ಕರ್ತವ್ಯ ಲೋಪ ಎಸಗಿದ್ದಕ್ಕಾಗಿ ಪಿಡಿಒ ರವಿಕುಮಾರ ಎಚ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲ್ಲೂಕಿನ ರಾಹುತನಕಟ್ಟಿಯ ಕಾಯಂ ಪಿಡಿಒ ಆಗಿದ್ದ ರವಿಕುಮಾರ ಅವರಿಗೆ, ಮೆಟ್ಟೇರಿ ಗ್ರಾಮ ಪಂಚಾಯಿತಿಯ ಪ್ರಭಾರ ಜವಾಬ್ದಾರಿಯನ್ನು ವಹಿಸಲಾಗಿತ್ತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ರುಚಿ ಬಿಂದಲ್ ಅವರು ಇತ್ತೀಚೆಗೆ ಮೆಟ್ಟೇರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಿಡಿಒ ಹಾಜರಿರಲಿಲ್ಲ. ರಾಹುತನಕಟ್ಟಿ ಗ್ರಾಮ ಪಂಚಾಯಿತಿಯಲ್ಲಿ ವಿಚಾರಿಸಿದಾಗ, ಅಲ್ಲಿಯೂ ಪಿಡಿಒ ಇರಲಿಲ್ಲ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬಾಲ್ಯವಿವಾಹ ತಡೆಗೆ ಗ್ರಾಮಮಟ್ಟದಲ್ಲಿ ಕಾರ್ಯಕ್ರಮ ರೂಪಿಸುವ ಅಗತ್ಯವಿದೆ; ಮಕ್ಕಳ ಹಕ್ಕುಗಳ ರಕ್ಷಣಾ ಹೋರಾಟಗಾರರು
ಕೇಂದ್ರ ಸ್ಥಾನದಲ್ಲಿರದೇ ಕರ್ತವ್ಯ ಲೋಪ ಎಸಗಿದ್ದಕ್ಕಾಗಿ ಪಿಡಿಒ ರವಿಕುಮಾರ ಅವರನ್ನು ಅಮಾನತುಗೊಳಿಸಿ ಸಿಇಒ ರುಚಿ ಅವರು ಆದೇಶ ಹೊರಡಿಸಿದ್ದಾರೆ.
