾಗವಾಗಿ ಶಾಲೆಗೆ ಸುಣ್ಣ-ಬಣ್ಣ ಬಳಿಯುವ ಕೆಲಸ ನಡೆದಿದೆ.

ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಂದ ಬಣ್ಣ 1

ರಾಷ್ಟೀಯ ಸೇವಾ ಯೋಜನೆ(ಎನ್‌ಎಸ್‌ಎಸ್)ಯ ಭಾಗವಾಗಿ “ಕನ್ನಡ ಶಾಲೆಗಳಗೆ ಬಣ್ಣ” ಶೀರ್ಷಿಕೆ ಅಡಿಯಲ್ಲಿ ಈಗಾಗಲೇ ಮೂರು ಸರ್ಕಾರಿ ಶಾಲೆಗಳು ಹಾವೇರಿ ಪಟ್ಟಣದ ಮುನ್ಸಿಪಲ್ ಶಾಲೆ, ಕಳ್ಳಿಹಾಳ, ತೇವರಮೆಳ್ಳಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಮಾಸಿದ ಗೋಡೆಗಳಿಗೆ ಬಣ್ಣ ಬಳಿಯಲಾಗಿದೆ. ನಾಲ್ಕನೆಯದಾಗಿ ತೋಟದಯಲ್ಲಾಪುರ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಗೋಡೆಗೂ ಬಣ್ಣ ಬಲಿಯಾಲಾಗುತ್ತಿದೆ.

ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಂದ ಬಣ್ಣ 2

ಶಾಲೆಗೆ ಬಣ್ಣ ಬಳಿಯಲು ಹದಿನೆಂಟು ಸಾವಿರ ವೆಚ್ಚ

“ಒಂದು ಶಾಲೆಗೆ ಬಣ್ಣ ಬಳಿಯಲು ಸುಮಾರು ಹದಿನೆಂಟು ಸಾವಿರ ರೂಪಾಯಿ ವೆಚ್ಚ ಆಗಲಿದೆ. ಇದನ್ನು ನಿರ್ವಹಿಸಲು ಎನ್ಎಸ್ಎಸ್ ಯೋಜನೆಯಿಂದ ಪ್ರತಿ ತಿಂಗಳು ಆರು ಸಾವಿರ ಗೌರವ ಧನ ನೀಡುತ್ತಾರೆ. ಹಾಗೆಯೇ ದಾನಿಗಳು, ಶಿಕ್ಷಕರ ಸಹಾಯಧನವನ್ನು ಕನ್ನಡ ಶಾಲೆಗಳಿಗೆ ಬಣ್ಣ ಹಚ್ಚಲು ಬಳಸಿಕೊಳ್ಳುತ್ತೇವೆ” ಎಂದು ಎನ್‌ಎಸ್‌ಎಸ್ ಸಂಯೋಜಕರು ತಿಳಿಸಿದರು.

ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಂದ ಬಣ್ಣ 3

ವಾರ್ಲಿ ಚಿತ್ರ ಕಲೆಗಳು : ವಿದ್ಯಾರ್ಥಿಗಳನ್ನು ಆಕರ್ಷಿಸಲು ಗೋಡೆಯ ಮೇಲೆ ವಾರ್ಲಿ ಚಿತ್ರಗಳನ್ನು ಬಿಡಿಸಲಾಗುತ್ತದೆ. ಜಾನಪದ ಸಾಂಸ್ಕೃತಿಕತೆಯನ್ನು ಪ್ರತಿಬಿಂಬಿಸುವ ಚಿತ್ರಗಳನ್ನು ಬರೆಯಲಿದ್ದಾರೆ. ಹಾಗೆ ರೇಖಾಚಿತ್ರಗಳು ಗೋಡೆಯ ಮೇಲೆ ಮೂಡಲಿವೆ.

“ರಾಷ್ಟೀಯ ಸೇವಾ ಯೋಜನೆಯ(ಎನ್ಎಸ್ಎಸ್) ಮೂಲಕ  ಸಾಮಾಜಮುಖಿ ಕಾರ್ಯವನ್ನು ಹೇಗೆಲ್ಲ ಮಾಡಲು ಸಾಧ್ಯ ಎಂಬುದರ ಆಲೋಚನೆಯಲ್ಲಿ ನಾವು ಕನ್ನಡ ಶಾಲೆಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಾಲೆಯ ಅಂದ ಚಂದವು ಮಹತ್ವದ್ದಾಗಿರುತ್ತದೆ. ಹಾಗಾಗಿ ಕನ್ನಡ ಶಾಲೆಗಳ ಮಾಸಿದ ಗೋಡೆಗಳಿಗೆ ಎನ್ಎಸ್ಎಸ್ ಮೂಲಕ ಕಾಲೇಜಿನ ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಶಾಲೆಗೆ ಬಣ್ಣ ಬಳಿಯುವ ಕಾರ್ಯ ಮಾಡುತ್ತಿದ್ದಾರೆ” ಎನ್ನುತ್ತಾರೆ ಎನ್ಎಸ್ಎಸ್ ಯೋಜನಾ ಅಧಿಕಾರಿ.

ಇದನ್ನೂ ಓದಿದ್ದೀರಾ? ಬೀದರ್‌ | ಬಸವತತ್ವಕ್ಕೆ ಬದ್ಧರಾಗಿ ಬದುಕೋಣ : ಶಶಿಕಾಂತ ಶೆಂಬೆಳ್ಳಿ

ಈ ಕುರಿತು ಎನ್‌ಎಸ್‌ಎಸ್ ಯೋಜನಾ ಅಧಿಕಾರಿ ಡಾ. ಶಮಂತಕುಮಾರ್ ಕೆ ಎಸ್ ಈ ದಿನ.ಕಾಮ್ ಜತೆಗೆ ಮಾತನಾಡಿ, “ಖಾಸಗಿ ಶಾಲೆಗಳಿಗಿಂತ ಕನ್ನಡ ಶಾಲೆಗಳು ಮಕ್ಕಳನ್ನು ಆಕರ್ಷಿಸುವ ಉದ್ದೇಶದಿಂದ ಕನ್ನಡ ಶಾಲೆಗಳಿಗೆ ಬಣ್ಣ ಬಳಿದು ಅಂದ ಹೆಚ್ಚಿಸುತ್ತಿದ್ದೇವೆ” ಎನ್ನುತ್ತಾರೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...